Yuvavahini

AUG 06, 2017 1.19 PM IST

ಯುವವಾಹಿನಿ ಯುವ ಸಾಧನಾ ಪುರಸ್ಕಾರ-2017

ಯಕ್ಷಲೋಕದ ಗಾನ ಸುರಭಿ ಶ್ರೀ ರವಿಚಂದ್ರ ಕನ್ನಡಿಕಟ್ಟೆ

ಯಕ್ಷಲೋಕದಲ್ಲಿ ಗಾನ ಸುರಭಿ ಎಂದೇ ಕರೆಸಿಕೊಂಡು ತನ್ನ ಕಂಠ ಮಾಧುರ್ಯಕ್ಕೆ ಅಸಂಖ್ಯಾತ ಅಭಿಮಾನಿ ಬಳಗವನ್ನು ಹುಟ್ಟು ಹಾಕಿಕೊಂಡಿರುವ ರವಿಚಂದ್ರ ಕನ್ನಡಿಕಟ್ಟೆ ಈ ನಾಡುಕಂಡ ಅಪ್ರತಿಮ ಭಾಗವತ.ತೆಂಕು ತಿಟ್ಟಿನ ಯಕ್ಷಲೋಕದಲ್ಲಿ ನಕ್ಷತ್ರಪುಂಜದಂತೆ ಮಿನುಗುವ ರವಿಚಂದ್ರ ಕನ್ನಡಿಕಟ್ಟೆ ಮೂಲತಃ ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ಪಜೆಮಾರು ನಿವಾಸಿ ಧರ್ಮಣ್ಣ ಪೂಜಾರಿ ಮತ್ತು ಸುಶೀಲಾ ದಂಪತಿಗಳ ಪುತ್ರ. 1980ನೇ ಇಸವಿಯ ಅಕ್ಟೋಬರ್ 10ರಂದು ಜನಿಸಿದ ಕನ್ನಡಿಕಟ್ಟೆ ಎಸ್‍ಎಸ್‍ಎಲ್‍ಸಿಗೆ ತನ್ನ ಶಿಕ್ಷಣ ಮೊಟಕುಗೊಳಿಸಿ ಬಳಿಕ ಯಕ್ಷರಂಗದತ್ತ ಮುಖ ಮಾಡಿ ಹೊರಟವರು. ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷ ಲಲಿತ ಕೇಂದ್ರದಲ್ಲಿ ಯಕ್ಷ ನಾಟ್ಯಭ್ಯಾಸಕ್ಕೆ ಸೇರಿ ಅಲ್ಲಿ ನೃತ್ಯಗಾರಿಕೆ ಕಲಿತರು. ಬಳಿಕ ಇದೇ ಅವಧಿಯಲ್ಲಿ ಲೀಲಾವತಿ ಬೈಪಡಿತ್ತಾಯ ಅವರಿಂದ ಹಾಡುಗಾರಿಕೆ ಯೋಗ್ಯರು ಎಂಬ ಪ್ರಶಂಸೆ ಪಡೆದುಕೊಂಡವರು. ನಾಟ್ಯಾಭ್ಯಾಸದ ಬಳಿಕ ಸುರತ್ಕಲ್ ಮೇಳಕ್ಕೆ ಸೇರ್ಪಡೆಗೊಂಡರು. ಈ ಅವಧಿಯಲ್ಲಿ ಪದ್ಯಾಣ ಗಣಪತಿ ಭಟ್ ಅವರು ಸಂಗೀತಗಾರ ಭಾಗವತರುಗಳಿಗೆ ಭಾಗವತಿಕೆ ಕಲಿಸುತ್ತಿದ್ದಾಗ ಕನ್ನಡಿಕಟ್ಟೆ ಅವರು ಭಾಗವತಿಕೆ ಕಡೆಗೆ ಆಸಕ್ತಿ ತೋರಿದರು. ಮಳೆಗಾಲದ ಅವಧಿಯಲ್ಲಿ ಪದ್ಯಾಣರ ಮನೆಯಲ್ಲಿ ಭಾಗವತಿಕೆ ಕಲಿತರು, ಎರಡು ವರುಷಗಳ ಕಾಲ ಸುರತ್ಕಲ್ ಮೇಳದಲ್ಲಿ ಸೇವೆ ಸಲ್ಲಿಸಿದ ರವಿಚಂದ್ರ ಅವರು ಬಳಿಕ ಪದ್ಯಾಣರ ಜೊತೆ ಸೇರಿ ಸುಮಾರು 10 ವರುಷ ಮಂಗಳಾದೇವಿ ಮೇಳದಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದರು. ಅದಾದ ಬಳಿಕ ಹೊಸ ನಗರ ಮೇಳದಲ್ಲಿ ಸೇವೆ ಸಲ್ಲಿಸಿದರು. ತನ್ನ ಸ್ವರ ಮಾಧುರ್ಯದಿಂದಲೇ ಅಸಂಖ್ಯಾತ ಅಭಿಮಾನಿ ಬಳಗವನ್ನು ಹುಟ್ಟಿಹಾಕಿಕೊಂಡಿದ್ದ ರವಿಚಂದ್ರರ ಗಾನ ಸವಿಯಲು ದೂರದೂರಿನಿಂದಲೂ ಯಕ್ಷಾಭಿಮಾನಿಗಳು ಬರುತ್ತಿದ್ದರು. ಇವತ್ತು ಭಾಗವತರು ಯಾರಂತೆ? ಎಂದು ಮೊದಲೇ ಕೇಳಿ ರವಿಚಂದ್ರ ಕನ್ನಡಿಕಟ್ಟೆಯಾದರೆ ಸಮಯಕ್ಕೆ ಮೊದಲೇ ಬಂದು ಸೇರುವ ಸಾವಿರಾರು ಅಭಿಮಾನಿಗಳನ್ನು ಕನ್ನಡಿಕಟ್ಟೆ ಹೊಂದಿದ್ದಾರೆ. ಇವರ ಪ್ರತಿಭೆಯನ್ನು ಗುರುತಿಸಿದ ಯಕ್ಷ ಕಲಾರಾಧಕರು ಇವರಿಗೆ ಗಾನ ಸುರಭಿ ಎನ್ನುವ ಬಿರುದು ನೀಡಿದ್ದರು. ಅಲ್ಲದೆ ‘ರಸರಾಗ ಸಾರ್ವಭೌಮ’ ಎನ್ನುವ ಬಿರುದನ್ನೂ ದಯಪಾಲಿಸಿದ್ದರು.

