Yuvavahini

SEP 17, 2017 1.24 PM IST

ಯುವವಾಹಿನಿ (ರಿ) ಮಾಣಿ ಘಟಕದ ಉದ್ಘಾಟನೆ

ಪ್ರೀತಿ ವಿಶ್ವಾಸದ ಬೆಸುಗೆ ಯುವವಾಹಿನಿ-ಸುನೀಲ್ ಕುಮಾರ್

ಸಮಾಜ ವನ್ನು ಕಟ್ಟಬೇಕಾಗಿರುವುದು ಹಣದಿಂದಲ್ಲ. ಬದಲಾಗಿ ನಂಬಿಕೆ ವಿಶ್ವಾಸ ಮತ್ತು ಪ್ರೀತಿಯಿಂದ. ಈ ಮೂರರ ಬಂಧನ ಕಳಚಲಾಗದ್ದು. ಅಂತಹ ಬೆಸುಗೆಯನ್ನು ಯುವವಾಹಿನಿ ಬೆಸೆಯುತ್ತಿದೆ ಎಂದು ಚಿಂತಕ, ಯುವ ಸಂಘಟಕ ಸುನೀಲ್ ಕುಮಾರ್ ಬಜಾಲ್ ತಿಳಿಸಿದರು

ಅವರು ದಿನಾಂಕ 17.09.2017 ರಂದು ಬಂಟ್ವಾಳ ತಾಲೂಕಿನ ಮಾಣಿ ನಾರಾಯಣಗುರು ಸಮುದಾಯಭವನದಲ್ಲಿ ಜರುಗಿದ ಯುವವಾಹಿನಿಯ 26ನೇ ನೂತನ ಘಟಕ ಯುವವಾಹಿನಿ (ರಿ) ಮಾಣಿ ಘಟಕದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷರಾದ ಸಂಪತ್ ಬಿ.ಸುವರ್ಣ ಮಾತನಾಡಿ ಯುವಶಕ್ತಿ ಸಮಾಜದ ಸದುದ್ದೇಶಕ್ಕಾಗಿ ದುಡಿದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗುವುದು. ಈ ನಿಟ್ಟಿನಲ್ಲಿ ಶಿಸ್ತು ಬದ್ದ ಸಂಘಟನೆ ಯುವವಾಹಿನಿ ಬಿಲ್ಲವ ಸಮಾಜಕ್ಕೆ ಮಾತ್ರವಲ್ಲ ಇತರರಿಗೂ ಮಾದರಿಯಾಗಿದೆ ಎಂದರು. ಮಾಣಿ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ ಯುವವಾಹಿನಿ (ರಿ) ಮಾಣಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆ ಪ್ರಕಟಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಅವರು ನೂತನ ತಂಡಕ್ಕೆ ಪ್ರತಿಜ್ಞಾ ವಿಧಿ ಬೋಧಿಸಿದರು.ರಾಜೇಶ್ ಪೂಜಾರಿ ಬಾಬನಕಟ್ಟೆ ನೇತ್ರತ್ವದಲ್ಲಿ 29 ಸದಸ್ಯರ ಯುವವಾಹಿನಿ (ರಿ) ಮಾಣಿ ಘಟಕದ 2017-18 ನೇ ಸಾಲಿನ
ನೂತನ ಕಾರ್ಯಕಾರಿ ಸಮಿತಿಯ ಸದಸ್ಯರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಬೆಹರೈನ್ ಗುರುಸೇವಾ ಸಮಿತಿಯ ಸದಸ್ಯರಾದ ಸೌಮ್ಯಾ ಶೇಖರ್, ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಲಹೆಗಾರರಾದ ಬಿ.ತಮ್ಮಯ, ಮಾಣಿ ನಾರಾಯಣಗುರು ಸೇವಾ ಸಂಘದ ಗೌರವ ಅಧ್ಯಕ್ಷರಾದ ಈಶ್ವರ ಪೂಜಾರಿ, ಮಾಣಿ ನಾರಾಯಣಗುರು ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಜಯಂತಿ ವಿ.ಪೂಜಾರಿ, ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಲೋಕೇಶ್ ಸುವರ್ಣ ಅಲೆತ್ತೂರು, ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸತೀಶ್ ಪೂಜಾರಿ ಬಾಯಿಲ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಉದ್ಘಾಟನಾ ಸಮಾರಂಭಕ್ಕೆ ಮುನ್ನ ಬಾಬನಕಟ್ಟೆಯಿಂದ ಮಾಣಿ ನಾರಾಯಣಗುರು ಸಮುದಾಯ ಭವನಕ್ಕೆ ಗುರುವರ್ಯರ ಸಂದೇಶದ ವಾಹನಜಾಥಾ ಜರುಗಿತು.ಬ್ರಹ್ಮಶ್ರೀ ನಾರಾಯಣಗುರುಗಳ 163 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಗುರುಪೂಜೆ ನಡೆಯಿತು

ಸಹಸ್ರ ಸಹಸ್ರ ಸಂಖ್ಯೆಯಲ್ಲಿ ತುಂಬಿ ತುಳುಕಿದ ಜನಸ್ತೋಮ, ಅಚ್ಚುಕಟ್ಟಾದ ಸಭಾ ಕಾರ್ಯಕ್ರಮ ಎಲ್ಲರ ಆಕರ್ಷಣೆ ಕೇಂದ್ರವಾಯಿತು.
ಈ ಸಂದರ್ಭದಲ್ಲಿ ಮಾಣಿ ಬಿಲ್ಲವ ಸಂಘದ ಆಶ್ರಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು ಹಾಗೂ ಸಂಕಷ್ಟದಲ್ಲಿರುವ ಬಡ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಯಿತು
ಯುವವಾಹಿನಿ (ರಿ) ಮಾಣಿ ಘಟಕದ ಸಲಹೆಗಾರರಾದ ಪ್ರೇಮನಾಥ್ ಕೆ ಸ್ವಾಗತಿಸಿದರು.ವಿಶುಕುಮಾರ್ ದತ್ತಿನಿಧಿ ಸಂಚಲನಾ ಸಮಿತಿಯ ಸಂಚಾಲಕರಾದ ಟಿ.ಶಂಕರ ಸುವರ್ಣ ಪ್ರಸ್ತಾವನೆ ಮಾಡಿದರು, ಯುವವಾಹಿನಿ ಮಾಣಿ ಘಟಕದ ನೂತನ ಕಾರ್ಯದರ್ಶಿ ಪ್ರಶಾಂತ್ ಅನಂತಾಡಿ ಧನ್ಯವಾದ ನೀಡಿದರು, ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

2 thoughts on “ಪ್ರೀತಿ ವಿಶ್ವಾಸದ ಬೆಸುಗೆ ಯುವವಾಹಿನಿ-ಸುನೀಲ್ ಕುಮಾರ್

  1. ಎಡ್ಡೆ ಲೇಸ್ ಡ್ ನಿರೂಪಣೆ ಮಲ್ಪುನ ಭಾಗ್ಯ ಎಂಕ್ ತಿಕ್ಕ್ಂಡ್, ಎಂಕ್ ಅವಕಾಶ ಮಲ್ತ್ ಕೊರ್ನ ಮಾಂತೆರೆಗ್ಲಾ ಸೊಲ್ಮೆಲು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!