ತುಳು ಸಂಸ್ಕೃತಿಯಲ್ಲಿ ಆಟಿ ತಿಂಗಳಿಗೆ ವಿಶೇಷವಾದ ಸ್ಥಾನಮಾನವಿದೆ. ಈ ತಿಂಗಳಿನಲ್ಲಿ ನಡೆಯುವ ಯಾವೆಲ್ಲ ಆಚರಣೆಗಳಿವೆಯೋ ಅವೆಲ್ಲದರ ಹಿಂದೆ ಪೂರ್ವಜರು ವೈಜ್ಞಾನಿಕತೆಯನ್ನು ಪರಿಚಯಿಸಿದ್ದನ್ನು ಈಗಲೂ ಕಾಣಬಹುದಾಗಿದೆ. ಬದಲಾವಣೆಯ ಗಾಳಿ ಬಲವಾಗಿ ಬೀಸಿದೆ. ಕೃಷಿ ಸಂಸ್ಕೃತಿಯಿಂದ ಹಿಮ್ಮುಖವಾದ ಕಾರಣ ನಾವೆಲ್ಲ ಆರೋಗ್ಯಪೂರ್ಣ ವಾತಾವರಣದಿಂದ ದೂರ ಸರಿಯುತ್ತಿದ್ದೇವೆ” ಎಂದು ಹಿರಿಯ ಸಾಹಿತಿ ಶ್ರೀಮತಿ ಕೆ.ಎ.ರೋಹಿಣಿ ತಿಳಿಸಿದರು.
ಅವರು ದಿನಾಂಕ 23.07.2017ನೇ ಆದಿತ್ಯವಾರದಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ (ರಿ) ಬಜ್ಪೆ ಘಟಕದ ಆಶ್ರಯದಲ್ಲಿ ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಂಘದ ಸಹಯೋಗದೊಂದಿಗೆ ಆಟಿದ ನೆಂಪು ಮತ್ತು ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಸುರತ್ಕಲ್ ಶ್ರೀಗುರು ಚಾರಿಟೇಬಲ್ ಟ್ರಸ್ಟ್ ಇದರ ಟ್ರಸ್ಟೀ ಯೋಗೀಶ್ ಕೋಟ್ಯಾನ್ ಹಲಸಿನಕಾಯಿ ಕತ್ತರಿಸುವ ಮೂಲಕ ಆಟಿದ ನೆಂಪು ಕಾರ್ಯಕ್ರಮ ಉದ್ಘಾಟಿಸಿದರು
ಈ ಸಂದರ್ಭದಲ್ಲಿ ಪಿ.ಯು.ಸಿ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಂತ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.ಯುವವಾಹಿನಿ (ರಿ) ಬಜ್ಪೆ ಘಟಕದ ಅಧ್ಯಕ್ಷರಾದ ಚಂದ್ರಶೇಖರ ಎಸ್.ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು
ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಪದ್ಮನಾಭ ಮರೋಳಿ, ಪ್ರಖ್ಯಾತ ಚಲನಚಿತ್ರ ನಿರ್ದೇಶಕ ರಂಜಿತ್ ಸುವರ್ಣ, ಬಜ್ಪೆ ಬಿಲ್ಲವ ಸಂಘದ ಜತೆ ಕೋಶಾಧಿಕಾರಿ ಶ್ರೀ ದಯಾನಂದ ಪೂಜಾರಿ, ಕಾರ್ಯಕ್ರಮದ ಸಂಚಾಲಕರಾದ ಕೃಷ್ಣ ಪೂಜಾರಿ, ಕಾರ್ಯದರ್ಶಿ ಶ್ರೀಮತಿ ಕನಕಾ ಮೋಹನ್, ಘಟಕದ ಸಲಹೆಗಾರರಾದ ಶ್ರೀ ಸಾಧು ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಸಂಧ್ಯಾ ಕುಳಾಯಿ ಮತ್ತು ಶ್ರೀ ದೇವರಾಜ್ ಅಮೀನ್ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಶ್ರೀ ವಿಶ್ವನಾಥ್ ಪೂಜಾರಿ ರೆಂಜಾಳ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಕನಕಾ ಮೋಹನ್ ವಂದಿಸಿದರು. ಬಳಿಕ ಯುವವಾಹಿನಿ(ರಿ) ಬಜ್ಪೆ ಘಟಕದ ಸದಸ್ಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳು ಎಲ್ಲರ ಮನಸೂರೆಗೊಂಡಿತು.