ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೆರೆ, ಉಡುಪಿ ಜಿಲ್ಲೆ ಇಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಮನೋಜ್ ಕುಮಾರ್ ಎಂ. ಇವರು ಮೈಸೂರು ವಿಶ್ವವಿದ್ಯಾನಿಲಯವು ಡಾಕ್ಟರೇಟ್ (ಪಿ.ಹೆಚ್.ಡಿ) ಪದವಿಯನ್ನು ಪಡೆದಿರುತ್ತಾರೆ.
ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಪ್ರೊ. ವೆಂಕಟೇಶ್ ಸಿ. ಇವರ ಮಾರ್ಗದರ್ಶನದಲ್ಲಿ ಶ್ರೀ ಮನೋಜ್‍ಕುಮಾರ್ ಎಂ ಇವರು ಮಂಡಿಸಿದ Construction of health related physical fitness Norms for 16-18 years boys of coastal Karnataka“ಎಂಬ ಮಹಾಪ್ರಬಂಧಕ್ಕೆ ದೈಹಿಕ ಶಿಕ್ಷಣ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದಿರುತ್ತಾರೆ.
ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಸುಳ್ಕೇರಿ, ಹೈಸ್ಕೂಲ್ ವಿದ್ಯಾಭ್ಯಾಸವನ್ನು ನಾರಾವಿ ಹೈಸ್ಕೂಲ್‍ನಲ್ಲಿ, ಪದವಿ ಶಿಕ್ಷಣವನ್ನು ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರ್, ದೈಹಿಕ ಶಿಕ್ಷಣದಲ್ಲಿ ಸಿ.ಪಿ.ಎಡ್. ಪದವಿಯನ್ನು ಎಂ.ಕೆ. ಅನಂತ್ ರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ, ಮೂಡಬಿದ್ರೆಯಲ್ಲಿ, ದೈಹಿಕ ಶಿಕ್ಷಣ ವಿಭಾಗದಲ್ಲಿ ಬಿ.ಪಿ.ಎಡ್. ಪದವಿಯನ್ನು ಪವನ್ ಕಾಲೇಜ್ ಆಫ್ ಫಿಸಿಕಲ್ ಎಜ್ಯುಕೇಶನ್ ಕೋಲಾರ, ದೈಹಿಕ ಶಿಕ್ಷಣ ವಿಭಾಗದಲ್ಲಿ ಎಂ.ಪಿ.ಎಡ್. (ಮಾಸ್ಟರ್ ಆಫ್ ಫಿಸಿಕಲ್ ಎಜ್ಯುಕೇಶನ್) ಪದವಿಯನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ಮೈಸೂರು ಹಾಗೂ ದೈಹಿಕ ಶಿಕ್ಷಣ ವಿಭಾಗದಲ್ಲಿ ಎಂ.ಪಿಲ್ ಪದವಿಯನ್ನು ಭಾರತೀಯ ವಿಶ್ವವಿದ್ಯಾನಿಲಯ ಕೊಯಂಬತ್ತೂರು ಇಲ್ಲಿ ಪಡೆದಿರುತ್ತಾರೆ.
ಇವರು ವಾಲಿಬಾಲ್ ಕ್ರೀಡೆಯ ರಾಜ್ಯಮಟ್ಟದ ತೀರ್ಪುಗಾರರಾಗಿ ಹಾಗೂ ಕಬಡ್ಡಿ ಕ್ರೀಡೆಯ ರಾಷ್ಟ್ರೀಯ ತೀರ್ಪುಗಾರರಾಗಿ ಆಯ್ಕೆಯಾಗಿರುತ್ತಾರೆ. ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ವಿಶ್ವವಿದ್ಯಾನಿಲಯ ವಾಲಿಬಾಲ್ ಹಾಗೂ ಕಬಡ್ಡಿ ತಂಡಗಳ ಆಯ್ಕೆ ಸಮಿತಿ ಸದಸ್ಯರಾಗಿರುತ್ತಾರೆ. ಕ್ರೀಡಾ ಕ್ಷೇತ್ರದ ಅನೇಕ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಸೆಮಿನಾರ್‍ಗಳಲ್ಲಿ ತನ್ನ ಪ್ರಬಂಧವನ್ನು ಮಂಡಿಸಿದ್ದಾರೆ. ಹಾಗೂ ಅನೇಕ ಅಂತರಾಷ್ಟ್ರೀಯ ಜರ್ನಲ್‍ಗಳಲ್ಲಿ ಸಂಶೋಧನಾ ಪ್ರಬಂಧವನ್ನು ಪ್ರಕಟಿಸಿದ್ದಾರೆ. ಇವರು ಬೆಳ್ತಂಗಡಿ ತಾಲೂಕಿನ ಸುಳ್ಕೇರಿ ಗ್ರಾಮದ ನಿವೃತ್ತ ಶಿಕ್ಷಕ ಶ್ರೀ ಕೊರಗಪ್ಪ ಪೂಜಾರಿ ಹಾಗೂ ಶ್ರೀಮತಿ ವೀಣಾ ಇವರ ಪುತ್ರರಾಗಿರುವ ಇವರಿಗೆ ತಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತಾ ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ದಿನಾಂಕ 06.08.2017 ರಂದು ಉಪ್ಪಿನಂಗಡಿಯ ಎಚ್ ಎಮ್.ಆಡಿಟೋರಿಯಂ ಇಲ್ಲಿ ಜರುಗಿದ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ತಮಗೆ ಯುವವಾಹಿನಿ ಗೌರವ ಅಭಿನಂದನೆ-2017 ನೀಡಿ ಗೌರವಿಸುತ್ತಿದೆ
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಕೆ.ವಸಂತ ಬಂಗೇರ, ಐ ಎಪ್ ಎಸ್ ಅಧಿಕಾರಿ ಶ್ರೀ ದಾಮೋದರ ಎ.ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ ಜಯಾನಂದ, ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲು, ಕಾಸರಗೋಡು ಸರಕಾರಿ ಕಾಲೇಜು ಸಹ ಪ್ರಾಧ್ಯಾಪಕರಾದ ಡಾ.ರಾಜೇಶ್ ಬೆಜ್ಜಂಗಳ,ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಸಮಾವೇಶ ನಿರ್ದೇಶಕರಾದ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್, ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಉಪಸ್ಥಿತರಿದ್ದರು