Yuvavahini

JUL 09, 2017 12.46 PM IST

ಯುವವಾಹಿನಿ (ರಿ) ಬೆಳ್ತಂಗಡಿ ಘಟಕ

ಗುರುಗಳ ಸಂದೇಶ ಪಾಲಿಸುತ್ತಿರುವ ಯುವವಾಹಿನಿ ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದಿದೆ

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹೊಸ್ಮಾರು ಬಲ್ಯೊಟ್ಟು ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಂದೇಶ ಹಾಗೂ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ದಿನಾಂಕ 09.07.2017 ನೇ ಆದಿತ್ಯವಾರ ನಡ್ಪಿಕಲ್ಲು ಶ್ರೀ ರಾಮ ಭಜನಾ ಮಂದಿರದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಬಲ್ಯೊಟ್ಟು ಕ್ಷೇತ್ರದ ಶ್ರೀ ವಿಖ್ಯಾತನಂದ ಸ್ವಾಮೀಜಿ ಆಶೀರ್ವಚನ ನೀಡಿ ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂದ ಬಲಯುತರಾಗಿ ಎಂಬ ಗುರು ಸಂದೇಶವನ್ನು ಯುವವಾಹಿನಿ ಅಕ್ಷರಶಃ ಪಾಲಿಸುತ್ತಿದೆ. ಬಡ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ನೀಡುವ ಮೂಲಕ ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದಿದೆ ಎಂದು ನುಡಿದರು.
ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಬಿ.ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿಲಬೈಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಖಿಲ ಭಾರತ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಪಿತಾಂಬರ ಹೇರಾಜೆ, ನಾರಾವಿ ಜಿಲ್ಲಾಪಂಚಾಯತ್ ಸದಸ್ಯರಾದ ಪಿ.ಧರಣೇಂದ್ರ ಕುಮಾರ್, ಬೆಳ್ತಂಗಡಿ APMC ಅಧ್ಯಕ್ಷರಾದ ಸತೀಶ್ ಕುಮಾರ್ ಕಾಶಿಪಟ್ಲ, ಬೆಳ್ತಂಗಡಿ ಗೆಜ್ಜೆಗಿರಿ ಸೇವಾ ಸಮಿತಿಯ ಅಧ್ಯಕ್ಷರಾದ ಸೋಮನಾಥ ಬಂಗೇರ ವರ್ಪಾಳೆ, ಆತ್ಮೀಯ ಯುವಕ ಮಂಡಲದ ಅಧ್ಯಕ್ಷರಾದ ಸಚಿನ್ ಕುಮಾರ್ ನೂಜೋಡಿ, ದ.ಕ.ಜಿಲ್ಲಾ ಯುವಜನ ಜಕ್ಕೂಟದ ಉಪಾಧ್ಯಕ್ಷರಾದ ಸುಧಾಮಣಿ ರಮಾನಂದ ಸಾಲ್ಯಾನ್, ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಿತೀಶ್ ಎಚ್, ವೇಣೂರು ಗುರುನಾರಾಯಣ ಸ್ವಾಮೀ ಸೇವಾ ಸಂಘದ ಅಧ್ಯಕ್ಷರಾದ ಪೂವಪ್ಪ ಪೂಜಾರಿ ಪರನೀರು, ಬೆಳ್ತಂಗಡಿ ಯುವವಾಹಿನಿ ಕಾರ್ಯದರ್ಶಿ ಪ್ರಶಾಂತ್ ಮಚ್ಚಿನ, ನವೀನ್ ಪಚ್ಚೇರಿ, ಸುರೇಂದ್ರ ಸಾಲ್ಯಾನ್, ಗಣೇಶ್ ಶಾಂತಿ ಮತ್ತಿತರರು ಉಪಸ್ಥಿತರಿದ್ದರು.
ಸನ್ಮಾನ
ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾದ ಮನೋಹರ್ ಬಳಂಜ,ಹಾಗೂ ವೇಣೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಿತೀಶ್ ಎಚ್ ಇವರನ್ನು ಸನ್ಮಾನಿಸಲಾಯಿತು.
ಬಿಲ್ಲವ ಸಮಾಜದ ಆಯ್ದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಿಸಲಾಯಿತು.
ಸನ್ಮಾನಿತರ ಪರಿಚಯವನ್ನು ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಶ್ ಕುಮಾರ್, ಮತ್ತು ಕರಿಮಣೇಲು ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷರಾದ ಸತೀಶ್ ಉಜಿರಡ್ಜ ವಾಚಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ನಿರ್ದೇಶಕರಾದ ರಾಕೇಶ್ ಕುಮಾರ್ ಮೂಡುಕೋಡಿ ಪ್ರಸ್ತಾವನೆ ಮಾಡಿ ಸ್ವಾಗತಿಸಿದರು.
ಅರುಣ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು
Attachments area

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!