Yuvavahini

AUG 26, 2017 9.21 AM IST

ಮಿಂಚಿನ ಓಟಗಾರ ಸ್ವಸ್ತಿಕ್ ಕೆ.

ಮಂಗಳೂರಿನ ಸೋಮೇಶ್ವರ ಗ್ರಾಮದ ದಿವಂಗತ ಪುರುಷೋತ್ತಮ ಮತ್ತು ಪ್ರಮೀಳಾ ದಂಪತಿಯ ದ್ವಿತೀಯ ಪುತ್ರ ವೇಗದ ಓಟದ ಸರದಾರನಾಗಿ ಮೂಡಿಬರುತ್ತಿರುವ ಪ್ರತಿಭೆ ಸ್ವಸ್ತಿಕ್ ಕೆ. ಶಾಲಾ ದೈಹಿಕ ಶಿಕ್ಷಕರಾದ ಶ್ರೀ ಸಂದೀಪ್‍ರವರ ಮಾರ್ಗದರ್ಶನದಲ್ಲಿ ಸಾಧನೆಯ ಸರದಾರ. ಸ್ವಸ್ತಿಕ್ ಕೆ. ಅವರು ಯುವ ಜಿಲ್ಲಾಮಟ್ಟದ 100 ಮೀಟರ್ ಓಟದಲ್ಲಿ ಪ್ರಥಮ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 16 ವರ್ಷ ವಯೋಮಾನದ 100 ಮೀಟರ್ ಸ್ಪರ್ಧೆಯಲ್ಲಿ 10.8 ಸೆಕೆಂಡಿನ ದಾಖಲೆಯೊಂದಿಗೆ ಪ್ರಥಮ ಸ್ಥಾನ, 2016-17ನೇ ಸಾಲಿನಲ್ಲಿ 19ರ ವಯೋಮಿತಿಯ ಸ್ಪರ್ಧೆಯಲ್ಲಿ ಪ್ರಶಸ್ತಿ, ಬೆಂಗಳೂರಿನಲ್ಲಿ ನಡೆದ 18ರ ವಯೋಮಿತಿಯ ಯುತ್ ನ್ಯಾಶನಲ್ ಕ್ರೀಡಾ ಕೂಟದಲ್ಲಿ ಪ್ರಥಮ ಸ್ಥಾನ, ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ, ಗುಜರಾತಿನಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ, ಮಂಗಳೂರಿನಲ್ಲಿ ನಡೆದ ಖೇಲೋ ಇಂಡಿಯಾ ವಾರ್ಷಿಕ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುವುದು ಇವರ ಸಾಧನೆಗಳ ಪ್ರತೀಕ. ರಾಷ್ಟ್ರ ಮಟ್ಟದ ಹೆಚ್ಚಿನ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಉತ್ತಮ ಸಾಧನೆಯನ್ನು ಮಾಡಿದ್ದು ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ಇವರಿಂದ ಕ್ರೀಡಾರಂಗದಲ್ಲಿ ಇನ್ನಷ್ಟು ಸಾಧನೆಗಳು ಮೂಡಿ ಬರಲಿ ಎಂದು ಹಾರೈಸುತ್ತಾ ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ದಿನಾಂಕ 06.08.2017 ರಂದು ಉಪ್ಪಿನಂಗಡಿಯ ಎಚ್ ಎಮ್.ಆಡಿಟೋರಿಯಂ ಇಲ್ಲಿ ಜರುಗಿದ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ‘ಯುವವಾಹಿನಿ ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸುತ್ತಿದೆ.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಕೆ.ವಸಂತ ಬಂಗೇರ, ಐ ಎಪ್ ಎಸ್ ಅಧಿಕಾರಿ ಶ್ರೀ ದಾಮೋದರ ಎ.ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ ಜಯಾನಂದ,ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲು, ಕಾಸರಗೋಡು ಸರಕಾರಿ ಕಾಲೇಜು ಸಹ ಪ್ರಾಧ್ಯಾಪಕರಾದ ಡಾ.ರಾಜೇಶ್ ಬೆಜ್ಜಂಗಳ,ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಸಮಾವೇಶ ನಿರ್ದೇಶಕರಾದ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್, ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!