ಯವವಾಹಿನಿ (ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೋಂದಿಗೆ 19.05.2017 ,ಮತ್ತು 20.05.2017 ಎರಢು ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು.
ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು.
ಕಂಕನಾಡಿ ಯುವವಾಹಿನಿ ಅಧ್ಯಕ್ಷರಾದ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪಕ ಅಧ್ಯಕ್ಷ ಶೇಖರ್ ಅಮೀನ್ ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ ನಿರ್ದೇಶಕರಾದ ಜನಾರ್ಧನ್, ಕಲೆ ಮತ್ತು ಸಾಹಿತ್ಯ ನಿರ್ದೇಶಕ ರಾದ ಪ್ರಥ್ವೀರಾಜ್,ಸಮಾಜ ಸೇವಾ ನಿರ್ದೇಶಕರಾದ ಶ್ರೀಮತಿ ಸುರೇಖಾ ಮೋಹನ್ ಸಹಕಾರ ನೀಡಿದರು ಜತೆ ಕಾರ್ಯದರ್ಶಿ ಶ್ರೀಮತಿ ನಯನಾ ಸುರೇಶ್ ಸ್ವಾಗತಿಸಿದರು. ಕೋಶಾಧಿಕಾರಿ ಶ್ರೀಮತಿ ಸುಮಾ ವಸಂತ್ ಧನ್ಯವಾದ ನೀಡಿದರು.ಶ್ರೀಮತಿ ದೇವಕಿ ಕಿಶೋರ್ ಕಾರ್ಯಕ್ರಮ ನಿರೂಪಿಸಿದರು.