Yuvavahini

JUN 11, 2017 2.02 PM IST

ಯುವವಾಹಿನಿ (ರಿ) ಅಡ್ವೆ ಘಟಕ

ಸಂಸ್ಕ್ರತಿ ಸಂಸ್ಕಾರ ಉಳಿಸಿ ಬೆಳೆಸುವಲ್ಲಿ ಯುವವಾಹಿನಿ ಮಹತ್ತರ ಪಾತ್ರ ವಹಿಸಿದೆ : ಶೈಲು ಬಿರ್ವ

ಬಿಲ್ಲವರು ತಮ್ಮದೇ ಆದ ಸಂಸ್ಕೃತಿ ಸಂಪ್ರದಾಯಗಳನ್ನು ಪಾಲಿಸಿಕೊಂಡು ಈ ತುಳುನಾಡಿನ ಮೂಲ ಜನಾಂಗಗಳಲ್ಲಿ ಒಬ್ಬರಾಗಿ ಸಂಪ್ರದಾಯಗಳನ್ನು ಉಳಿಸಿಕೊಂಡು ಬರುತ್ತಿದ್ದಾರೆ”. ಈ ಸಂಸ್ಕೃತಿಯನ್ನು ಉಳಿಸುವಲ್ಲಿ ಯುವವಾಹಿನಿಯೂ ಸಹ ಅವಿರತವಾಗಿ 30 ವರ್ಷಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದೆ ಎಂದು ಶೈಲು ಬಿರ್ವ ಅಗತ್ತಾಡಿ ತಿಳಿಸಿದರು.
ಅವರು ದಿನಾಂಕ 11.06.2017 ರಂದು ಅಡ್ವೆ ಆನಂದಿ ಸಭಾ ಭವನದಲ್ಲಿ ಜರುಗಿದ ಯುವವಾಹಿನಿ ಅಡ್ವೆ ಘಟಕದ ಪದಗ್ರಹಣದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಉದ್ಘಾಟನೆ ಯನ್ನು ಮಾಜಿ ಎ.ಪಿ.ಎಂ.ಸಿ. ಅಧ್ಯಕ್ಷರಾದ ಲಕ್ಷ್ಮಣ್ ಶೆಟ್ಟಿಪಾಲ್ ನೆರವೇರಿಸಿ ಅಡ್ವೆ ಘಟಕದಿಂದ ಊರಿನಲ್ಲಿ ಉತ್ತಮ ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಮುಂದೆಯೂ ಉತ್ತಮ ರೀತಿಯಲ್ಲಿ ಘಟಕವು ಬೆಳೆಯಲಿ ಎಂದು ಆಶಿಸಿದರು. ವೇದಿಕೆಯಲ್ಲಿ ಪದ್ಮನಾಭ ಮರೋಳಿ, ಸದಾಶಿವ ಡಿ.ಕೋಟ್ಯಾನ್, ನವೀನ್ ಚಂದ್ರ ಸುವರ್ಣ, ದಿನೇಶ್ ಕೋಟ್ಯಾನ್, ಪ್ರಮೋದ್ ಅಡ್ವೆ ಗರಡಿಮನೆ ಉಪಸ್ಥಿತರಿದ್ದರು. ಘಟಕದ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ಶಶಿಧರ್.ಟಿ.ಪೂಜಾರಿಯವರು 2016-17 ನೇ ಸಾಲಿನ ವಾರ್ಷಿಕ ವರದಿಯನ್ನು ಸಭೆಗೆ ನೀಡಿದರು.
ಪರಿಸರದ ಹಾಗೂ ಸುತ್ತಮುತ್ತಲಿನ 7ನೇ ತರಗತಿ, ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಳೆದ ಒಂದು ವರ್ಷದಲ್ಲಿ ವಿದ್ಯಾನಿಧಿಯಿಂದ ಸಂಗ್ರಹವಾದ ಮೊತ್ತವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ವೆ, ಇದರ ಮುಖ್ಯೋಪಾದ್ಯಾಯರಿಗೆ ಹಸ್ತಾಂತರಿಸಲಾಯಿತು.
ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಪದ್ಮನಾಭ ಮರೋಳಿಯವರು ಘಟಕದ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಭೋಧಿಸಿ ಶುಭ ಹಾರೈಸಿದರು.
ನೂತನ ಅಧ್ಯಕ್ಷರಾದ ಭಾಸ್ಕರ್ ಸಾಲಿಯಾನ್ ಎಲ್ಲರ ಸಹಕಾರ ಯಾಚಿಸಿ, ಘಟಕವನ್ನು ಮುಂದಿನ ಒಂದು ವರ್ಷದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸುವುದಾಗಿ ಭರವಸೆ ನೀಡಿದರು.  ನಿರ್ಗಮನ ಅಧ್ಯಕ್ಷ ಪ್ರವೀಣ್ ಕುಮಾರ್‌ರವರು ಮಾತನಾಡಿ ಒಂದು ವರ್ಷದ ಅವಧಿಯಲ್ಲಿ ಘಟಕವನ್ನು ಮುನ್ನೆಡುಸುವಲ್ಲಿ ಸಹಕರಿಸಿದ ಎಲ್ಲರನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು ಹಾಗೂ ಮುಂದೆಯು ಯುವವಾಹಿನಿಯ ಅಭಿವೃದ್ದಿಯಲ್ಲಿ ತನ್ನ ಪರಿಪೂರ್ಣ ಸಹಕಾರ ಇರುವುದಾಗಿ ತಿಳಿಸಿದರು.
ನವೀನ್ ಚಂದ್ರ ಸುವರ್ಣ ಪ್ರಾಸ್ತಾವಿತ ನುಡಿಗಳನ್ನಾಡಿದರು, ನೂತನ ಕಾರ್ಯದರ್ಶಿ ಶ್ರೀಧರ್ .ಟಿ.ಪೂಜಾರಿ ವಂದಿಸಿದರು. ಸುಜಿತ್ ಕುಮಾರ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮಕ್ಕಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ವರದಿ : ನಿತೇಶ್ ಕರ್ಕೇರಾ 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!