ಯುವವಾಹಿನಿ (ರಿ) ಉಡುಪಿ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಕೆಮ್ತೂರು,ಸಾಧನಾ ಯುವಕ ಮಂಡಲ ಹಾಗೂ ಸಾಧನಾ ಯುವತಿ ಮಂಡಲ ಇದರ ಜಂಟಿ ಆಶ್ರಯದಲ್ಲಿ, ದಿನಾಂಕ 12.11.2017 ರಂದು ಸೂಪರ್ ಸ್ಪೆಷ್ಯಾಲಿಟಿ ಆರೋಗ್ಯ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಕೆಮ್ತೂರು, ಉಡುಪಿ ಇಲ್ಲಿ ಜರುಗಿತು .
ಯುವವಾಹಿನಿ(ರಿ) ಉಡುಪಿ ಘಟಕವು ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಶಿಬಿರವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು.
ಕೆ. ಎಸ್. ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ಹೃದಯ ರೋಗ ವಿಭಾಗದ ಮುಖ್ಯಸ್ಥರಾದ ಡಾ|| ಸುಬ್ರಹ್ಮಣ್ಯಂ.ಕೆ. ಅವರು ಹೃದಯ ಸಂಬಂಧಿ ಕಾಯಿಲೆ ಬಗ್ಗೆ ಮಾಹಿತಿ ತಿಳಿಸಿ, ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು . ಯುವವಾಹಿನಿ (ರಿ) ಉಡುಪಿ ಘಟಕದ ಅಧ್ಯಕ್ಷರಾದ ರಮೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು
ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ,ಕೆಮ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷರಾದ ಸುಧಾಕರ ಸಾಲ್ಯಾನ್ , ಕೆಮ್ತೂರು ಸಾಧನಾ ಯುವಕ ಮಂಡಲದ ಅಧ್ಯಕ್ಷರಾದ ಪ್ರಸನ್ನ ಶೆಟ್ಟಿ ಹಾಗು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವವಾಹಿನಿ ಉಡುಪಿ ಘಟಕದ ಕಾರ್ಯದರ್ಶಿ ಭಾರತಿ ಭಾಸ್ಕರ್ ವಂದಿಸಿದರು, ಅಶೋಕ್ ಪಾಲನ್ ಕಾರ್ಯಕ್ರಮ ನಿರೂಪಿಸಿದರು
Congratulations and all the best.