ಯಕ್ಷಗಾನ ಮಾತ್ರವಲ್ಲದೆ, ಯಕ್ಷ ನಾಟ್ಯ ವೈಭವ, ಯಕ್ಷಗಾನ ತಾಳಮದ್ದಲೆ ಮುಂತಾದವುಗಳಲ್ಲೂ ಕನ್ನಡಿಕಟ್ಟೆಯವರದ್ದು ಎತ್ತಿದ ಕೈ. ಸುದೀರ್ಘವಾದ ಯಕ್ಷ ಪಯಣದಲ್ಲಿ ಅಳಿಯದ ಛಾಪು ಮೂಡಿಸಿರುವ ಕನ್ನಡಿಕಟ್ಟೆಯವರಿಗೆ ಉಜ್ವಲ ಭವಿಷ್ಯವನ್ನು ಬ್ರಹ್ಮಶ್ರೀ ನಾರಾಯಣಗುರುಗಳು ದಯಪಾಲಿಸಲಿ ಎಂದು ಯುವವಾಹಿನಿ ಶುಭ ಹಾರೈಸುತ್ತಾ ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ದಿನಾಂಕ 06.08.2017 ರಂದು ಉಪ್ಪಿನಂಗಡಿಯ ಎಚ್ ಎಮ್.ಆಡಿಟೋರಿಯಂ ಇಲ್ಲಿ ಜರುಗಿದ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ತಮಗೆ ‘ಯುವವಾಹಿನಿ ಯುವ ಸಾಧನಾ ಪುರಸ್ಕಾರ ನೀಡಿ ಗೌರವಿಸಲು ಸಂತೋಷವಾಗುತ್ತಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಕೆ.ವಸಂತ ಬಂಗೇರ, ಐ ಎಪ್ ಎಸ್ ಅಧಿಕಾರಿ ಶ್ರೀ ದಾಮೋದರ ಎ.ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ ಜಯಾನಂದ,ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲು, ಕಾಸರಗೋಡು ಸರಕಾರಿ ಕಾಲೇಜು ಸಹ ಪ್ರಾಧ್ಯಾಪಕರಾದ ಡಾ.ರಾಜೇಶ್ ಬೆಜ್ಜಂಗಳ,ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಸಮಾವೇಶ ನಿರ್ದೇಶಕರಾದ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್, ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಉಪಸ್ಥಿತರಿದ್ದರು

2 thoughts on “ಯಕ್ಷಲೋಕದ ಗಾನ ಸುರಭಿ ಶ್ರೀ ರವಿಚಂದ್ರ ಕನ್ನಡಿಕಟ್ಟೆ

  1. This is the best job done by yuvavahini and keep doing this always. All the best.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!