Yuvavahini

AUG 06, 2017 1.58 PM IST

ಯುವವಾಹಿನಿ ಗೌರವ ಅಭಿನಂದನೆ-2017

ಡಾ| ನಿಖಿತಾ ಸುಕೇಶ್

ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯವು ನಡೆಸಿದ 2016ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ (M.D.S. Ortho) ಪರೀಕ್ಷೆಯಲ್ಲಿ ಸುಳ್ಯದ K.V.G. ದಂತ ಮಹಾವಿದ್ಯಾಲಯದ ವಿದ್ಯಾರ್ಥಿನಿ ಮಂಗ ಳೂರು ಸುರತ್ಕಲ್‍ನ ಡಾ| ನಿಖಿತಾ ಸುಕೇಶ್ 4ನೇ ರ್ಯಾಂಕ್ ಗಳಿಸಿದ್ದು ಬಿಲ್ಲವ ಸಮಾಜಕ್ಕೆ ಕೀರ್ತಿ ತಂದಿದ್ದಾರೆ. ಸ್ನಾತಕೋತ್ತರ ವಿಭಾಗದಲ್ಲಿ ಕಾಲೇಜಿಗೆ ದೊರೆತ ಒಟ್ಟು 8 ರ್ಯಾಂಕ್‍ಗಳಲ್ಲಿ 4ನೇ ರ್ಯಾಂಕ್ ಪಡೆದು ಕಾಲೇಜಿಗೂ ಹೆಮ್ಮೆ ಎನಿಸಿದ್ದಾರೆ.
ಕಾಲೇಜಿನ ವಕ್ರ ದಂತ ವಿಭಾಗದ ಮುಖ್ಯಸ್ಥರಾದ ಡಾ| ಶರತ್ ಕುಮಾರ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಡಾ| ನಿಖಿತಾರವರು ಈ ಸಾಧನೆ ಮಾಡಿರುತ್ತಾರೆ. ಪ್ರಸಕ್ತ ಅಮೇರಿಕಾ ದಲ್ಲಿರುವ ಇವರು ಯುವವಾಹಿನಿ ಕುಟುಂಬದವರಾಗಿದ್ದು, ಯುವವಾಹಿನಿ (ರಿ) ಕೇಂದ್ರ ಸಮಿತಿಯ ಪ್ರಥಮ ಅಧ್ಯಕ್ಷ ಒಅಈ ಸಂಸ್ಥೆಯ ನಿವೃತ್ತ ಅಧಿಕಾರಿ, ಪ್ರಸಕ್ತ ನ್ಯಾಯವಾದಿಯಾಗಿರುವ ಎಂ. ಸಂಜೀವ ಪೂಜಾರಿ ಹಾಗೂ ಶ್ರೀ ಗೋಕರ್ಣನಾಥ ಬ್ಯಾಂಕಿನ ಅಧಿಕಾರಿ ಶ್ರೀಮತಿ ನಿರ್ಮಲಾ ಸಂಜೀವ್ ಇವರುಗಳ ಏಕೈಕ ಪುತ್ರಿ. ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸುರತ್ಕಲ್ ಕೆ.ಆರ್.ಇ.ಸಿ. ಹೈಯರ್ ಪ್ರೈಮರಿ ಶಾಲೆಯಲ್ಲಿ ಪೂರೈಸಿದ ನಿಖಿತಾ ಹೈಸ್ಕೂಲ್ ವಿದ್ಯಾಭ್ಯಾಸವನ್ನು ಸುರತ್ಕಲ್‍ನ ವಿದ್ಯಾದಾಯಿನಿಯಲ್ಲಿ ಮುಗಿಸಿದರು. ಪದವಿ ಪೂರ್ವ ಶಿಕ್ಷಣವನ್ನು ಸುರತ್ಕಲ್‍ನ ಗೋವಿಂದದಾಸ ಕಾಲೇಜಿನಲ್ಲಿ ಮುಗಿಸಿ ಮಂಗಳೂರಿನ ಎ.ಜೆ. ಇನ್ಸಿಟ್ಯೂಟ್ ಆಫ್ ಡೆಂಟಲ್ ಸೈಯನ್ಸ್‍ನಲ್ಲಿ ದಂತ ವೈದ್ಯಕೀಯ ಪದವಿಯನ್ನು (ಬಿ.ಡಿ.ಎಸ್) ಪಡೆದರು. ದಂತ ವೈದ್ಯಕೀಯ ಸ್ನಾತಕೋತ್ತರ ಪದವಿಗಾಗಿ ಸುಳ್ಯದ ಕೆ.ವಿ.