ಯುವವಾಹಿನಿ (ರಿ) ಬಜ್ಪೆ ಘಟಕದ ನೇತೃತ್ವದಲ್ಲಿ ದಿನಾಂಕ 21/10/2017ರಿಂದ 24/10/2017ರವರೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಗ್ರಹದಿಂದ ಮತ್ತು ಶ್ರೀ ಶ್ರೀ ಶ್ರೀ ಸತ್ಯಾನಂದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಶಿವಗಿರಿ ಯಾತ್ರೆಯು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಯಾತ್ರೆಯಲ್ಲಿ ಒಟ್ಟು 52 ಯಾತ್ರಾರ್ಥಿಗಳು ಭಾಗವಹಿಸಿದ್ದರು. ಘಟಕದ ಅಧ್ಯಕ್ಷರಾದ ಚಂದ್ರಶೇಖರ್ ಪೂಜಾರಿ ಮತ್ತು ಕಾರ್ಯದರ್ಶಿ ಕನಕಾ ಮೋಹನ್, ಸಂಚಾಲಕರಾದ ದೇವರಾಜ್ ಅಮೀನ್, ಶಿವರಾಮ ಪೂಜಾರಿ ಇವರು ಶಿವಗಿರಿ ಯಾತ್ರೆಯ ನೇತ್ರತ್ವ ವಹಿಸಿದ್ದರು.