ಇವರು ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯಾರು ದಿ| ಸುಬ್ಬಪ್ಪ ಪೂಜಾರಿ ಹಾಗೂ ಲೀಲಾವತಿ ದಂಪತಿಗಳ ಪುತ್ರ. ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಪ್ರಸ್ತುತ ಪ್ರಾಂಶುಪಾಲರಾಗಿರುವ ಪ್ರೊ| ಅಚ್ಯುತ್ತ ಪೂಜಾರಿ ಕೆ. ಅವರಿಗೆ ಪಿಎಚ್‍ಡಿ ಪದವಿ ಲಭಿಸಿದೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಶಾಸ್ತ್ರ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥ ಪ್ರೊ| ವೈ. ಮುನಿರಾಜುರವರ ಮಾರ್ಗದರ್ಶನದಲ್ಲಿ ಮಂಡಿಸಿರುವ¸An Empirical Analysis of Banker & Customer Relationship Strategies with reference to marginal farmers : A study of D.K. District’ ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವ ವಿದ್ಯಾನಿಲಯವು ಪಿಎಚ್‍ಡಿ ಪದವಿ ನೀಡಿ ಗೌರವಿಸಿದೆ. ಇವರ ಪತ್ನಿ ಸುನಂದಾ ಬೆಳ್ಳಾರೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದಾರೆ. ಇತ್ತೀಚೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಪದವಿ ಹಸ್ತಾಂತರಿಸಲಾಯಿತು. ಇವರಿಗೆ ತಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತಾ ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ದಿನಾಂಕ 06.08.2017 ರಂದು ಉಪ್ಪಿನಂಗಡಿಯ ಎಚ್ ಎಮ್.ಆಡಿಟೋರಿಯಂ ಇಲ್ಲಿ ಜರುಗಿದ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ‘ಯುವವಾಹಿನಿ ಗೌರವ ಅಭಿನಂದನೆ’ ನೀಡಿ ಗೌರವಿಸುತ್ತಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಕೆ.ವಸಂತ ಬಂಗೇರ, ಐ ಎಪ್ ಎಸ್ ಅಧಿಕಾರಿ ಶ್ರೀ ದಾಮೋದರ ಎ.ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ ಜಯಾನಂದ
, ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲು, ಕಾಸರಗೋಡು ಸರಕಾರಿ ಕಾಲೇಜು ಸಹ ಪ್ರಾಧ್ಯಾಪಕರಾದ ಡಾ.ರಾಜೇಶ್ ಬೆಜ್ಜಂಗಳ,ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಸಮಾವೇಶ ನಿರ್ದೇಶಕರಾದ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್, ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಉಪಸ್ಥಿತರಿದ್ದರು