Yuvavahini

JUL 23, 2017 9.09 AM IST

ಯುವವಾಹಿನಿ (ರಿ) ಬಂಟ್ವಾಳ ಘಟಕ

ಬಂಟ್ವಾಳ ಯುವವಾಹಿನಿಯಿಂದ ಮನೆ ಹಸ್ತಾಂತರ

ಮಹಾ ಮಾನತಾವಾದದ ಮೇರು ಸಂದೇಶ ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಮಾನವ ಜನಾಂಗಕ್ಕೆ ಹೊಸ ದಾರಿ ತೋರಿದವರು. ಸಮಾಜದ ಒಳಿತಿಗಾಗಿ ದುಡಿದವರು. ಅವರ ಸಂದೇಶದ ಅನುಷ್ಟಾನ ಮಾಡುತ್ತಿರುವ ಯುವವಾಹಿನಿಯಂತಹ ಯುವಶಕ್ತಿ ಸಮಾಜದ ಆದರ್ಶ ಸಂಘಟನೆಯಾಗಿದೆ ಎಂದು ಪುರೋಹಿತರಾದ ಕೇಶವ ಶಾಂತಿ ನಾಟಿ ತಿಳಿಸಿದರು. ಅವರು ದಿನಾಂಕ 23.7.2017 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಅಜೆಕಲದ ಅಕ್ಕಮ್ಮ ಎಂಬ ತೀರಾ ಬಡ ಕುಟುಂಬಕ್ಕೆ 650 ಚ.ಅ.ಗಳ ಸುಮಾರು ರೂ. 4.5 ಲಕ್ಷ ವೆಚ್ಚದ ನೂತನ ಮನೆ ಹಸ್ತಾಂತರ ಮಾಡಿದ ಸಂದರ್ಭದಲ್ಲಿ ಮಾತನಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರ ಹಸ್ತಾಂತರ ಮಾಡುವ ಮೂಲಕ ಸಾಂಕೇತಿಕವಾಗಿ ಮನೆ ಹಸ್ತಾಂತರ ಮಾಡಲಾಯಿತು.

ಉದ್ಯಮಿ ಜಗದೀಪ್ ಡಿ. ಸುವರ್ಣ “ಬ್ರಹ್ಮಶ್ರೀ ನಿಲಯ” ನಾಮ ಫಲಕ ಅನಾವರಣಗೊಳಿಸಿದರು. ದ.ಕ. ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಬಿರ್ವ, ಯುವವಾಹಿನಿ (ರಿ) ಕೇಂದ್ರ ಸಮಿತಿಯ ನಿಯೋಜಿತ ಅಧ್ಯಕ್ಷ ಯುಶವಂತ ಪೂಜಾರಿ, ಬಂಟ್ವಾಳ ಜೆಸಿಐ ಮಾಜಿ ಅಧ್ಯಕ್ಷ ಲೋಕೇಶ ಸುವರ್ಣ ಬಂಟ್ವಾಳ, ಬಿರುವೆರ್ ಕುಡ್ಲ (ರಿ) ಇದರ ಸಂಸ್ಥಾಪಕರಾದ ಅಭಿಷೇಕ್ ಅಮೀನ್ ಹಾಗೂ ಬಿರುವೆರೆ ಕುಡ್ಲದ ಅಧ್ಯಕ್ಷ್ ರಾಕೇಶ್ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಬೇಬಿ ಕುಂದರ್ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್, ನಿಯೋಜಿತ ಅಧ್ಯಕ್ಷರಾದ ಲೋಕೇಶ್ ಸುವರ್ಣ ಅಲೆತ್ತೂರು, ಹರೀಶ ಸಾಲ್ಯಾನ್ ಅಜೆಕಳ, ಮಾಜಿ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಸಲಹೆಗಾರರಾದ ಬಿ. ತಮ್ಮಯ, ಡಾ| ಸದಾನಂದ ಕುಂದರ್ ಮತ್ತಿತರರು ಉಪಸ್ಥಿತರಿದ್ದರು.

2 thoughts on “ಬಂಟ್ವಾಳ ಯುವವಾಹಿನಿಯಿಂದ ಮನೆ ಹಸ್ತಾಂತರ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!