Yuvavahini

AUG 06, 2017 12.01 PM IST

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ(ರಿ) ,ಮಂಗಳೂರು ಸಂಸ್ಥೆಗೆ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ -2017

ಬ್ರಹ್ಮಶ್ರೀ ನಾರಾಯಣ ಗುರುಗಳು 1909ರಲ್ಲಿ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಅಸ್ಖಲಿತ ವಾಣಿಯಿಂದ ಹರಿದು ಬಂದ ಅತುಲನೀಯವಾದ ಜ್ಞಾನಾಮೃತದಿಂದ ಪ್ರೇರಿತರಾದ ನಮ್ಮ ಸಮಾಜ ಬಾಂಧವರು 1910ರಲ್ಲಿ ಶ್ರೀ ವೆಂಕಟೇಶ ಭಜನಾ ಸಂಘವನ್ನು ಸ್ಥಾಪನೆ ಮಾಡಿದರು. ಬಳಿಕ ಶಿವಭಕ್ತಿ ಯೋಗ ಸಂಘವೆಂಬ ಸಮಾನ ಮನಸ್ಕ ಇನ್ನೊಂದು ಸಂಘವನ್ನು ಸೇರ್ಪಡೆಗೊಳಿಸಿ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ ಎಂಬ ನೂತನ ಸಂಘಟನೆ ಸ್ಥಾಪನೆಯಾಯಿತು. ಈ ಸಂಸ್ಥೆ 1926ರಲ್ಲಿ ಸರಕಾರದ ಆಗಿನ ರಿಜಿಸ್ಟ್ರೇಶನ್ ಆ್ಯಕ್ಟ್‍ನಂತೆ ಸಂಖ್ಯೆ 2/1925-26 ರಂತೆ ನೋಂದಣಿ ಆಗಿದೆ.1925ರಲ್ಲಿ ಮತ್ತು 1935ರಲ್ಲಿ ಆಗಿನ ಕಲೆಕ್ಟರ್‍ರವರು ಮಂಗಳೂರಿನ ಪೆಟ್‍ಲ್ಯಾಂಡ್ ಪೇಟೆ ಎಂಬಲ್ಲಿ (ಈಗಿನ ಗಾಂಧಿನಗರ) ಈ ಸಂಘಕ್ಕೆ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಜಮೀನನ್ನು ಮಂಜೂರು ಮಾಡಿದರು. ಸದ್ರಿ ಸ್ಥಳದಲ್ಲಿ ನಮ್ಮ ಸಮಾಜ ಬಾಂಧವರು ಕಂಟ್ರಾಕ್ಟರ್ ದೂಮಪ್ಪ ಹಾಗೂ ಕರ್ಕೇರ ಕುಟುಂಬಸ್ಥರು ಸೇರಿ ವಿದ್ಯಾರ್ಥಿ ನಿಲಯದ ಕಟ್ಟಡವನ್ನು ನಿರ್ಮಿಸಿ, ಅದಕ್ಕೆ ಸೂಟರ್ ಹಾಸ್ಟೆಲ್ ಎಂದು ಹೆಸರಿಡಲಾಯಿತು. ಮಂಗಳೂರಿನಿಂದ ದೂರದ ಪ್ರದೇಶದಲ್ಲಿದ್ದ ವಿದ್ಯಾರ್ಥಿಗಳಿಗೆ ಮಂಗಳೂರಿನಲ್ಲಿ ನೆಲೆಸಿ ವಿದ್ಯಾಭ್ಯಾಸ ಮಾಡಲು ಅವಕಾಶ ಕಲ್ಪಿಸಲಾಯಿತು.

ಮುಂದೆ 1980ರ ಸಾಲಿನಲ್ಲಿ ನಮ್ಮ ಸಮಾಜದ ಕಣ್ಮಣಿ ಮಾನ್ಯ ಜನಾರ್ದನ ಪೂಜಾರಿಯವರ ಪ್ರೇರಣೆ ಮತ್ತು ಮಾರ್ಗದರ್ಶನದಲ್ಲಿ ಸದ್ರಿ ಸೂಟರ್ ಹಾಸ್ಟೆಲ್ ಇದ್ದ ಸ್ಥಳದಲ್ಲಿ ಗೋಕರ್ಣನಾಥೇಶ್ವರ ಕಾಲೇಜನ್ನು ಸ್ಥಾಪಿಸಲಾಯಿತು. ಅಂದಿನಿಂದ ಇಂದಿನವರೆಗೆ ಸದ್ರಿ ಕಾಲೇಜಿನಲ್ಲಿ ಅತಿ ಬಡವರು, ಇತರ ವಿದ್ಯಾಸಂಸ್ಥೆಗಳಿಂದ ಪ್ರವೇಶ ನಿರಾಕರಿಸಲ್ಪಟ್ಟ ಅವಕಾಶ ವಂಚಿತ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಲು ಅನುಕೂಲ ಕಲ್ಪಿಸಲಾಗುತ್ತಿದೆ. ಸದರಿ ವಿದ್ಯಾ ಸಂಸ್ಥೆ ಮುಂದಕ್ಕೆ ಬೆಳೆಯುತ್ತಾ ಪದವಿ ವಿಭಾಗ, ವಾಣಿಜ್ಯದಲ್ಲಿ ಸ್ನಾತಕೋತ್ತರ ವಿಭಾಗ ಹಾಗೂ ಶಿಕ್ಷಣ ಮಹಾ ವಿದ್ಯಾಲಯ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತ ಮುಂದೆ ಸಾಗುತ್ತಿದೆ. ಸಂಘವು ಬ್ರಹ್ಮಶ್ರೀ ನಾರಾಯಣ ಗುರುವರ್ಯರು ಪ್ರತಿಪಾದಿಸಿದ ತತ್ವ ಆದರ್ಶಗಳ ಬೆಳಕಲ್ಲಿ ಕಾರ್ಯಾಚರಿಸುತ್ತಾ ಉಚಿತ ಪ್ರವೇಶ ನೀಡುತ್ತಿದೆ. ಯಾವುದೇ ಜಾತಿ ಮತ ಭೇದವನ್ನು ಈ ಸಂಸ್ಥೆ ತೋರಿಸುತ್ತಿಲ್ಲ.

ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುವುದು, ವೈದ್ಯಕೀಯ ಕೇಂದ್ರವನ್ನು ನಡೆಸಿ ಉಚಿತವಾಗಿ ವೈದ್ಯಕೀಯ ನೆರವನ್ನು ತಜ್ಞ ವೈದ್ಯರ ಮುಖೇನ ನೀಡಲಾಗುತ್ತದೆ. ಗೃಹಪತ್ರಿಕೆ ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸುತ್ತಾ ಸಮಾಜದ ಚಟುವಟಿಕೆ, ಇತರ ಸಮಾಜದ ಚಟುವಟಿಕೆ, ಇತರ ಸಮಾಜ ಸೇವಾ ಸಂಘಗಳ ಸಾಧನೆ ಹಾಗೂ ಪ್ರತಿಭೆಗಳನ್ನು ಗುರುತಿಸಿ ಪ್ರಕಟಿಸಲಾಗುತ್ತದೆ. ಶ್ರೀಗೋಕರ್ಣನಾಥ ಕ್ಷೇತ್ರ, ಕುದ್ರೋಳಿ ಇಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮ ಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದೆ. ಸಮಾಜ ಬಾಂಧವರ ಕೊಡುಗೆಗಳ ಹಾಗೂ ಇತರ ದಾನಿಗಳ ನೆರವುಗಳಿಂದ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘವು ನಿರಂತರ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಸಮಾಜಮುಖಿ ಚಿಂತನೆಗಳ ಧೀಮಂತ ನಾಯಕರ ನಿರಂತರ ಶ್ರಮ, ಸೇವೆ, ದೂರಗಾಮಿ ಚಿಂತನೆಯೊಂದಿಗಿನ ರಚನಾತ್ಮಕ, ಅಭಿವೃದ್ಧಿಪರ ಕಾರ್ಯಾಚರಣೆ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ (ರಿ) ಗಾಂಧಿನಗರ, ಮಂಗಳೂರು ಇವರ ಬೆಳವಣಿಗೆಯಲ್ಲಿ ಮೈಲಿಗಲ್ಲಾಗಿದೆ. ಮುಂದೆಯೂ ಸಮಾಜದ ಅಭಿವೃದ್ಧಿಯ ಮಹದುದ್ದೇಶದಿಂದ ಅನೇಕ ಯೋಜನೆಗಳು, ಯೋಚನೆಗಳು ಸಂಘದಲ್ಲಿದ್ದು ಕುದ್ರೋಳಿ ಶ್ರೀ ಗೋಕರ್ಣನಾಥ ಮತ್ತು ಅನ್ನಪೂರ್ಣೇಶ್ವರಿ ದೇವಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುವರ್ಯರು ಈ ಸಂಘವನ್ನು ಇನ್ನೂ ಬೆಳೆಸುವಲ್ಲಿ ಸಂಘದ ಅಧ್ಯಕ್ಷ ಹಾಗೂ ಸರ್ವಸದಸ್ಯರುಗಳಿಗೆ ಹರಸಲೆಂದು ಆಶಿಸುತ್ತಾ ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ (ರಿ) ಗಾಂಧಿನಗರ, ಮಂಗಳೂರು ಈ ಸಂಸ್ಥೆಯನ್ನು ಅದರ ಶೃದ್ಧಾಮಯ ಸಾಧನೆಯನ್ನು ಗುರುತಿಸಿ, ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ದಿನಾಂಕ 06.08.2017 ರಂದು ಉಪ್ಪಿನಂಗಡಿಯ ಎಚ್ ಎಮ್.ಆಡಿಟೋರಿಯಂ ಇಲ್ಲಿ ಜರುಗಿದ  30ನೇ ವಾರ್ಷಿಕ ಸಮಾವೇಶದಲ್ಲಿ “ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ” ನೀಡಿ ಗೌರವಿಸುತ್ತದೆ.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಕೆ.ವಸಂತ ಬಂಗೇರ, ಐ ಎಪ್ ಎಸ್ ಅಧಿಕಾರಿ ಶ್ರೀ ದಾಮೋದರ ಎ.ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ ಜಯಾನಂದ, ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲು, ಕಾಸರಗೋಡು ಸರಕಾರಿ ಕಾಲೇಜು ಸಹ ಪ್ರಾಧ್ಯಾಪಕರಾದ ಡಾ.ರಾಜೇಶ್ ಬೆಜ್ಜಂಗಳ,ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಸಮಾವೇಶ ನಿರ್ದೇಶಕರಾದ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್, ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!