ಬಂಟ್ವಾಳ: ಯಾವುದೇ ಸಮಾಜವು ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದುವರಿಯಲು ಶಿಕ್ಷಣವು ಅಗತ್ಯ. ಶಿಕ್ಷಣದಿಂದ ಅವಕಾಶವಂಚಿತ ವಿದ್ಯಾರ್ಥಿಗಳನ್ನು ಗುರುತಿಸಿ ಯೋಗ್ಯ ರೀತಿಯ ಶಿಕ್ಷಣವನ್ನು ಒದಗಿಸುವ ಕೆಲಸವನ್ನು ಯುವವಾಹಿನಿ ಸಂಸ್ಥೆ ಮಾಡುತ್ತಿದೆ. ಶಿಕ್ಷಣವು ಮಾನವನನ್ನು ವಿದ್ಯಾವಂತನನ್ನಾಗಿ ಮಾಡುವುದು ಮಾತ್ರವಲ್ಲ, ಆರೋಗ್ಯಪೂರ್ಣ ಸಮಾಜವನ್ನು ನಿರ್ಮಾಣ ಮಾಡುವ ಮಹತ್ವಪೂರ್ಣ ಕೆಲಸವನ್ನೂ ನಿರ್ವಹಿಸುತ್ತದೆ. ಯುವ ಮನಸ್ಸುಗಳಿಗೆ ಸೂಕ್ತ ರೀತಿಯ ತರಬೇತಿ ನೀಡುವ ಮೂಲಕ ಸಮರ್ಥ ರಾಷ್ಟ್ರವನ್ನು ಕಟ್ಟಬಹುದು ಎಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ ಸಜೀಪ ಮೂಡದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಭಿಪ್ರಾಯ ಪಟ್ಟರು.
ಅವರು ಪಾಣೆಮಂಗಳೂರು ಮೆಲ್ಕಾರ್ ಬಿರ್ವ ಸೆಂಟರ್ ನಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಆತಿಥ್ಯದಲ್ಲಿ ನಡೆದ ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ, ವೃತ್ತಿಮಾರ್ಗದರ್ಶನ ತರಬೇತಿಯ ರಾಷ್ಟ್ರೀಯ ಕಾರ್ಯಾಗಾರ *ಅನ್ವೇಷಣಾ 2017*ನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಲಯನ್ಸ್ ಜಿಲ್ಲಾ ಸಂಯೋಜಕ ಡಾ.ಗೀತಪ್ರಕಾಶ್, ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ,ಬಂಟ್ವಾಳ ಕನ್ನಡ ಸಾಹಿತ್ಯ ಪರಿಷತ್ ಗೌರವ ಪ್ರಧಾನ ಕಾರ್ಯದರ್ಶಿ ಬಿ.ತಮ್ಮಯ, ಜಿಲ್ಲಾ ಕೆ.ಡಿ.ಪಿ ಸದಸ್ಯೆ ಜಯಂತಿ ವಿ ಪೂಜಾರಿ, ಶಂಭೂರು ಮೂರ್ತೆದಾರರ ಸೇವಾಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲಿಯಾನ್, ಎಸ್.ಕೆ ಬಿಲ್ಡರ್ಸ್ ಮಂಗಳೂರಿನ ಸಂತೋಷ್ ಕುಮಾರ್ ಕೊಟ್ಟಿಂಜ ಭಾಗವಹಿಸಿ ಕಾರ್ಯಾಗಾರಕ್ಕೆ ಶುಭ ಹಾರೈಸಿದರು.
ಯುವವಾಹಿನಿ ಕೇಂದ್ತ ಸಮಿತಿ ಅಧ್ಯಕ್ಷ ಯಶವಂತ ಪೂಜಾರಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ಕಾರ್ಯಾಗಾರದ ಸಂಪೂರ್ಣ ಪ್ರಯೋಜನ ಪಡೆದುಕೊಂಡಾಗ ಮಾತ್ರ ಈ ಕಾರ್ಯಾಗಾರ ಯಶಸ್ವಿಯಾಗುತ್ತದೆ ಎಂದರು.
ಯುವವಾಹಿನಿ(ರಿ) ಬಂಟ್ವಾಳ ಘಟಕದ ಅಧ್ಯಕ್ಷ ಲೋಕೇಶ್ ಸುವರ್ಣ ಅಲೆತ್ತೂರು , ವಿದ್ಯಾರ್ಥಿ ಸಂಘಟನಾ ನಿರ್ದೇಶಕರಾದ ಜಯಶ್ರೀ ಕರ್ಕೇರ, ಸುಲತಾ,ಕೀರ್ತನಾ, ರಚನಾ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಕು.ಸಹನಾ ಪ್ರಾರ್ಥಿಸಿದರು. ಅನ್ವೇಷಣಾ 2017 ಕಾರ್ಯಾಗಾರದ ಸಂಯೋಜಕ ಚೇತನ್ ಎಂ., ಸ್ವಾಗತಿಸಿದರು.ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ಬೃಜೇಶ್ ಕುಮಾರ್ ವಂದಿಸಿದರು.
ಯುವವಾಹಿನಿ(ರಿ) ಬಂಟ್ವಾಳ ಘಟಕದ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಾಗಾರದಲ್ಲಿ ಬೇರೆ ಬೇರೆ ತಾಲೂಕುಗಳಿಂದ ಆರುನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು
ಉತ್ತಮ ಕಾರ್ಯಗಾರ….ವಿದ್ಯಾರ್ಥಿಗಳಳಿಂದ ಒಳ್ಳೆಯ ಅಭಿಪ್ರಾಯ ಬಂದಿದೆ……
Great job by yuvavahinit. Keep it up.