Yuvavahini

OCT 08, 2017 4.42 PM IST

ಯುವವಾಹಿನಿ (ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಗುರುಸ್ಮರಣೆ

ಗುರುಗಳು ತೋರಿದ ಹಾದಿಯಲ್ಲಿ ಸಂಘಟಿತ ಸಮಾಜ ನಿರ್ಮಿಸಬೇಕು

ಶ್ರೀ ಮಹಾಂಕಾಳಿ ದೈವಸ್ಥಾನ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಬಂಗೇರ ಕಾರ್ಯಕ್ರಮ ಉದ್ಘಾಟಿಸುತ್ತಿರುವುದು

ಮಹಾ ಮಾನವತಾವಾದಿ ಮೇರು ಸಂದೇಶ ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುವರ್ಯರು ಸಮಾಜದ ಒಳಿತಿಗಾಗಿ ದುಡಿದವರು. ಸಮಸ್ತ ಮಾನವ ಜನಾಂಗಕ್ಕೆ ಹೊಸ ಹಾದಿ ತೋರಿದ ಅವರ ಸಂದೇಶದ ಅನುಷ್ಠಾನದ ಜತೆಗೆ ಅವರು ತೋರಿದ ಹಾದಿಯಲ್ಲಿ ಸಂಘಟಿತ ಸಮಾಜ ನಿರ್ಮಾಣಕ್ಕೆ ಯತ್ನಿಸಬೇಕು ಎಂದು ಮಂಗಳೂರಿನ ಖ್ಯಾತ ವಕೀಲರು ಹಾಗು ಕಾಂತಾವರದ ಅಲ್ಲಮ ಪ್ರಭು ಪೀಠದ ಅಧ್ಯಕ್ಷರಾದ ಶ್ರೀ ಯಶೋಧರ ಪಿ. ಕರ್ಕೇರರವರು ತಿಳಿಸಿದರು

ಅವರು ಯುವವಾಹಿನಿ(ರಿ) ಕಂಕನಾಡಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜಯಂತಿಯ ಪ್ರಯುಕ್ತ ದಿನಾಂಕ 08.10.2017 ನೇ ರವಿವಾರ ಮಂಗಳೂರು – ಉಜ್ಜೋಡಿ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಜರುಗಿದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಪ್ರಧಾನ ಬಾಷಣಕಾರರಾಗಿ ಆಗಮಿಸಿ ಮಾತನಾಡಿದರು. ಶ್ರೀ ಮಹಾಂಕಾಳಿ ದೈವಸ್ಥಾನ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಬಂಗೇರ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು

ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಅತಿಥಿಯಾದ ಸಾಮಾಜಿಕ ಕಾರ್ಯಕರ್ತ ಹಾಗು ಎಸ್ & ಎಸ್ ಎಂಟರ್‌ಪ್ರೈಸಸ್‌ನ ಮಾಲಕರಾದ ದಿನೇಶ್ ಕಲ್ಲಡ್ಕ ಅಭಿಪ್ರಾಯ ಪಟ್ಟರು . ಮಂಗಳೂರಿನ ಪ್ರಖ್ಯಾತ ಉದ್ಯಮಿ ಹಾಗು ಕಂಕನಾಡಿ ಗರೋಡಿಯ ಮೊಕ್ತೇಸರರಾದ ಶ್ರೀ ಜಗದೀಪ್ ಡಿ ಸುವರ್ಣ,ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಯಶವಂತ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು ಕಾರ್ಯಕ್ರಮದ ಹಿರಿಯ ಸದಸ್ಯರಾದ ಜನಾರ್ಧನ ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷರಾದ ಗೋಪಾಲ್ ಎಂ ಪೂಜಾರಿಯವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಎಲ್ಲರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು

 ರಾಷ್ಟ್ರಮಟ್ಟದ ಕ್ರೀಡಾ ತರಬೇತುದಾರ ಹಾಗೂ ಕ್ರೀಡಾ ಶಿಕ್ಷಕ ಸಂದೀಪ್‌ರಾಜ್ ಮತ್ತು ಅಂತರಾಷ್ಟ್ರೀಯ ಕ್ರೀಡಾಪಟು ಚಿನ್ನದ ಪದಕ ವಿಜೇತ ಸ್ವಸ್ತಿಕ್‌ ಇವರುಗಳ ಸಾಧನೆಯನ್ನು ಗುರುತಿಸಿ ಅಭಿನಂದಿಸಲಾಯಿತು
ಯುವವಾಹಿನಿ ಕಂಕನಾಡಿ  ಘಟಕದ ಸಲಹೆಗಾರರಾಗಿ ಸೇವೆ  ಸಲ್ಲಿಸಿದ ಪರಮೇಶ್ವರ ಪೂಜಾರಿಯವರನ್ನು ಇದೇ ಸಂದರ್ಭದಲ್ಲಿ ಅವರ ಸೇವೆಯನ್ನು ಸ್ಮರಿಸಿ ಅಭಿನಂದಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರುಸ್ವಾಮಿಗಳ ಜಯಂತಿಯ ಪ್ರಯುಕ್ತ ಶಾಲಾ ಮಕ್ಕಳಿಗಾಗಿ ಏರ್ಪಡಿಸಿದ್ದ ಬಾಷಣ ಸ್ಪರ್ಧೆಯ ಬಹುಮಾನಗಳನ್ನು ವಿತರಿಸಲಾಯಿತು . ಕಂಕನಾಡಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಸನಿಲ್‌ರವರು ಗುರುಸ್ಮರಣೆಯ ಉದ್ದೇಶ ಹಾಗು ಯುವವಾಹಿನಿಯ ತತ್ವ ಧ್ಯೇಯಗಳ ಬಗ್ಗೆ ತಮ್ಮ ಪ್ರಾಸ್ತಾವಿಕ ಮಾತನಾಡಿದರು ಸಂಕ್ಷಿಪ್ತವಾಗಿ ವಿವರಿಸಿದರು ಕಾರ್ಯದರ್ಶಿಯಾದ ಶ್ರೀ ಮೋಹನ್ ಜಿ ಅಮೀನ್ ಧನ್ಯವಾದ ಅರ್ಪಿಸಿದರು. ರಾಕೇಶ್ ಕುಮಾರ್ ಹಾಗೂ ರೋಹಿತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು

ಸಭಾ ಕಾರ್ಯಕ್ರಮದ ಬಳಿಕ ಘಟಕದ ಸದಸ್ಯರಿಂದ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು

One thought on “ಗುರುಗಳು ತೋರಿದ ಹಾದಿಯಲ್ಲಿ ಸಂಘಟಿತ ಸಮಾಜ ನಿರ್ಮಿಸಬೇಕು

  1. ಉತ್ತಮ ಕಾರ್ಯಕ್ರಮ ಘಟಕಕ್ಕೆ ಶುಭ ಹಾರೈಕೆ ಗಳು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!