ಜಿ. ಕಾಲೇಜ್ ಆಫ್ ಡೆಂಟಲ್ ಸೈಯನ್ಸಸ್‍ಗೆ ಸೇರಿ ಇದೀಗ ಅತ್ಯುತ್ತಮ ಸಾಧನೆಯೊಂದಿಗೆ ಪರಿಣತಿ ವೈದ್ಯೆಯಾಗಿ ಹೊರಹೊಮ್ಮಿದ್ದಾರೆ. ಈ ನಡುವೆ ಪ್ರಸಿದ್ಧ ಹೋಂಡಾ ಮೋಟಾರ್ಸ್ ಕಂಪೆನಿಯಲ್ಲಿ ಅಟೋಮೊಬೈಲ್ ಡಿಸೈನ್ ಇಂಜಿ ನಿಯರ್ ಆಗಿರುವ ಶ್ರೀ ಸುಕೇಶ್ ಸುವರ್ಣರೊಂದಿಗೆ ವಿವಾಹವಾಗಿ ತಮ್ಮ ಮುದ್ದಿನ ಕುವರಿ ಸಾನಿಧ್ಯಳೊಂದಿಗೆ ಅಮೇರಿಕಾದ ಒಹಾಯೋ ನಗರದಲ್ಲಿ ನೆಲೆಸಿದ್ದಾರೆ. ಅಲ್ಲಿನ ಅರ್ಹತಾ ಪರೀಕ್ಷೆಯೊಂದನ್ನು ಬರೆದು ದಂತ ವೈದ್ಯಕೀಯ ಕ್ಷೇತ್ರದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುವ ಬಯಕೆ ಹೊಂದಿರುತ್ತಾರೆ. ಜೊತೆಗೆ ಸಂಶೋಧನೆಯಲ್ಲಿ ತೊಡಗಿ ಪಿ.ಎಚ್‍ಡಿ. ಪದವಿಯನ್ನು ಗಳಿಸುವ ಯೋಜನೆಯನ್ನು ಹಾಕಿಕೊಂಡಿದ್ದಾರೆ.
ಚಿಕ್ಕಂದಿನಲ್ಲೇ ಬಹುಮುಖ ಪ್ರತಿಭೆಯನ್ನು ಮೈಗೂಡಿಸಿದ್ದ ಡಾ| ನಿಖಿತಾ ಶಾಸ್ತ್ರೀಯ ನೃತ್ಯ ಭರತನಾಟ್ಯದ ಸೀನಿಯರ್ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಚಿತ್ರಕಲಾ ವಿಭಾಗದ ಉನ್ನತ ಅರ್ಹತಾ ಪತ್ರವನ್ನು ಪಡೆದಿದ್ದಾರೆ. ಸಂಗೀತದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು ತಮ್ಮ ಪತಿಯೊಂದಿಗೆ ಯೂರೋಪ್ ಮತ್ತು ಏಷ್ಯಾದ ಹೆಚ್ಚಿನೆಲ್ಲಾ ದೇಶಗಳನ್ನು ಸುತ್ತಿ ಬಂದಿದ್ದಾರೆ. ಬಹುಮುಖ ಪ್ರತಿಭೆಯ, ವಿಶಿಷ್ಠ ಸಾಧನೆಯ ಡಾ| ನಿಖಿತಾರವರನ್ನು ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ದಿನಾಂಕ 06.08.2017 ರಂದು ಉಪ್ಪಿನಂಗಡಿಯ ಎಚ್ ಎಮ್.ಆಡಿಟೋರಿಯಂ ಇಲ್ಲಿ ಜರುಗಿದ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ತಮಗೆ ಯುವವಾಹಿನಿ ಗೌರವ ಅಭಿನಂದನೆ’2017 ನೀಡಿ ಗೌರವಿಸುತ್ತಿದೆ

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಕೆ.ವಸಂತ ಬಂಗೇರ, ಐ ಎಪ್ ಎಸ್ ಅಧಿಕಾರಿ ಶ್ರೀ ದಾಮೋದರ ಎ.ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ ಜಯಾನಂದ .ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲು, ಕಾಸರಗೋಡು ಸರಕಾರಿ ಕಾಲೇಜು ಸಹ ಪ್ರಾಧ್ಯಾಪಕರಾದ ಡಾ.ರಾಜೇಶ್ ಬೆಜ್ಜಂಗಳ,ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಸಮಾವೇಶ ನಿರ್ದೇಶಕರಾದ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್, ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಉಪಸ್ಥಿತರಿದ್ದರು.

One thought on “ಡಾ| ನಿಖಿತಾ ಸುಕೇಶ್

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!