Yuvavahini

NOV 22, 2026 9.00 PM IST

ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ತುಳಸಿ ವೈಭವ

ಭಕ್ತಿ, ಪ್ರಕೃತಿ ಆರಾಧನೆ ಮತ್ತು ಬದುಕಿನ ಮೌಲ್ಯಗಳ ಸಂಗಮವೇ ತುಳಸಿ ವೈಭವ : ರಮೇಶ್ ಉಳಯ

ಮಾಣಿ ನ 22 : ತುಳಸಿ ಪೂಜೆ ಹಾಗೂ ಉತ್ಥಾನ ದ್ವಾದಶಿಯ ಆಚರಣೆಯು ಕೇವಲ ಧಾರ್ಮಿಕ ವಿಧಿವಿಧಾನಕ್ಕೆ ಸೀಮಿತವಾಗದೆ, ಭಕ್ತಿ, ಪ್ರಕೃತಿ ಆರಾಧನೆ ಮತ್ತು ಬದುಕಿನ ಉನ್ನತ ಮೌಲ್ಯಗಳನ್ನು ಬೆಸೆಯುವ ಪವಿತ್ರ ಸಂಪ್ರದಾಯವಾಗಿದೆ ಎಂದು ಚಿಂತಕ ರಮೇಶ್ ಉಳಯ ಅಭಿಪ್ರಾಯಪಟ್ಟರು. ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ನವೆಂಬರ್ 22ರಂದು ಬಾಕಿಲದ ‘ಶ್ರೀ ಸಾಯಿದುರ್ಗಾ ನಿಲಯ’ದಲ್ಲಿ ಆಯೋಜಿಸಲಾಗಿದ್ದ ‘ತುಳಸಿ ವೈಭವ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ನಿವೃತ್ತ ಕೆಎಸ್‌ಆರ್‌ಟಿಸಿ ಕುಶಲಕರ್ಮಿ ಸುನಿಲ್ ಕುಮಾರ್ ಬಿ.ಕೆ. ಮಾತನಾಡಿ, ಹಿರಿಯರು ಪಾಲಿಸಿಕೊಂಡು ಬಂದ ಆಚಾರ-ವಿಚಾರ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಯುವವಾಹಿನಿ ಘಟಕವು ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳು ಶ್ಲಾಘನೀಯ ಎಂದರು.

ಸಭಾ ಕಾರ್ಯಕ್ರಮಕ್ಕೂ ಮುನ್ನ ಯುವವಾಹಿನಿ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಸುರೇಶ್ ಶಾಂತಿ ಅವರ ಪೌರೋಹಿತ್ಯದಲ್ಲಿ ತುಳಸಿ ಪೂಜೆಯನ್ನು ವಿಧಿವತ್ತಾಗಿ ನೆರವೇರಿಸಲಾಯಿತು. ಕಾರ್ಯಕ್ರಮಕ್ಕೆ ಆತಿಥ್ಯ ವಹಿಸಿದ್ದ ಪುರುಷೋತ್ತಮ ದಂಪತಿಯನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಆಂಬುಲೆನ್ಸ್ ಸೇವಾರ್ಥ ಆಯೋಜಿಸಲಾಗಿದ್ದ ಲಕ್ಕಿ ಡಿಪ್ ಡ್ರಾವನ್ನು ಇದೇ ಸಂದರ್ಭದಲ್ಲಿ ನಡೆಸಲಾಯಿತು. ವೇದಿಕೆಯಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ಮಾಣಿ ಶ್ರೀ ನಾರಾಯಣ ಗುರು ಸಹಕಾರ ಸಂಘದ ಅಧ್ಯಕ್ಷ ನಾರಾಯಣ ಸಾಲಿಯಾನ್, ಕಾರ್ಯಕ್ರಮದ ಸಂಚಾಲಕ ಸುಜಿತ್ ಪೂಜಾರಿ ಬಾಕಿಲ, ಮೋಹನ್ ಪೂಜಾರಿ ಮುಜಲ ಹಾಗೂ ಲೋಕನಾಥ ತಿಮರಾಜೆ ಉಪಸ್ಥಿತರಿದ್ದರು.

ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ಹರೀಶ್ ಬಾಕಿಲ, ಮಾಜಿ ಅಧ್ಯಕ್ಷರಾದ ರಾಜೇಶ್ ಪೂಜಾರಿ ಬಾಬನಕಟ್ಟೆ, ರಮೇಶ್ ಪೂಜಾರಿ ಮುಜಲ, ಜಯಂತ ಬರಿಮಾರು, ನಾಗೇಶ್ ಕೊಂಕಣಪದವು, ಶಿವರಾಜ್ ಪಿ.ಆರ್., ಘಟಕದ ಪ್ರಥಮ ಉಪಾಧ್ಯಕ್ಷ ಸುಜಿತ್ ಅಂಚನ್ ಸೇರಿದಂತೆ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ಗಣೇಶ್ ಪೂಜಾರಿ ಕೊಡಾಜೆ ಸ್ವಾಗತಿಸಿದರು. ಕಾರ್ಯದರ್ಶಿ ವಿಶ್ವನಾಥ ಪೂಜಾರಿ ವಂದಿಸಿದರು. ಪ್ರಶಾಂತ್ ಬಿ. ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : ನವೆಂಬರ್ 20, 2026
ಸ್ಥಳ : ಅಡ್ಯಾರ್ ಗಾರ್ಡನ್ ಮಂಗಳೂರು

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿಯ ನೂತನ ಆಡಳಿತ ಕಚೇರಿ ಲೋಕಾರ್ಪಣೆ

ನಾಲ್ಕು ದಶಕಗಳ ಸಂಘಟನಾ ಪಯಣದಲ್ಲಿ ಐತಿಹಾಸಿಕ ಮೈಲಿಗಲ್ಲು – ಸಮಾಜಮುಖಿ ಸೇವೆಗೆ ಶಾಶ್ವತ ಕೇಂದ್ರದ ಸಾರ್ಥಕ ಕನಸು ನನಸು ಮಂಗಳೂರು ನ 15 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಬಹುದಿನಗಳ ಕನಸಾದ ನೂತನ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ನವೆಂಬರ್...

Sunday, 15-11-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರಿಗೆ 2026ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ

ಉಡುಪಿ ನ 01 : “ವಿದ್ಯೆ, ಉದ್ಯೋಗ, ಸಂಪರ್ಕ” ಎಂಬ ಧ್ಯೇಯವಾಕ್ಯದೊಂದಿಗೆ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಜನಪರ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ.) ಉಡುಪಿ ಘಟಕದ...

Sunday, 01-11-2026

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
error: Content is protected !!