ಕೃಷಿಕರಿಗೆ ಸೋಣ ತಿಂಗಳು ಸಂಭ್ರಮದ ತಿಂಗಳು ಆಗಿರುವುದರಿಂದ ಈ ಕಾರ್ಯಕ್ರಮದ ಶೀರ್ಷಿಕೆ ಅರ್ಥಪೂರ್ಣವಾಗಿದೆ.ತಂತ್ರಜ್ಞಾನದಿಂದ ಮನಸ್ಸಿನ ಬದಲಾವಣೆ ಆಗಬಹುದೇ ಹೊರತು ಸಂಸ್ಕೃತಿ, ಸಂಸ್ಕಾರ ಹಾಗೂ ಜೀವನ ಪಾಠವನ್ನು ಕಲಿಸುವುದಿಲ್ಲ ಹಾಗಾಗಿ ಸಂಸ್ಕಾರದ ಜತೆಗೆ ಜೀವನ ಮೌಲ್ಯವನ್ನು ಅಳವಡಿಸುವುದು ಇಂದು ತೀರಾ ಅಗತ್ಯವಾಗಿದೆ ಎಂದು ಮಂಗಳೂರು ಮಹಿಳಾ ಮಂಡಲಗಳ ಒಕ್ಕೂಟದ ಸ್ಥಾಪಕ ಅಧ್ಯಕ್ಷರಾದ ಕೆ.ಎ.ರೋಹಿಣಿ ಅಭಿಪ್ರಾಯ ಪಟ್ಟರು.ಅವರು ದಿನಾಂಕ 09.09.2017 ರಂದು ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಜರುಗಿದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.ಮಂಗಳೂರು ಮಹಾನಗರ ಪಾಲಿಕೆಯ ಹಣಕಾಸು ಅಪೀಲು ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಪ್ರತಿಭಾ ಕುಳಾಯಿ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು
ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಮಂಗಳೂರು ಮಹಿಳಾ ಘಟಕದ ಸಲಹೆಗಾರಾದ ಅಶೋಕ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಕೆ ಮಾಡಿದರು.ಈ ಸಂದರ್ಭದಲ್ಲಿ ಗೃಹ ರಕ್ಷಕ ದಳದ ವಿಶೇಷ ಸೇವೆಯನ್ನು ಗುರುತಿಸಿ ರೇವತಿ ದಿನೇಶ್ ಇವರನ್ನು ಅಭಿನಂದಿಸಲಾಯಿತು.ಮಂಗಳೂರು ಮಹಿಳಾ ಘಟಕದ ಕಾರ್ಯದರ್ಶಿ ಸುನೀತಾ ವಂದಿಸಿದರು, ಮಾಜಿ ಅಧ್ಯಕ್ಷರಾದ ವಿದ್ಯಾ ರಾಕೇಶ್ ಕಾರ್ಯಕ್ರಮ ನಿರೂಪಿಸಿದರು.ಸಭಾ ಕಾರ್ಯಕ್ರಮದ ಬಳಿಕ ಘಟಕದ ಸದಸ್ಯೆಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೂರೆಗೊಂಡಿತು.ತುಳು ಸಂಸ್ಕೃತಿಗಳ ಬಗ್ಗೆ ರಾಕೇಶ್ ಕುಮಾರ್ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು
Nice Programe. Jai Yuvavahini