Yuvavahini

DEC 03, 2017 9.22 AM IST

ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಪದಗ್ರಹಣ

ಸಂಖ್ಯೆಗಿಂತ ಶ್ರದ್ಧೆ ಮುಖ್ಯ, ಕಾರ್ಯದಕ್ಷತೆಯಿಂದ ಕಾರ್ಯಸಾಧನೆ : ಯಶವಂತ ಪೂಜಾರಿ

ಸಸಿಹಿತ್ಲು : ಸದಸ್ಯರ ಸಂಖ್ಯೆಯನ್ನು ಅವಲಂಭಿಸಿಕೊಂಡು ನಮ್ಮ ಕೆಲಸಗಳು ಯಶಸು ಕಾಣುವುದಿಲ್ಲ ಬದಲಾಗಿ ನಾವು ಮಾಡುವ ಕೆಲಸದಲ್ಲಿನ ಬದ್ಧತೆ, ಮತ್ತು ಕಾರ್ಯದಕ್ಷತೆಯಿಂದ ನಿಜವಾದ ಕಾರ್ಯಸಾಧನೆ ಸಾಧ್ಯವಾಗುತ್ತದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು.
ಅವರು ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ತಂಡಕ್ಕೆ ಪ್ರಮಾಣವಚನ ಭೋಧಿಸಿ ಮಾತನಾಡಿದರು. ಯುವವಾಹಿನಿ ಸಸಿಹಿತ್ಲು ಘಟಕ ಒಂದು ಗ್ರಾಮ ವ್ಯಾಪ್ತಿಯನ್ನು ಹೊಂದಿದೆ, ಹೀಗಿದ್ದರೂ ಹತ್ತಾರು ಸಮಾಜಮುಖಿ ಕಾರ್ಯವನ್ನು ನಡೆಸಿದೆ, ಸಾಂಸ್ಕೃತಿಕವಾಗಿ ಉತ್ತಮ ಹೆಸರನ್ನು ಹೊಂದಿದೆ. ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಯುವಕರನ್ನು ಹೊಂದಿದ ಘಟಕ ಮತ್ತೊಮ್ಮೆ ಯುವ ನೇತಾರನ ಸಾರಥ್ಯಕ್ಕೆ ತೆರಳಿದೆ ಈ ಮೂಲಕ ಇನ್ನಷ್ಟು ಕೆಲಸ ಆಗಲಿ ಎಂದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಅಗ್ಗಿದಕಳಿಯ ಸಸಿಹಿತ್ಲು ಇದರ ಅಧ್ಯಕ್ಷರಾದ ಶ್ರೀಯುತ ಪ್ರಕಾಶ್ ಕುಮಾರ್ ಬಿ.ಎನ್ ಅವರು, ಯುವವಾಹಿನಿ ಮೂಲಕ ಸಮಾಜಿಕವಾಗಿ ಉತ್ತಮ ಕಾರ್ಯ ನಡೆಯುತ್ತಿದೆ, ಸಸಿಹಿತ್ಲು ಯುವವಾಹಿನಿಯೂ ಸಂಘದ ಜೊತೆ ಕೈ ಜೋಡಿಸಿ ಉತ್ತಮ ಕೆಲಸ ಮಾಡುತ್ತಿದೆ. ಇದರ ಸೇವಾ ಕಾರ್ಯಕ್ಕೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ನಿಜವಾದ ಕಾಣಿಕೆ ಎಂದರು. ವೇದಿಕೆಯಲ್ಲಿ ಸಸಿಹಿತ್ಲು ಘಟಕದ ಸಲಹೆಗಾರರಾರ ಪದ್ಮನಾಭ ಮರೋಳಿ, ಮಂಗಳೂರು ತಾಲೂಕು ಸಂಘಟನಾ ಕಾರ್ಯದರ್ಶಿ ಸುನೀಲ್.ಕೆ.ಅಂಚನ್, ಉಪಸ್ಥಿತರಿದ್ದರು. ನಿರ್ಗಮನಾಧ್ಯಕ್ಷರಾದ ಪ್ರದೀಪ್ ಎಸ್.ಆರ್ ತನ್ನ ಅವಧಿಯಲ್ಲಿ ಸಹಕರಿಸಿದವರಿಗೆ ವಂದನೆ ಅರ್ಪಿಸಿದರು. ಮಧುಬಂಗೇರಾ ಕಲ್ಲಡ್ಕ ನೂತನ ಅಧ್ಯಕ್ಷರಾಗಿ, ಕುಮಾರಿ ವೀಣಾ ಕಾರ್ಯದರ್ಶಿಯಾಗಿ ಶೈಲೇಶ್ ಉಪಾಧ್ಯಕ್ಷರಾಗಿ, ಕುಮಾರಿ ರೀತಾ ಕೋಶಾಧಿಕಾರಿಯಾಗಿ ಮತ್ತು ಇತರ ಪದಾಧಿಕಾರಿಗಳು ಪ್ರಮಾಣ ವಚನ ಸ್ವೀಕರಿಸಿದರು. ನೀತಾ ಸ್ವಾಗತಿಸಿ, ನಿರೀಕ್ಷಾ ವಂದಿಸಿದರು. ತಿಲಕ್‌ರಾಜ್ ವಂದಿಸಿದರು.

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!