Yuvavahini

SEP 18, 2016 5.19 AM IST

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕ

ಮಂಗಳೂರು ಮಹಿಳಾ ಘಟಕದ ವಿವಿಧ ಕಾರ್ಯಕ್ರಮಗಳು

ತಾ. 3-9-2016 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಸದಸ್ಯರಿಗೆ ಫಿನಾಯಿಲ್ ಹಾಗೂ ಲಿಕ್ವಿಡ್ ಸೋಪ್ ತಯಾರಿಸುವುದರ ಬಗ್ಗೆ ಜರಗಿದ ಮಾಹಿತಿ ಶಿಬಿರ.

ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ಲೇಡಿಹಿಲ್ ವೃತ್ತದಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದವರೆಗೆ ಜರಗಿದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು.

ತಾ. 16-9-2016 ರಂದು ಗುರುಜಯಂತಿ ಪ್ರಯುಕ್ತ ವೆನ್‌ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಹಾಯಕರಿಗೆ (ಮನೆಯವರಿಗೆ) ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಯುವವಾಹಿನಿ ಮಂಗಳೂರು ಮಹಿಳಾ ಘಟಕದಿಂದ ಏರ್ಪಡಿಸಲಾಗಿತ್ತು.

ತಾ. 17-9-2016 ರಂದು ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ಗುರುಜಯಂತಿ ಪ್ರಯುಕ್ತ ’ನಾರಾಯಣಗುರುಗಳ ಜೀವನ, ತತ್ವಭೋದನೆ’ ವಿಷಯದಲ್ಲಿ ಮಕ್ಕಳಿಗೆ ಪ್ರಬಂಧ ಸ್ಪರ್ಧೆಯನ್ನು ಮಹಿಳೆಯರಿಗೆ ರಸಪ್ರಶ್ನೆ ಕಾರ್ಯಕ್ರಮವು ಕೇಂದ್ರ ಸಮಿತಿಯ ಕಚೇರಿಯಲ್ಲಿ ಜರಗಿತು. ಸ್ಥಳೀಯ 9 ಶಾಲೆಗಳಿಂದ 46 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ. ಸ್ಪರ್ಧೆಯ ತೀರ್ಪುಗಾರರಾಗಿ ಶ್ರೀಮತಿ ಲತಾ ಕಿಶೋರ್ ಹಾಗೂ ಶ್ರೀ ಸಾಧು ಪೂಜಾರಿ ಭಾಗವಹಿಸಿದ್ದರು. ರಸಪ್ರಶ್ನೆ ಕಾರ್ಯಕ್ರಮವನ್ನು ಸಾಧುಪೂಜಾರಿಯವರು ನಡೆಸಿಕೊಟ್ಟರು.

ತಾ. 18-9-2016 ರಂದು ಮಂಗಳೂರು ಮಹಿಳಾ ಘಟಕದ ಸಭೆಯಲ್ಲಿ ಶ್ರೀಧರ್ ಕುಂಬ್ಲ ಇವರಿಂದ ಘಟಕದ ಸದಸ್ಯರಿಗೆ ಕ್ಯಾಂಡಲ್ ತಯಾರಿಸುವ ಬಗ್ಗೆ ಜರಗಿದ ಕಾರ್ಯಾಗಾರ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!