ಬೆಳ್ತಂಗಡಿ ತಾಲೂಕಿನ ಹಳೇಕೋಟೆ ಬಾರ್ಯ ನಿವಾಸಿ ಶ್ರೀಮತಿ ರತ್ನ ಹಾಗೂ ಶ್ರೀ ಸುಂದರ ಬಂಗೇರ ದಂಪತಿಗಳ ಹೆಮ್ಮೆಯ ಸುಪುತ್ರರಾದ ಸ್ಮಿತೇಶ್ ಎಸ್. ಬಾರ್ಯ ಇವರು ನಾಟಕರಂಗ ಮತ್ತು ಸಾಂಸ್ಕ್ರತಿಕ ರಂಗದಲ್ಲಿ ಸಾಧನೆಗೈದು ಎಲ್ಲರ ಗಮನ ಸೆಳೆದವರು.Msc. In Psychology ಪದವಿ ಗಳಿಸಿರುವ ಇವರು ಪ್ರಸ್ತುತ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ಉಪನ್ಯಾಸಕರಾಗಿದ್ದಾರೆ. 500ರಕ್ಕೂ ಮಿಕ್ಕಿ ಸಾಂಸ್ಕ್ರತಿಕ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಇವರದು. 25ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯ ಹಾಗೂ 20ಕ್ಕೂ ಮಿಕ್ಕಿ ನಾಟಕಗಳ ನಿರ್ದೇಶನ ಮಾಡಿರುವ ಇವರು 2016ರಲ್ಲಿ World Book of Records ಗೆ ಸೇರಿದ ಜಗತ್ತಿನ ಅತೀ ಚಿಕ್ಕ ನಾಟಕ “ಮಹಾಕಾಲ”ದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದಾರೆ. 2015 ರಲ್ಲಿ ಆಳ್ವಾಸ್ ಕಾಲೇಜಿನಲ್ಲಿ ನಡೆದ ರಾಷ್ಟ್ರ ಮಟ್ಟದ ಚಕ್ರವ್ಯೂಹ ಸ್ಪರ್ಧೆಯಲ್ಲಿ ಪ್ರಹಸನ, ಏಕ ಪಾತ್ರಾಭಿನಯ ಮತ್ತು ಬೀದಿನಾಟಕಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. 2014ರಲ್ಲಿ ಹರಿಯಾಣದಲ್ಲಿ ನಡೆದ ರಾಷ್ಟ್ರಮಟ್ಟದ ಪ್ರಹಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆಅನೇಕ ಸಂಘ ಸಂಸ್ಥೆಗಳಲ್ಲಿ ಸಾಹಿತ್ಯಿಕ, ,ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ಅತ್ಯುತ್ತಮ ನಿರೂಪಣೆ ಪ್ರಶಸ್ತಿ ಕೂಡಾ ಗಳಿಸಿರುತ್ತಾರೆ. ಹಲವಾರು ಸಂಘ ಸಂಸ್ಥೆಗಳು ಇವರ ಸಾಧನೆಯನ್ನು ಗುರುತಿಸಿ ಗೌರವಿಸಿದೆ. ಮುಂದಿನ ದಿನಗಳಲ್ಲಿ ಇವರ ಸಾಧನೆ ಇದೇ ರೀತಿ ಮುಂದುವರಿಯಲಿ. ಬಿಲ್ಲವ ಸಮಾಜದ ಅಭಿಮಾನದ ಗೌರವಕ್ಕೆ ಪಾತ್ರರಾದ ಇವರಿಗೆ ಅವರ ಪ್ರತಿಭೆಯನ್ನು ಗುರುತಿಸಿ, ಗೌರವಿಸುತ್ತಾ .ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ದಿನಾಂಕ 06.08.2017 ರಂದು ಉಪ್ಪಿನಂಗಡಿಯ ಎಚ್ ಎಮ್.ಆಡಿಟೋರಿಯಂ ಇಲ್ಲಿ ಜರುಗಿದ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ‘ಯುವವಾಹಿನಿ ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸುತ್ತಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಕೆ.ವಸಂತ ಬಂಗೇರ, ಐ ಎಪ್ ಎಸ್ ಅಧಿಕಾರಿ ಶ್ರೀ ದಾಮೋದರ ಎ.ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ ಜಯಾನಂದ,ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲು, ಕಾಸರಗೋಡು ಸರಕಾರಿ ಕಾಲೇಜು ಸಹ ಪ್ರಾಧ್ಯಾಪಕರಾದ ಡಾ.ರಾಜೇಶ್ ಬೆಜ್ಜಂಗಳ,ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಸಮಾವೇಶ ನಿರ್ದೇಶಕರಾದ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್, ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಉಪಸ್ಥಿತರಿದ್ದರು