Yuvavahini

AUG 12, 2017 10.30 AM IST

ಯುವವಾಹಿನಿ (ರಿ) ಸಸಿಹಿತ್ಲು ಘಟಕ

ಶ್ರೀಕೃಷ್ಣ ವೇಷ ಸ್ಪರ್ಧೆ-ಗೆದ್ದವರಿಗೆ ಬಂಗಾರದ ಪದಕ

ಅವಕಾಶಗಳು ಎಳವೆಯಲ್ಲಿಯೇ ಸಿಕ್ಕಾಗ ಮಕ್ಕಳ ಪ್ರತಿಭಾ ವಿಕಸನವು ಅತ್ಯಂತ ವೇಗದಿಂದ ಸಾಗುತ್ತದೆ. ಮಕ್ಕಳ ಪ್ರಾಯಕ್ಕೆಅನುಗುಣವಾದ ಸಾಮಥ್ರ್ಯಗಳು ಪ್ರತಿಯೊಬ್ಬರಲ್ಲೂ ಇದೆ ಅದನ್ನು ಗುರುತಿಸಿಕೊಳ್ಳುವ ಕೆಲಸವನ್ನು ಹೆತ್ತವರು ಮಾಡಬೇಕಿದೆ, ಇಂತಹ ಅವಕಾಶಗಳಲ್ಲಿ ಇಂದಿನ ಕಾರ್ಯಕ್ರಮವೂ ಹೆಚ್ಚು ಪ್ರಸ್ತುತ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ) ಅಗ್ಗಿದಕಳಿಯ ಸಸಿಹಿತ್ಲು ಇದರ ಅಧ್ಯಕ್ಷರಾದ ಪ್ರಕಾಶ್‍ಕುಮಾರ್ ಬಿಎನ್ ತಿಳಿಸಿದರು.
ಅವರು ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಯುವವಾಹಿನಿ(ರಿ) ಸಸಿಹಿತ್ಲು ಘಟಕದ ವತಿಯಿಂದ ನಡೆದ ಶ್ರೀ ಕೃಷ್ಣ ವೇಷ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಸೌಹಾರ್ದ ಮತ್ತು ಸಾಂಸ್ಕ್ರತಿಕ  ಸಮಾಜ ಹೆಚ್ಚು ಕ್ರೀಯಾಶೀಲವಾಗುತ್ತದೆ ಎನ್ನುವ ಪರಿಕಲ್ಪನೆಯಲ್ಲಿ ಯುವವಾಹಿನಿ ಸಸಿಹಿತ್ಲು ಘಟಕವು ದಿನಾಂಕ 12-08-2017 ರಂದು ವಲಯ ಮಟ್ಟದ ಶ್ರೀಕೃಷ್ಣ ವೇಷ ಸ್ಪರ್ಧೆಯನ್ನು ನಡೆಸಿತ್ತು.ಊರ ಪರವೂರಿನಿಂದ 33 ಮಂದಿ ಮಕ್ಕಳು ಮೂರು ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಪ್ರತಿಯೊಂದು ವಿಭಾಗದ ವಿಜೇತರಿಗೂ ಮೊದಲ ಬಹುಮಾನ ಚಿನ್ನದ ಉಂಗುರ ಎರಡನೇ ಬಹುಮಾನ 10 ಗ್ರಾಂ ಬೆಳ್ಳಿಯ ನಾಣ್ಯವನ್ನು ವಿತರಿಸಲಾಯಿತು.ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಯಶವಂತ ಪೂಜಾರಿ ಅವರು ಬಹುಮಾನ ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಒಂದು ಗ್ರಾಮ ವ್ಯಾಪ್ತಿಗೆ ಹೊಂದಿಕೊಂಡಂತೆ  ಸಸಿಹಿತ್ಲು ಘಟಕ ಇದೆಯಾದರೂ ಸಾಂಸ್ಕ್ರತಿಕವಾಗಿ ಮತ್ತು ಹೊಸತನದ ಕಾರ್ಯಕ್ರಮ ರೂಪಿಸುವಲ್ಲಿ ಕೇಂದ್ರ ಸಮಿತಿಯಲ್ಲಿ ಉತ್ತಮ ಹೆಸರು ಸಸಿಹಿತ್ಲು ಘಟಕಕ್ಕೆಇದೆ.ಮಕ್ಕಳನ್ನು ವೇದಿಕೆಯ ಮೇಲೆ ಕರೆಸಿ ಅವರಿಂದ ಪ್ರತಿಭೆಯನ್ನು ಹೊರಹೊಮ್ಮಿಸಿ ಚಿನ್ನದ ಬಹುಮಾನ ನೀಡಿ ಪ್ರೋತ್ಸಾಹಿಸುವ ಕೆಲಸ ಹಿರಿದಾದುದು ಎಂದರು.ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಮಾವೇಶ ನಿರ್ದೇಶಕರಾದ ಹರೀಶ್ ಪೂಜಾರಿ ಮಾತನಾಡಿ, ನನಗೆ ಸಸಿಹಿತ್ಲು ಘಟಕದ ಮೇಲೆ ವಿಶೇಷ ಪ್ರೀತಿ, ಹೊಸತನದ ಕಾರ್ಯಕ್ರಮಇಲ್ಲಿ ಮೂಡಿಬರುತ್ತಿದೆ, ಇಂದಿನ ಕಾರ್ಯಕ್ರಮ ಇತರ ಕಾರ್ಯಕ್ರಮಕ್ಕಿಂತ ಭಿನ್ನವಾಗಿದ್ದು ಮನಸಿಗೆ ಮುದ ನೀಡಿತು ಎಂದರು. ಅದೇರೀತಿ ವೇದಿಕೆಯಲ್ಲಿದ್ದ ಘಟಕದ ಸಲಹೆಗಾರರಾದ ರಾಜೀವ ಪೂಜಾರಿಅವರು ಸಸಿಹಿತ್ಲು ಘಟಕಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ) ಅಗ್ಗಿದಕಳಿಯ ಸಸಿಹಿತ್ಲು ಇದರ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್‍ಕುಮಾರ್ ಬಿ.ಎನ್, ಮಹಿಳಾ ಸಮಿತಿಯ ಅಧ್ಯಕ್ಷೆ ಶುಭಾ ಪ್ರೇಮ್‍ನಾಥ್, ಘಟಕದಅಧ್ಯಕ್ಷರಾದ ಪ್ರದೀಪ್‍ಎಸ್.ಆರ್, ಕಾರ್ಯಕ್ರಮದ ಸಂಚಾಲಕರಾದ ಪ್ರತಾಪ್‍ಚಂದ್ರ ಮತ್ತುರೀತಾ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಕಳೆದ ಬಾರಿಯ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಘಟಕದ ಸದಸ್ಯರನ್ನುಅಭಿನಂದಿಸಲಾಯಿತು.

One thought on “ಶ್ರೀಕೃಷ್ಣ ವೇಷ ಸ್ಪರ್ಧೆ-ಗೆದ್ದವರಿಗೆ ಬಂಗಾರದ ಪದಕ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!