Yuvavahini

JUL 23, 2017 12.00 AM IST

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ

ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು : ಯಶವಂತ ಪೂಜಾರಿ

ಸಂಘಟನೆಗಳು ಒಕ್ಕೂಟ ವ್ಯವಸ್ಥೆ ಗೆ ಬಲವನ್ನು ತುಂಬುವ ಕೆಲಸವನ್ನು ನಿರ್ವಹಿಸುತ್ತದೆ. ಎಲ್ಲರಿಗೂ ನಾಯಕರಾಗುವ ಅವಕಾಶ ತನ್ನಿಂದ ತಾನೇ ಲಭ್ಯವಾಗುವುದಿಲ್ಲ. ಸಂಘಟನೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಾಗ ಅವಕಾಶಗಳು ಒಲಿದು ಬರುತ್ತದೆ. ತಮಗೆ ಸಿಗುವ ಅವಕಾಶವನ್ನು ಯೋಗ್ಯ ರೀತಿಯಲ್ಲಿ ನಿರ್ವಹಿಸಿದಾಗ ಮಾತ್ರ ಸಂಘಟನೆಗೂ ಸಮಾಜಕ್ಕೂ ಕೀರ್ತಿ ಲಭ್ಯವಾಗುತ್ತದೆ. ನಾಯಕತ್ವ ವಹಿಸುವುದು ಜವಾಬ್ದಾರಿ ಯ ಕೆಲಸ. ನಾಯಕನಾದವನು ತನ್ನ ಬಳಗವನ್ನು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಶ್ರೀ ಯಶವಂತ ಪೂಜಾರಿ ಅಭಿಪ್ರಾಯ ಪಟ್ಟರು

ಅವರು ದಿನಾಂಕ 23.07.2017ನೇ ಆದಿತ್ಯವಾರ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2017-18ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಬದುಕು ಕ್ರಿಯಾಶೀಲವಾಗಿರಬೇಕು , ಸ್ವಯಂಪ್ರೇರಿತ ಸೇವಾ ಮನೋಭಾವ ಹೊಂದಿರಬೇಕು ,ಧರ್ಮ ಸಂಸ್ಕತಿ ಬದುಕನ್ನು ರೂಪಿಸುತ್ತದೆ, ಬಡವರಿಗೆ ಮನೆ ನಿರ್ಮಾಣ ಮಾಡಿದ ಯುವವಾಹಿನಿಯ ಸೇವಾ ಕಾರ್ಯ ಶ್ಲಾಘನೀಯ ಎಂದು ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಜಗದೀಪ್ ಡಿ.ಸುವರ್ಣ ತಿಳಿಸಿದರು.
ಬಂಟ್ವಾಳ ಜೆಸಿಐ ಮಾಜಿ ಅಧ್ಯಕ್ಷರಾದ ಲೋಕೇಶ್ ಸುವರ್ಣ, ಪುರೋಹಿತರಾದ ಕೇಶವ ಶಾಂತಿ ನಾಟಿ, ಬಿರುವೆರ್ ಕುಡ್ಲದ ಅಧ್ಯಕ್ಷರಾದ ರಾಕೇಶ್ ಪೂಜಾರಿ, ಸಂಸ್ಥಾಪಕರಾದ ಅಭಿಶೇಕ್ ಅಮೀನ್, ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಕೆ ಮಾಡಿದರು.ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಯುವವಾಹಿನಿ ಮಾಜಿ ಅಧ್ಯಕ್ಷರಾದ ರಾಜೇಶ್ ಸುವರ್ಣ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು.
ನೂತನ ಅಧ್ಯಕ್ಷರಾದ ಲೋಕೇಶ್ ಸುವರ್ಣ ಅಲೆತ್ತೂರು ಎಲ್ಲರ ಸಲಹೆ ಸೂಚನೆ ಮಾರ್ಗದರ್ಶನ ಪಡೆದು ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವುದಾಗಿ ತಿಳಿಸಿದರು.ಆಟಿ ತಿಂಗಳ ವೈವಿಧ್ಯಮಯ ತಿಂಡಿ ತಿನಿಸುಗಳ ಊಟೋಪಚಾರ ಎಲ್ಲರ ಮನಸೂರೆಗೊಂಡಿತು
ಕೋಶಾಧಿಕಾರಿ ಸತೀಶ್ ಪೂಜಾರಿ ಬಾಯಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಚಾಲಕರಾದ ಹರೀಶ್ ಕೋಟ್ಯಾನ್ ಕುದನೆ ಸ್ವಾಗತಿಸಿದರು, ನೂತನ ಉಪಾಧ್ಯಕ್ಷ ಗಣೇಶ್ ಪೂಂಜರೆಕೋಡಿ ಪ್ರಾಸ್ತಾವಿಕ ಮಾತನಾಡಿದರು, ನೂತನ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಹಾಗೂ ಉಪನ್ಯಾಸಕ ಚೇತನ್ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು

2 thoughts on “ಯುವ ಮನಸ್ಸುಗಳಿಗೆ ಜೀವ ತುಂಬುವ ಕೆಲಸ ನಡೆಯಬೇಕು : ಯಶವಂತ ಪೂಜಾರಿ

  1. Our plea on behalf of youth members who really got hidden talent make use of their human resource by way of capasity building of such yuvahini members with good feed back guidence training programme with the help of Resource persons counselling etc ate the main impact to be build-up peaceful eco friendly society among youth.

    In this context our Pesident elect Yuva Yeshwanth Poojary
    Will take keen interest by way of formation of committee inorder to expect good result in the interest of SOCIETY as a whole.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!