Yuvavahini

SEP 11, 2016 5.14 AM IST

ಯುವವಾಹಿನಿ(ರಿ) ಬೆಳ್ತಂಗಡಿ ಘಟಕ

ಬೆಳ್ತಂಗಡಿ ಘಟಕದ ಪದಗ್ರಹಣ ಕಾರ್ಯಕ್ರಮ

ಯುವವಾಹಿನಿ ಬೆಳ್ತಂಗಡಿ ಘಟಕದ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿ. 11-9-2016 ರಂದು ಜರಗಿತು. ಕಾರ್ಯಕ್ರಮವನ್ನು ಶಾಸಕ ಕೆ. ವಸಂತ ಬಂಗೇರರವರು ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿತಾಂಬರ ಹೇರಾಜೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಬಿ. ತಮ್ಮಯ ಭಾಗವಹಿಸಿದ್ದರು. ಈ ಶುಭ ಸಂದರ್ಭದಲ್ಲಿ ಶ್ರೀ ಬಿ. ತಮ್ಮಯರವರು ಬರೆದ ತುಲುವೆ ಅನ್ನುವ ತುಳು ಲಿಪಿ ಪುಸ್ತಕದ 10 ನೇ ಸಂಚಿಕೆಯನ್ನು ಬಿ. ಪೀತಾಂಬರ ಹೇರಾಜೆಯವರು ಬಿಡುಗಡೆಗೊಳಿಸಿದರು.

ವಿದ್ಯೆಗೆ ಒತ್ತುಕೊಡುವ ನಿಟ್ಟಿನಲ್ಲಿ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕೇಂದ್ರ ಸಮಿತಿಯ ಉಪಾಧ್ಯಕ್ಷ ಯಶವಂತ ಪೂಜಾರಿಯವರು ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

ವೇದಿಕೆಯಲ್ಲಿ ಗೌರವ ಸಲಹೆಗಾರ ಮಹೇಶ್ ಕುಮಾರ್ ನಡಕ್ಕರ, ಕೇಂದ್ರ ಸಮಿತಿಯ ನಿರ್ದೇಶಕ ರಾಕೇಶ್ ಮೂಡುಕೋಡಿ, ಘಟಕದ ಉಪಾಧ್ಯಕ್ಷ ಯೋಗೀಶ್ ಮಜಿಕುಡೇಲು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಶಂಕರ ಸುವರ್ಣ, ಪ್ರೇಮನಾಥ್ ಬಂಟ್ವಾಳ, ಸಂಘಟನಾ ಕಾರ್ಯದರ್ಶಿ ರಾಜೇಶ್ ಸುವರ್ಣ ಬಂಟ್ವಾಳ, ಹರೀಶ್ ಬೈಲಬರಿ, ಮಂಗಳೂರು ಘಟಕದ ಕಾರ್ಯದರ್ಶಿ ನವೀನ್‌ಚಂದ್ರ, ಗರೋಡಿ ಬಿಲ್ಲವ ಸಂಘದ ಅಧ್ಯಕ್ಷ ಮಹಾಬಲ ಪೂಜಾರಿ, ಶ್ರೀಗುರು ನಾರಾಯಣ ಸೇವಾ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಭಗೀರಥ ಜಿ., ತಾಲೂಕು ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ತನುಜಾ ಶೇಖರ್, ಯುವ ಬಿಲ್ಲವ ವೇದಿಕೆಯ ಕಾರ್ಯದರ್ಶಿ ಸಂತೋಷ್ ಕುಮಾರ್ ಹಾಗೂ ಮಾಜಿ ಅಧ್ಯಕ್ಷರುಗಳು, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ನಿರ್ದೇಶಕರುಗಳು, ಯುವವಾಹಿನಿ ಸದಸ್ಯರು, ಅತೀ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಅನೀಶ್ ಅವರು ಪ್ರಾರ್ಥಿಸಿದರು. ಸ್ಮಿತೇಶ್ ಎಸ್. ಬಾರ್ಯ ಪ್ರಸ್ತಾವನೆಗೈದು, ರಾಕೇಶ್ ಮೂಡುಕೋಡಿ ವಂದಿಸಿದರು. ಅನೀಶ್ ಹಾಗೂ ಚಂದ್ರಹಾಸ ಬಳಂಜ ಮತ್ತು ಸುಧಾಮಣಿಯವರು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!