Yuvavahini

SEP 18, 2016 5.04 AM IST

ಯುವವಾಹಿನಿ(ರಿ) ಬೆಳುವಾಯಿ ಘಟಕ

ಬೆಳುವಾಯಿ ಘಟಕದ ಪದಗ್ರಹಣ ಕಾರ್ಯಕ್ರಮ

ಬೆಳುವಾಯಿ ಘಟಕದ 2016-17 ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ತಾ. 18-9-2016 ರಂದು ಬೆಳುವಾಯಿಯ ಷಣ್ಮುಖಾನಂದ ಸಭಾಗೃಹದಲ್ಲಿ ಜರಗಿತು.

ಕಾರ್ಯಕ್ರಮವನ್ನು ಮೂಡಬಿದ್ರೆಯ ಮಹಾವೀರ ಕಾಲೇಜಿನ ಉಪನ್ಯಾಸಕ ಹರೀಶ್ ಕೆ. ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಮಾಜ ಸೇವಾ ಸಂಘ ಬೆಳುವಾಯಿ ಇದರ ಅಧ್ಯಕ್ಷ ರಾಜೇಶ್ ಸುವರ್ಣ ಬೆಳುವಾಯಿ ಇವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷ ವಿಠಲ್ ಎಂ. ಪೂಜಾರಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಾಧು ಪೂಜಾರಿಯವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಭೋದಿಸಿದರು. ಘಟಕದ ವತಿಯಿಂದ ಕಿಡ್ನಿ ವೈಫಲ್ಯ ಕ್ಕೀಡಾದ ಸುರೇಶ್ ಮೂಡು ಮಾರ್ನಾಡು ಇವರಿಗೆ ರೂ. ೫,೦೦೦ ಮತ್ತು ಅಪಘಾತಕ್ಕೀಡಾಗಿ ಆಸ್ಪತ್ರೆಯ ಲ್ಲಿರುವ ಪವನ್ ಪೂಜಾರಿ ಯವರ ಚಿಕಿತ್ಸೆಗೆ ರೂ.೫,೦೦೦ವನ್ನು ಘಟಕದ ವತಿಯಿಂದ ನೀಡಲಾಯಿತು. ಬಳಿಕ ಸುರೇಖ ಚಂದ್ರಶೇಖರ್ ರವರ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಶರತ್ ಪೂಜಾರಿ ಯವರು ಸ್ವಾಗತಿಸಿದರು. ಸುರೇಖ ಚಂದ್ರಶೇಖರ್‌ರವರು ವಂದಿಸಿದರು. ನಿತಿನ್ ಬೆಳುವಾಯಿಯವರು ಕಾರ್ಯಕ್ರಮ ನಿರೂಪಿಸಿದರು.

೨೦೧೬-೧೭ನೇ ಸಾಲಿನ ನೂತನ ಪದಾಧಿಕಾರಿಗಳು: ಅಧ್ಯಕ್ಷರು- ಪ್ರದೀಪ್ ಸುವರ್ಣ, ಉಪಾಧ್ಯಕ್ಷರು- ರವಿ ಬಂಗೇರ, ಪ್ರಧಾನ ಕಾರ್ಯದರ್ಶಿ- ಶರತ್ ಪೂಜಾರಿ, ಜೊತೆ ಕಾರ್ಯದರ್ಶಿ- ಸುರೇಖ ಚಂದ್ರಶೇಖರ್, ಕೋಶಾಧಿಕಾರಿ- ಅನುಷ ಪೂಜಾರಿ, ಸಂಘಟನಾ ಕಾರ್ಯದರ್ಶಿ- ನವೀನ್ ಎಸ್. ಪೂಜಾರಿ, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕ- ಸಚಿನ್ ಪೂಜಾರಿ, ಸಮಾಜಸೇವೆ ನಿರ್ದೇಶಕ- ವಿಜಯ್ ಬೆಳುವಾಯಿ, ವ್ಯಕ್ತಿತ್ವ ವಿಕಸನ ನಿರ್ದೇಶಕ- ಪ್ರವೀಣ್ ಸುವರ್ಣ, ನಾರಾಯಣಗುರು ತತ್ವಾದರ್ಶ ಪ್ರಚಾರ ನಿರ್ದೇಶಕ- ನಿತಿನ್ ಬೆಳುವಾಯಿ, ವಿದ್ಯಾರ್ಥಿ ಸಂಘಟನಾ ನಿರ್ದೇಶಕರು – ಸ್ವಾತಿ ಪ್ರಿಯ, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ – ಹರಿಪ್ರಸಾದ್, ಸಾಹಿತ್ಯ ಹಾಗೂ ಸಾಂಸ್ಕೃತಿಕ ನಿರ್ದೇಶಕರು- ಮಮತ ಜಯಂತ್, ವಿದ್ಯಾನಿಧಿ ಸಂಚಾಲಕರು – ಸನ್ಮತ್ ಎನ್. ಸುವರ್ಣ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!