ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಮತ್ತು ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಉಚಿತ ಮಕ್ಕಳ ದಂತ ಚಿಕಿತ್ಸೆ ಮತ್ತು ತಪಾಸಣಾ ಶಿಬಿರವು ಯೆನಪೊಯ ಮೆಡಿಕಲ್ ಮತ್ತು ದಂತ ವೈದ್ಯಕೀಯ ಕಾಲೇಜು, ದೇರಳಕಟ್ಟೆ ಇಲ್ಲಿಯ ತಜ್ಞ ವೈದ್ಯರ ತಂಡದೊಂದಿಗೆ ದಿ.14.03.2018 ರಂದು ಇಳಂತಿಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಸುಬುರವರು ದೀಪ ಬೆಳಗಿಸಿ ನೆರವೇರಿಸಿ ಮಾತನಾಡಿ ಸಮಾಜದ ಜನರಲ್ಲಿ ಉತ್ತಮ ಆರೋಗ್ಯವಿದ್ದಾಗ ಬಲಿಷ್ಠ ಸಮಾಜ ನಿರ್ಮಾಣ ಆಗುತ್ತದೆ ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಜನಪರವಾದ ಸೇವೆಗಳನ್ನು ಸಮಾಜಕ್ಕೆ ನೀಡಿದಾಗ ಸಂಘಟನೆಯ ಉದ್ದೇಶಗಳು ಸಾರ್ಥಕವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ ಸದಸ್ಯರಾದ ಶಾಹುಲ್ ಹಮೀದ್, ರೋಟರಿ ಕ್ಲಬ್ ಅಧ್ಯಕ್ಷ ಅಬ್ದುಲ್ ರಹಿಮಾನ್ ,ಶಾಲಾ ಮೇಲುಸ್ತುವಾರಿ ಅಧ್ಯಕ್ಷರು ಹಾಗು ಇಂಡಿಯಾ ಡೆಂಟಲ್ ಅಸೋಸಿಯೇಶನ್ ಉಪಾಧ್ಯಕ್ಷೆ ಡಾ.ಶ್ವೇತ ಆಶಿತ್ ಉಪಸ್ಥಿತರಿದ್ದು ಶುಭ ಹಾರೈಸಿದರು.
ಸಭೆಯ ಅಧ್ಯಕ್ಷತೆಯನ್ನು ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ವಹಿಸಿ ಮಾತನಾಡಿ ಸಂಸ್ಥೆಯು ವಾರ್ಷಿಕವಾಗಿ ಬೇರೆಬೇರೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅದರೊಂದಿಗೆ ಆರೋಗ್ಯಕ್ಕೆ ಪೂರಕವಾದ ಹಲವಾರು ಶಿಬಿರಗಳನ್ನು ಸಾರ್ವಜನಿಕ ರ ಉತ್ತಮ ಪಾಲ್ಗೊಳ್ಳುವಿಕೆಯೊಂದಿಗೆ ಯಶಸ್ವಿಯಾಗಿ ನಡೆದಿದ್ದು ಎಲ್ಲರ ಸಹಕಾರಕ್ಕೆ ಧನ್ಯವಾದ ಸಲ್ಲಿಸಿದರು.ಕಾರ್ಯಕ್ರಮದಲ್ಲಿ ಘಟಕದ ಗೌರವ ಸಲಹೆಗಾರರಾದ ವರದ್ರಾಜ್ ಯಂ, ಘಟಕದ ಆರೋಗ್ಯ ನಿರ್ದೇಶಕರಾದ ಡಾ.ಆಶಿತ್ ಎಂ ವಿ. , ಕಾರ್ಯದರ್ಶಿ ಮನೋಜ್ ಎನ್ ಸಾಲ್ಯಾನ್, ಚಂದ್ರಶೇಖರ ಸನಿಲ್ ಉಪಸ್ಥಿತರಿದ್ದರು… ಶಿಬಿರದ ಪ್ರಯೋಜನವನ್ನು ಸಮಾರು 175 ಜನ ಸಾರ್ವಜನಿಕರು ಪಡೆದುಕೊಂಡರು. ಶಾಲೆಯ 125 ವಿದ್ಯಾರ್ಥಿಗಳಿಗೆ ಉಚಿತ ಟೂಥ್ ಪೇಸ್ಟ್ ಮತ್ತು ಬ್ರಷ್ ವಿತರಿಸಲಾಯಿತು. ಶಾಲಾ ಮುಖ್ಯ ಗುರುಗಳು ಮತ್ತು ಸಹಶಿಕ್ಷಕರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.