Yuvavahini

JUL 09, 2017 5.08 AM IST

ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕ

ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ಬಿಡುಗಡೆ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ
30ನೇ ವಾರ್ಷಿಕ ಸಮಾವೇಶವು ದಿನಾಂಕ 06.08.2017 ಭಾನುವಾದಂದು ಉಪ್ಪಿನಂಗಡಿ ಯ ಎಚ್ ಎಮ್ ಆಡಿಟೋರಿಯಂ ( ಮುಗ್ಗ ಗುತ್ತು ಸೂರಪ್ಪ ಪೂಜಾರಿ ಮೋನಮ್ಮ ವೇದಿಕೆ, ಮುಗ್ಗ ಜಗನ್ನಾಥ ಸಭಾಂಗಣ) ಇಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ದಿನಾಂಕ.09/07/2017 ರ ಭಾನುವಾರ ಉಪ್ಪಿನಂಗಡಿ ಯುವವಾಹಿನಿ ಘಟಕದ ವತಿಯಿಂದ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ನಡೆಯಿತು.

ಆಮಂತ್ರಣ ಪತ್ರ ಬಿಡುಗಡೆಯನ್ನು ಘಟಕದ ಗೌರವ ಸಲಹೆಗಾರರಾದ ವರದ್ರಾಜ್ ಯಂ ಇವರು ನೆರವೆರಿಸಿ, ಸಮಾವೇಶವು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಸಮಾವೇಶವನ್ನು ಎಲ್ಲಾ ಸದಸ್ಯರ ಸಹಭಾಗಿತ್ವದೊಂದಿಗೆ ಅರ್ಥಪೂರ್ಣವಾಗಿ ನಡೆಸುವಂತೆ ತಿಳಿಸಿದರು. ಯುವವಾಹಿನಿ ವೆಬ್‌ಸೈಟ್‌ ಸಂಪಾದಕರಾದ ರಾಜೇಶ್ ಸುವರ್ಣ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಮಾಹಿತಿ ನೀಡಿದರು. ಮಂಗಳೂರು ತಾಲೂಕು ಸಂಘಟನಾ ಕಾರ್ಯದರ್ಶಿ ಹರೀಶ್ ಕೆ.ಪೂಜಾರಿ ಸಂದರ್ಬೊಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಕೇಂದ್ರ ಸಮಿತಿಯ ಸಮಾವೇಶ ನಿರ್ದೇಶಕರಾದ ಡಾ. ಸದಾನಂದ ಕುಂದರ್ ಮತ್ತು ವಾರ್ಷಿಕ ಸಮಾವೇಶದ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ರಾಜರಾಮ್ ಕೆ ಬಿ ಉಪಸ್ಥಿತರಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ವಹಿಸಿ, ಮಾತನಾಡಿ ಎಲ್ಲರ ಪಾಲ್ಗೊಳ್ಳುವಿಕೆ ಮತ್ತು ಸಹಕಾರದಿಂದ ಸಮಾವೇಶವು ಅವಿಸ್ಮರಣೀಯ ಕಾರ್ಯಕ್ರಮವಾಗಲಿದೆ ಎಂದು ತಿಳಿಸುತ್ತಾ , ಸಮಿತಿಗಳ ಜವಾಬ್ದಾರಿ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಘಟಕದ ಜತೆ ಕಾರ್ಯದರ್ಶಿ ಸಂತೋಷ್ ಕುಮಾರ್ , ಕೋಶಾಧಿಕಾರಿ ಅನಿಲ್ ಕುಮಾರ್ ದಡ್ಡು ಮತ್ತು ಪೂರ್ವಾಧ್ಯಕ್ಷರುಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ಮನೋಜ್ ಸಾಲ್ಯಾನ್ ಸುಣ್ಣಾಜೆ ವರದಿ ವಾಚಿಸಿ , ಧನ್ಯವಾದಗೈದರು.

One thought on “ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ಬಿಡುಗಡೆ

  1. ನಮ್ಮ ಎಲ್ಲ ಸಮಾಜಬಾ೦ಧವರು ಅಗಮಿಸಿ ಸಮಾವೇಶ ವನ್ನು ಯಶಸ್ವಿಗೊಳಿಸಬೇಕು. ನಿಮಗೆ ಅತಿಥ್ಯ ನೀಡುವ ಜವಾಬ್ದಾರಿ ನಮ್ಮದು..

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!