ಉಡುಪಿ: ಪ್ರಸ್ತುತ ಇರುವ ಸ್ಥಿತಿಯಿಂದ ಉತ್ತಮ ಸ್ಥಿತಿಯತ್ತ ಕೊಂಡೋಯ್ಯುವುದೇ ಸಂಸ್ಕಾರ, ಮಾನವ ಅರಿಷಡ್ವರ್ಗಗಳನ್ನು ತ್ಯಜಿಸಿದಾಗ ಮಾಧವನಾಗುತ್ತಾನೆ, ಇದಕ್ಕೆ ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ ಇಂತಹ ಕಾರ್ಯಾಗಾರವನ್ನು ನಿರಂತರ ನಡೆಸುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು.
ಅವರು ದಿನಾಂಕ 18.02.2018 ನೇ ಆದಿತ್ಯವಾರ ಉಡುಪಿ ಬಲೈಪಾದೆ ನಿತ್ಯಾನಂದ ಆರ್ಕೆಡ್ ನಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಬಹು ಘಟಕಗಳ ವ್ಯಕ್ತಿತ್ವ ವಿಕಸನ ತರಬೇತಿ ಶಿಬಿರ ಜೀವನ ಮೌಲ್ಯ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯುವವಾಹಿನಿ (ರಿ) ಕೇಂದ್ರ ಸಮಿತಿಯ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ರಘುನಾಥ ಮಾಬಿಯಾನ್ ಶುಭ ಹಾರೈಕೆ ಮಾಡಿದರು. ಯುವವಾಹಿನಿ (ರಿ) ಅಡ್ವೆ ಘಟಕದ ಅಧ್ಯಕ್ಷರಾದ ಬಾಸ್ಕರ ಪೂಜಾರಿ, ಯುವವಾಹಿನಿ (ರಿ) ಯಡ್ತಾಡಿ ಘಟಕದ ಅಧ್ಯಕ್ಷರಾದ ಶಂಕರ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು, ಜೇಸಿ ರಾಷ್ಟ್ರೀಯ ತರಬೇತುದಾರು ಸತೀಶ್ ಭಟ್ ಬಿಳಿನೆಲೆ ಇವರು ಉಡುಪಿ, ಯಡ್ತಾಡಿ ಹಾಗೂ ಅಡ್ವೆ ಘಟಕದ ಸದಸ್ಯರಿಗೆ ಕಾರ್ಯಾಗಾರ ನಡೆಸಿಕೊಟ್ಟರು.
ಯುವವಾಹಿನಿ (ರಿ) ಉಡುಪಿ ಘಟಕದ ಅಧ್ಯಕ್ಷರಾದ ರಮೇಶ್ ಕುಮಾರ್ ಸ್ವಾಗತಿಸಿದರು, ಯುವವಾಹಿನಿ (ರಿ) ಉಡುಪಿ ಘಟಕದ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಜಗದೀಶ್ ಕುಮಾರ್ ಪ್ರಸ್ತಾವನೆ ಮಾಡಿದರು, ಕಾರ್ಯದರ್ಶಿ ಭಾರತಿ ಭಾಸ್ಕರ್ ಸುವರ್ಣ ಧನ್ಯವಾದ ನೀಡಿದರು