Yuvavahini

NOV 22, 2026 2.00 PM IST

ಯುವವಾಹಿನಿ ಸುಳ್ಯ ಘಟಕದ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ

ವಿದ್ಯೆ ಮತ್ತು ಸಂಸ್ಕಾರಕ್ಕೆ ಆದ್ಯತೆ ನೀಡಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ : ಜಯಂತ ನಡುಬೈಲು

ಸುಳ್ಯ ನ 22 : ಯುವವಾಹಿನಿ (ರಿ.) ಸುಳ್ಯ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ನವೆಂಬರ್ 22ರಂದು ಸುಳ್ಯ ಕನ್ನಡ ಭವನದಲ್ಲಿ ನಡೆಯಿತು.

ಪುತ್ತೂರು ಅಕ್ಷಯ ಸಮೂಹ ಸಂಸ್ಥೆಯ ಅಧ್ಯಕ್ಷ ಜಯಂತ ನಡುಬೈಲು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಯುವವಾಹಿನಿ ಸುಳ್ಯ ಘಟಕದ ಕಾರ್ಯಚಟುವಟಿಕೆಗಳನ್ನು ಪ್ರಶಂಸಿಸಿದ ಅವರು, ಯುವವಾಹಿನಿಯ ಯುವಕರು ಸ್ವಾರ್ಥರಹಿತವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ವಿದ್ಯೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಬೆಳೆಸುವ ಜವಾಬ್ದಾರಿಯನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು ಎಂದು ತಿಳಿಸಿದರು.

ಯುವವಾಹಿನಿ (ರಿ.) ಸುಳ್ಯ ಘಟಕದ ಅಧ್ಯಕ್ಷ ಮಹೇಶ್ ಕಲ್ಲಪಣೆ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷರು, ಆಯ್ಕೆ ಸಮಿತಿಯ ಸಂಚಾಲಕರಾದ ಹರೀಶ್ ಕಾವಿನಮೂಲೆ ನೂತನ ಕಾರ್ಯಕಾರಿ ಸಮಿತಿಯನ್ನು ಸಭೆಗೆ ಪರಿಚಯಿಸಿದರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ನೂತನ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

2026–27ನೇ ಸಾಲಿನ ನೂತನ ಅಧ್ಯಕ್ಷರಾಗಿ ನೂತನ ಪ್ರವೀಣ್ ನೆಟ್ಟಾರು, ಕಾರ್ಯದರ್ಶಿಯಾಗಿ ಹರೀಶ್ ದೋಳ, ಉಪಾಧ್ಯಕ್ಷರಾಗಿ ನವೀನ್ ಕುಮಾರ್ ರಾಮಕುಮೇರಿ ಹಾಗೂ ಕೋಶಾಧಿಕಾರಿಯಾಗಿ ರಂಜಿತ್ ದರ್ಖಾಸ್ತು ಸೇರಿದಂತೆ ನೂತನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಸುಳ್ಯ ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣಕುಮಾರ್ ಅಲೆಕ್ಕಾಡಿ ಮುಖ್ಯ ಅತಿಥಿಯಾಗಿ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಅಂಗಣ, ನಾರಾಯಣ ಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಲೋಹಿತ್ ರೆಂಜಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹರೀಶ್ ಕೆ. ಪೂಜಾರಿ, ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್, ಮಹಿಳಾ ಸಂಘಟನಾ ನಿರ್ದೇಶಕಿ ಸುಧಾ ಸುರೇಶ್, ಪ್ರಚಾರ ನಿರ್ದೇಶಕ ಶಿವಪ್ರಸಾದ್ ನೂಚಿಲ, ಆಂತರಿಕ ಲೆಕ್ಕ ಪರಿಶೋಧಕ ಸುಂದರ ಸುವರ್ಣ ಕೊಲ್ಯ, ಸಂಘಟನಾ ಕಾರ್ಯದರ್ಶಿಗಳಾದ ನಾಗೇಶ್ ಕೊಂಕಣಪದವು, ಜಯರಾಮ್ ಪುತ್ತೂರು, ಪುತ್ತೂರು ಘಟಕದ ಮಾಜಿ ಅಧ್ಯಕ್ಷ ಶಶಿಧರ್ ಕಿನ್ನಿಮಜಲು, ಅಣ್ಣಿ ಪೂಜಾರಿ, ಊಮೇಶ್ ಬಾಯಾರು, ನಿಯೋಜಿತ ಅಧ್ಯಕ್ಷ ಅವಿನಾಶ್ ಪುತ್ತೂರು, ಸುರೇಶ್ ಪುತ್ತೂರು, ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಸುರೇಶ್, ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷ ಚಂದ್ರಶೇಖರ ಸನಿಲ್ ಹಾಗೂ ಕಡಬ ಘಟಕದ ನಿಯೋಜಿತ ಕಾರ್ಯದರ್ಶಿ ಧನಂಜಯ ಮರ್ದಾಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು.

ಸುಳ್ಯ ಘಟಕದ ಮಾಜಿ ಅಧ್ಯಕ್ಷ ಚಂದ್ರಶೇಖರ ಹೈದಂಗೂರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಶಾ ಬಾಜಿನಡ್ಕ ಪ್ರಾರ್ಥಿಸಿದರು. ಹರೀಶ್ ದೋಳ ವಂದಿಸಿದರು. ಚಂದ್ರಶೇಖರ ಹೈದಂಗೂರು ಮತ್ತು ಹರ್ಷಿತಾ ಚೇತನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : ನವೆಂಬರ್ 20, 2026
ಸ್ಥಳ : ಅಡ್ಯಾರ್ ಗಾರ್ಡನ್ ಮಂಗಳೂರು

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ

ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು – ಸಮಾಜಮುಖಿ ಸೇವೆಗೆ ಶಾಶ್ವತ ಕೇಂದ್ರದ ಸಾರ್ಥಕ ಕನಸು ನನಸು ಮಂಗಳೂರು ನ 15 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಬಹುದಿನಗಳ ಕನಸಾದ ನೂತನ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ನವೆಂಬರ್...

Sunday, 15-11-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರಿಗೆ 2026ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ

ಉಡುಪಿ ನ 01 : “ವಿದ್ಯೆ, ಉದ್ಯೋಗ, ಸಂಪರ್ಕ” ಎಂಬ ಧ್ಯೇಯವಾಕ್ಯದೊಂದಿಗೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಜನಪರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಉಡುಪಿ ಘಟಕದ...

Sunday, 01-11-2026

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
error: Content is protected !!