Yuvavahini

AUG 10, 2014 11.56 AM IST

ಯುವವಾಹಿನಿ ಯುವ ಸಾಧನಾ ಪುರಸ್ಕಾರ -2014

ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟರ್ ಶ್ರೀ ವಿನೋದ್‍ರಾಜ್

ಅಂತರಾಷ್ಟ್ರೀಯ ಮಟ್ಟದ ಪವರ್ ಲಿಫ್ಟರ್ ಶ್ರೀ ವಿನೋದ್‍ರಾಜ್

ಏಕಾಗ್ರತೆ ಮತ್ತು ದೈಹಿಕ ಕ್ಷಮತೆಯ ಕ್ಷೇತ್ರವಾಗಿರುವ ಪವರ್‍ಲಿಫ್ಟಿಂಗ್ ವಿಭಾಗದ , ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಹತ್ತಕ್ಕೂ ಅಧಿಕ ಚಿನ್ನದ ಪದಕವನ್ನು ಪಡೆದು ರಾಷ್ಟ್ರಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತಂದಿರುವ ಒಬ್ಬ ಅಪೂರ್ವ ಸಾಧಕ ಶ್ರೀ ವಿನೋದ್ ರಾಜ್‍ಇವರು, ವಾಮಂಜೂರು ನಿವಾಸಿ ವಿಠಲ ಇವರ ಸುಪುತ್ರರಾಗಿರುವ ವಿನೋದ್ ರಾಜ್ ಬಿ.ಕಾಂ ಪದವೀಧರರು. ಶಿಕ್ಷಣದ ಜೊತೆ ಜೊತೆ ಇವರನ್ನು ಬಹುವಾಗಿ ಆಕರ್ಷಿಸಿದ ಮತ್ತೊಂದು ಕ್ಷೇತ್ರ ಎಂದರೆ ಅದು ಪವರ್‍ಲಿಫ್ಟಿಂಗ್.ಕೇವಲ 25ರಹರೆಯದ ಯುವಕ ಇಂದು ಹತ್ತಕ್ಕೂ ಅಧಿಕ ಅಂತರಾಷ್ಟ್ರೀಯ ಚಿನ್ನದ ಪದಕ ಪಡೆದ ಅಪೂರ್ವ ಸಾಧಕ.
2009 ರಿಂದ ಆರಂಭಗೊಂಡಿರುವ ಇವರ ಬಂಗಾರದ ಬೇಟೆ ಅದು ಇಂದಿಗೂ ನಿಂತ್ತಿಲ್ಲ. 2009 ರಲ್ಲಿ ಪಾಂಡಿಚೇರಿಯಲ್ಲಿ ನಡೆದ ಸೌತ್‍ಇಂಡಿಯಾ ಪವರ್‍ಲಿಫ್ಟಿಂಗ್‍ನಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕ ಪಡೆಯುವ ಮೂಲಕ ಆರಂಭಗೊಂಡ ಇವರ ವಿಜಯ ನಡಿಗೆ ಇಂದಿಗೂ ವಿರಮಿಸದೆ ಸಾಗುತ್ತಿದೆ. ಮೊದಲ ಬಾರಿಗೆ ಬೆಳ್ಳಿಯ ಪದಕ ಪಡೆದ ಇವರು ಮರು ವರುಷದಲ್ಲಿ ತಮಿಳುನಾಡಿನಲ್ಲಿ ನಡೆದ ಸೌತ್‍ಇಂಡಿಯಾ ಪವರ್‍ಲಿಫ್ಟಿಂಗ್‍ನಲ್ಲಿ ಹಿಂದಿನ ಸಾಧನೆಯನ್ನು ಮುರಿದು ಚಿನ್ನದ ಪದಕವನ್ನು ಪಡೆದಿದ್ದರು. ಇವರು ಮತ್ತೆಂದು ಹಿಂದಿರುಗಿ ನೋಡಲೇ ಇಲ್ಲ. ಪ್ರತಿ ವರುಷವೂ ಬಿರುಸು ಪಡೆಯುತ್ತಿದ್ದ ಇವರ ನಡಿಗೆಗೆ ಇಂದು ಹತ್ತು ಚಿನ್ನದ ಪದಕ, ನಾಲ್ಕು ಬೆಳ್ಳಿಯ ಪದಕ ಪಡೆಯಲು ಕಾರಣವಾಗಿದೆ.
ದೇಶದ ಬೇರೆ ಬೇರೆ ರಾಜ್ಯ ಮಾತ್ರವಲ್ಲದೆ ದೇಶದಾಚೆಗಿನ ನಾಡಿನಲ್ಲೂ ತನ್ನ ಪ್ರೌಢಿಮೆ ಮೆರೆದಿರುವ ಶ್ರೀ ವಿನೋದ್ ರಾಜ್ ಇವರನ್ನು ಯುವವಾಹಿನಿಯ 27ನೇ ವಾರ್ಷಿಕ ಸಮಾವೇಶದಲ್ಲಿ 2014ನೇ ಸಾಲಿನ ಯುವವಾಹಿನಿ ‘ಯುವ ಸಾಧನ ಪ್ರಶಸ್ತಿ’ಯನ್ನು ನೀಡಿ ಗೌರವಿಸಲು ಯುವವಾಹಿನಿಯು ಸಂತೋಷ ಪಡುತ್ತಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!