ಯುವವಾಹಿನಿಯು ಶಿಸ್ತುಬದ್ದ ಸಂಘಟನೆಯಾಗಿ ಕಳೆದ 30 ವರ್ಷಗಳಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಬಿಲ್ಲವ ಸಮಾಜದ ಪ್ರಬುದ್ಧ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಕರ್ನಾಟಕ ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರನಾಥ ಪೂಜಾರಿ ತಿಳಿಸಿದರು
ಮಂಗಳೂರು ನಗರದ ಹೃದಯ ಭಾಗವಾದ ಉರ್ವಸ್ಟೋರ್ ರಘು ಬಿಲ್ಡಿಂಗ್ ನಲ್ಲಿ ಯುವವಾಹಿನಿ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ಕರ್ನಾಟಕ ಹೈಕೋರ್ಟು ಸರಕಾರಿ ವಕೀಲರಾದ ಇರುವೈಲು ತಾರನಾಥ ಪೂಜಾರಿ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು
ಅವರು ಮಂಗಳೂರು ನಗರದ ಹೃದಯ ಭಾಗವಾದ ಉರ್ವಸ್ಟೋರ್ ರಘು ಬಿಲ್ಡಿಂಗ್ ನಲ್ಲಿ ದಿನಾಂಕ 28.05.2017 ರಂದು ಅತ್ಯಂತ ಸುಸಜ್ಜಿತವಾದ ಹಾಗೂ ವಿಶಾಲವಾದ ಯುವವಾಹಿನಿ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕೇರಳ ವರ್ಕಳದ ಶಿವಗಿರಿ ಮಠದ ಪರಮಪೂಜ್ಯ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿ ಮಾತನಾಡಿ ಯುವವಾಹಿನಿಯು ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವ ಸಂದೇಶಗಳ ಅನುಸಾರ ವಿದ್ಯೆ, ಉದ್ಯೋಗ, ಸಂಪರ್ಕ ದ ಮೂಲಕ ಯುವಜನತೆಯಲ್ಲಿ ಸದಾ ಜಾಗೃತಿ ಮೂಡಿಸಿ ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದೆ .ಅತ್ಯಂತ ಸುಸಜ್ಜಿತವಾದ, ಸುಂದರವಾದ ಯುವವಾಹಿನಿ ಸಭಾಂಗಣವು ಸರ್ವರ ಮನಸೂರೆಗೊಂಡಿರುವುದು ಶ್ಲಾಘನೀಯ.ಯುವವಾಹಿನಿಯ ನೂತನ ಸಭಾಂಗಣದಲ್ಲಿ ಯುವವಾಹಿನಿಯ ಎಲ್ಲಾ ಕನಸುಗಳು ಸಾಕಾರಗೊಳ್ಳಲಿ ಎಂದು ಹಾರೈಸಿದರು.
ರಘು ಬಿಲ್ಡಿಂಗ್ ಮಾಲಕರಾದ ಶ್ರೀಮತಿ ಎಮ್.ಶಶಿಕಲಾ ಯುವವಾಹಿನಿ ಸಭಾಂಗಣ ಉದ್ಘಾಟಿಸಿದರು.
ರಘ ಬಿಲ್ಡಿಂಗ್ ಕಟ್ಟಡದ ಮಾಲಕರಾದ ಶ್ರೀಮತಿ ಎಮ್.ಶಶಿಕಲಾ ಯುವವಾಹಿನಿ ಸಭಾಂಗಣವನ್ನು ಉದ್ಘಾಟಿಸಿದರು.ಹಾಗೂ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಮಾಲಕರಾದ ಉಮೇಶ್ ಕೇಂದ್ರ ಸಮಿತಿಯ ಕಛೇರಿ ಉದ್ಘಾಟಿಸಿದರು.
ಉದ್ಯಮಿ ದಿವಾಕರ್ ಕೇಂದ್ರ ಸಮಿತಿ ಕಛೇರಿಯ ಕಂಪ್ಯೂಟರ್ ವಿಭಾಗವನ್ನು ಯುವವಾಹಿನಿ ವೆಬ್ ಸೈಟ್ www.yuvavahini.in ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು
ಉದ್ಯಮಿ ದಿವಾಕರ್ ಕೇಂದ್ರ ಸಮಿತಿ ಕಛೇರಿಯ ಕಂಪ್ಯೂಟರ್ ವಿಭಾಗವನ್ನು ಯುವವಾಹಿನಿ ವೆಬ್ ಸೈಟ್ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು. ವಾಸ್ತು ತಜ್ಞರಾದ ರಾಜ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷರಾದ ಪದ್ಮನಾಭ ಮರೋಳಿ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು .
ಕಾರ್ಯಕ್ರಮದ ಸಂಚಾಲಕರಾದ ಹರೀಶ್ ಕೆ.ಪೂಜಾರಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಕಾರ್ಯದರ್ಶಿ ಪ್ರವೀಣ್ ಸಾಲ್ಯಾನ್ ಕಿರೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯುವವಾಹಿನಿ ಸಭಾಂಗಣ ನಿರ್ಮಾಣದಲ್ಲಿ ಅವಿರತವಾಗಿ ಶ್ರಮಿಸಿದ ಯುವವಾಹಿನಿ (ರಿ) ಮಂಗಳೂರು ಘಟಕದ ರಜತವರ್ಷದ ಅಧ್ಯಕ್ಷರಾದ ಯಶವಂತ ಪೂಜಾರಿ ಮಾಲೆಮಾರ್ ಇವರನ್ನು ಅಭಿನಂದಿಸಲಾಯಿತು
ಯುವವಾಹಿನಿ ಸಭಾಂಗಣ ನಿರ್ಮಾಣದಲ್ಲಿ ಅವಿರತವಾಗಿ ಶ್ರಮಿಸಿದ ಯಶವಂತ ಪೂಜಾರಿ ಮಾಲೆಮಾರ್ ಇವರನ್ನು ಈ
ಸಂದರ್ಭದಲ್ಲಿ ಅಭಿನಂದಿಸಲಾಯಿತು.ಸಭಾಂಗಣ ನಿರ್ಮಾಣಕ್ಕೆ ಆರ್ಥಿಕ ಸಹಕಾರ ನೀಡಿದ ದಾನಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಮೂಲ್ಕಿ ಯುವವಾಹಿನಿ ಸದಸ್ಯರು ಪ್ರಾರ್ಥನೆ ನೆರವೇರಿಸಿದರು.ಮಂಗಳೂರು ಯುವವಾಹಿನಿ ಅಧ್ಯಕ್ಷರಾದ ರವೀಶ್ ಕುಮಾರ್ ಸ್ವಾಗತಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಯಶವಂತ ಪೂಜಾರಿ ಪ್ರಾಸ್ತಾವನೆ ಮಾಡಿದರು.ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ ಧನ್ಯವಾದ ನೀಡಿದರು.ನರೇಶ್ ಕುಮಾರ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...
ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...
ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...
ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....
ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...
Verygoodprograme congratilation yuvavahini
Another milestone in the history of yuvavahini