Yuvavahini

NOV 22, 2026 9.00 PM IST

ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಗುರುತತ್ವವಾಹಿನಿ ಮಾಲಿಕೆ 88

ಗುರುತತ್ವದ ಅರಿವಿನೊಂದಿಗೆ ಆತ್ಮಾವಲೋಕನದ ಅಗತ್ಯ : ರೇಣುಕಾ ಕಣಿಯೂರು

ಅಗಲ್ದೋಡಿ ಇರ್ವತ್ತೂರು, ನ. 22: ಶಿಕ್ಷಣ, ಧರ್ಮ ಮತ್ತು ಧಾರ್ಮಿಕ ಆಚರಣೆಗಳಲ್ಲಿ ಎಲ್ಲರಿಗೂ ಸಮಾನ ಹಕ್ಕು ದೊರೆಯಬೇಕೆಂದು ಪ್ರತಿಪಾದಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಗುರುಗಳ ತತ್ವ, ಆದರ್ಶ ಮತ್ತು ಸಂದೇಶಗಳನ್ನು ನಮ್ಮ ಬದುಕಿನಲ್ಲಿ ಎಷ್ಟರಮಟ್ಟಿಗೆ ಅನುಷ್ಠಾನಗೊಳಿಸಿದ್ದೇವೆ ಎಂಬ ಬಗ್ಗೆ ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದು ಬರಹಗಾರ್ತಿ ಹಾಗೂ ನಿರೂಪಕಿ ರೇಣುಕಾ ಕಣಿಯೂರು ತಿಳಿಸಿದರು.

ಅವರು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ನವೆಂಬರ್ 22ರಂದು ಇರ್ವತ್ತೂರು ಅಗಲ್ದೋಡಿಯ ಶೇಖರ ಪೂಜಾರಿಯವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 88ರಲ್ಲಿ ಗುರುಸಂದೇಶ ನೀಡಿದರು.

ಗುರುಗಳ ಜಯಂತಿ ಆಚರಣೆ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ಭಾಷಣಗಳಿಗೆ ಮಾತ್ರ ನಮ್ಮ ಗೌರವ ಸೀಮಿತವಾಗಬಾರದು. ಅವರ ಸಮಾನತೆ, ಸಹೋದರತೆ, ಶಿಕ್ಷಣ ಮತ್ತು ಮಾನವೀಯತೆಯ ಚಿಂತನೆಗಳು ನಮ್ಮ ನಡೆ-ನುಡಿಗಳಲ್ಲಿ ಪ್ರತಿಬಿಂಬಿಸಬೇಕು. ಗುರುಗಳ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಅಭಿಪ್ರಾಯಪಟ್ಟರು. ಭಜನಾ ಸಂಕೀರ್ತನೆಯಲ್ಲಿ ಸಾತ್ವಿಕ್ ದೇರಾಜೆ , ಕಾರ್ತಿಕ್ ದೇರಾಜೆ ಸಂಗೀತ ಸೇವೆ ನೀಡಿದರು. ಆತಿಥ್ಯ ವಹಿಸಿದ ಶೇಖರ್ ಪೂಜಾರಿ ಅಗಲ್ದೋಡಿ ಇವರು ಆಗಮಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.

ಯುವವಾಹಿನಿ ಬಂಟ್ವಾಳ ಘಟಕದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಮಾಜಿ ಅಧ್ಯಕ್ಷರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ಮಹೇಶ್ ಬೊಳ್ಳಾಯಿ ಧನ್ಯವಾದ ನೀಡಿದರು.
ಅಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : ನವೆಂಬರ್ 20, 2026
ಸ್ಥಳ : ಅಡ್ಯಾರ್ ಗಾರ್ಡನ್ ಮಂಗಳೂರು

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ

ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು – ಸಮಾಜಮುಖಿ ಸೇವೆಗೆ ಶಾಶ್ವತ ಕೇಂದ್ರದ ಸಾರ್ಥಕ ಕನಸು ನನಸು ಮಂಗಳೂರು ನ 15 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಬಹುದಿನಗಳ ಕನಸಾದ ನೂತನ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ನವೆಂಬರ್...

Sunday, 15-11-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರಿಗೆ 2026ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ

ಉಡುಪಿ ನ 01 : “ವಿದ್ಯೆ, ಉದ್ಯೋಗ, ಸಂಪರ್ಕ” ಎಂಬ ಧ್ಯೇಯವಾಕ್ಯದೊಂದಿಗೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಜನಪರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಉಡುಪಿ ಘಟಕದ...

Sunday, 01-11-2026

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
error: Content is protected !!