ಸಮಾಜದ ಕಡು ಬಡವರ ಸಂಕಷ್ಟಗಳಿಗೆ ಯುವ ಜನಾಂಗ ಸ್ಪಂದಿಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ , ಈ ನಿಟ್ಟಿನಲ್ಲಿ ಯುವವಾಹಿನಿ ಕಾರ್ಯ ಶ್ಲಾಘನೀಯ ಎಂದು ಮಂಗಳೂರು ಮಹಾನಗರ ಪಾಲಿಕಾ ಹಣಕಾಸು ಮತ್ತು ತೆರಿಗೆ ಸಮಿತಿ ಅಧ್ಯಕ್ಷೆ ಪ್ರತಿಭಾ ಕುಳಾಯಿ ಅಭಿಪ್ರಾಯ ಪಟ್ಟರು.
ಅವರು ದಿನಾಂಕ 16.07.2017 ನೇ ಆದಿತ್ಯವಾರ ಹೆಜಮಾಡಿ ಬಿಲ್ಲವ ಸಮುದಾಯ ಭವನದಲ್ಲಿ ಯುವವಾಹಿನಿ (ರಿ) ಹೆಜಮಾಡಿ ಘಟಕದ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರುಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
2017-18 ನೇ ಸಾಲಿನ ಅಧ್ಯಕ್ಷರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ನೂತನ ಅಧ್ಯಕ್ಷರಾದ ಮಹೇಂದ್ರ ಸಾಲ್ಯಾನ್ ಮುಂದಿನ ಕಾರ್ಯಯೋಜನೆಯು ಯಶಸ್ವೀಯಾಗಲು ಸರ್ವರ ಸಹಕಾರ ಯಾಚಿಸಿದರು.ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ವಿಜಯ ಕುಮಾರ್ ಕುಬೆವೂರು, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಜಿನರಾಜ್ ಬಂಗೇರ, ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
100 ಕ್ಕೂ ಅಧಿಕ ಮಕ್ಜಳಿಗೆ ಉಚಿತವಾಗಿ ಪುಸ್ತಕ ವಿತರಿಸಲಾಯಿತು.SSLC ಮತ್ತು PUC ಯಲ್ಲಿ 90% ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.ಯುವವಾಹಿನಿ (ರಿ) ಹೆಜಮಾಡಿ ಘಟಕದ 2017-18 ನೇ ಸಾಲಿನ ಕಾರ್ಯಕ್ರಮಗಳ ಸವಿನೆನಪಿಗಾಗಿ ಬ್ರಹ್ಮಶ್ರೀ
ನಾರಾಯಣಗುರುಗಳಿಗೆ ಸಮರ್ಪಿಸಲಾಗುವ ರಜತ ಪ್ರಭಾವಳಿಗೆ 1.5 ಲಕ್ಷ ರೂಪಾಯಿಗಳ ಚೆಕ್ಕನ್ನು ಯುವವಾಹಿನಿ ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಅಮೀನ್ ಬಿಲ್ಲವ ಸಂಘದ ಅಧ್ಯಕ್ಷರಾದ ಜಿನರಾಜ್ ಬಂಗೇರ ಇವರಿಗೆ ಹಸ್ತಾಂತರಿಸಿದರು.ಸಂಘದ ಪ್ರಧಾನ ಕಾರ್ಯದರ್ಶಿ ಪ್ರಭೋದ್ ಚಂದ್ರ ಪ್ರಸ್ತಾವನೆ ಮಾಡಿದರು. ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಅಮೀನ್ ಸ್ವಾಗತಿಸಿದರು.ಕಾರ್ಯದರ್ಶಿ ಸುನೀತಾ ಎನ್.ಕರ್ಕೇರಾ ವಂದಿಸಿದರು.
ಧೀರಜ್ ಕೋಡಿ ಕಾರ್ಯಕ್ರಮ ನಿರ್ವಹಿಸಿದರು.ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಅಮೀನ್, ಕಾರ್ಯದರ್ಶಿ ಸುನೀತಾ ಎನ್.ಕರ್ಕೇರಾ
All the best