ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು.
ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ ಮಕ್ಕಳ ದತ್ತು ಸ್ವೀಕಾರ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು, ವೃತ್ತಿ ಮಾರ್ಗದರ್ಶನ ಶಿಬಿರ, ಆಶಕ್ತರಿಗೆ ಆರೋಗ್ಯ ನೆರವು, ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ, ಹೀಗೆ ನೂರಾರು ಕಾರ್ಯಕ್ರಮಗಳನ್ನು ಯುವವಾಹಿನಿಯು ನಡೆಸುತ್ತಾ ಬಂದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ನಿರಂತರ ೩೦ ವರುಷಗಳ ಸೇವೆಯನ್ನು ನೀಡುತ್ತಾ ಬರುತ್ತಿರುವ ಯುವವಾಹಿನಿ ಸಾಹಿತ್ಯಿಕ ಸೇವೆಯನ್ನು ನಡೆಸುತ್ತಿದ್ದು ಹಿರಿಯ ಸಾಹಿತಿ ದಿವಂಗತ ವಿಶುಕುಮಾರ್ ಅವರ ಹೆಸರಿನಲ್ಲಿ ವಿಶುಕುಮಾರ್ ಪ್ರಶಸ್ತಿಯನ್ನೂ ನೀಡುತ್ತಾ ಬರುತ್ತಿದೆ.
Congratulations one to all yuvavahini family and best wishess
Suitably rewarded for the consistent selfless service
ನಮ್ಮ ಯುವವಾಹಿನಿ ಕಿರೀಟ ಕ್ಕೆ ಇನ್ನೊಂದು ಗರಿ. ಇದು ನಮ್ಮೆಲ್ಲರಿಗೂ ಸ್ಪೂರ್ತಿಯನ್ನು ತ೦ದಿದೆ.