Yuvavahini

APR 01, 2018 7.55 AM IST

ಯುವವಾಹಿನಿ (ರಿ) ಕುಪ್ಪೆಪದವು ಘಟಕ ಉದ್ಘಾಟನೆ

ಯುವವಾಹಿನಿ ಆಶ್ರಯ ವಾಹಿನಿ : ಬಲ್ಯೊಟ್ಟು ಸ್ವಾಮೀಜಿ

ಕುಪ್ಪೆಪದವು : ಸತ್ ಚಿಂತನೆಯನ್ನು ರೂಪಿಸಿಕೊಳ್ಳುವ ಮೂಲಕ ಯುವ ಸಮುದಾಯದ ಶಕ್ತಿ ಸಾರ್ಥಕತೆಯನ್ನು ಪಡೆಯುತ್ತದೆ, ಸಮಾಜಮುಖಿ ಕಾರ್ಯಗಳ ಮೂಲಕ ಶೋಷಿತ ಜನಾಂಗವನ್ನು ಮುಖ್ಯ ವಾಹಿನಿಗೆ ತರುವಂತಹ ಯುವವಾಹಿನಿ ಸಮಾಜದ ಆಶ್ರಯ ವಾಹಿನಿಯಾಗಿದೆ, ಬಿಲ್ಲವ ಸಮಾಜದ ಆದರ್ಶದ ದಾರಿದೀಪವಾಗಿದೆ ಎಂದು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು

ಅವರು ದಿನಾಂಕ 01.04.2018 ರಂದು ಯುವವಾಹಿನಿಯ 30 ನೇ ನೂತನ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಅಕ್ಷರಶಃ ಪಾಲಿಸುತ್ತಿರುವ ಯುವವಾಹಿನಿ ದ್ವಿತೀಯ ಹಂತದ ನಾಯಕರನ್ನು ಸೃಷ್ಟಿಸುವ ಕಾರ್ಖಾನೆಯಾಗಿದೆ ಎಂದು ಪ್ರಧಾನ ಭಾಷಣ ಮಾಡಿದ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಬಿ.ಸುವರ್ಣ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ಅರುಣ್ ಕುಮಾರ್ ಅಂಬೆಲೊಟ್ಟು ನೇತ್ರತ್ವದ ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಪ್ರಪ್ರಥಮ ತಂಡಕ್ಕೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಕುಪ್ಪೆಪದವು ದುರ್ಗೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಉಮೇಶ್ ಅಮೀನ್, ಕುಪ್ಪೆಪದವು ನಾರಾಯಣಗುರು ಸೇವಾ ಸಮಿತಿಯ ಕೋಶಾಧಿಕಾರಿ ಪುರುಷೋತ್ತಮ ಕೆ, ಪ್ರಗತಿಪರ ಕೃಷಿಕರಾದ ವಿಶ್ವನಾಥ ಕಲ್ಪನೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಯುವವಾಹಿನಿ ಕುಪ್ಪೆಪದವು ಘಟಕವನ್ನು ಗುರುಹಿರಿಯರ ಮಾರ್ಗದರ್ಶನ, ಯುವವಾಹಿನಿ ಸದಸ್ಯರ ಸಹಕಾರದ ಮೂಲಕ ಸಮರ್ಥವಾಗಿ ಮುನ್ನಡೆಸುವ ಆತ್ಮವಿಶ್ವಾಸ ಇದೆ ಎಂದು ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅರುಣ್ ಕುಮರ್ ಅಭಿಪ್ರಾಯ ಪಟ್ಟರು.
ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಅಮೀನ್ , ನೂತನ ಕಾರ್ಯದರ್ಶಿ ರಿತೇಶ್ ನೆಲ್ಲಚ್ಚಿಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು

ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನೀಲ್ ಕೆ‌ ಅಂಚನ್ ಪ್ರಾಸ್ತಾವಿಕ ಭಾಷಣ ಮಾಡಿದರು, ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು, ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರಾದ ದೇವರಾಜ್ ಅಮೀನ್ ಸ್ವಾಗತಿಸಿದರು, ಯುವವಾಹಿನಿ ಕುಪ್ಪೆಪದವು ಘಟಕದ ಉಪಾಧ್ಯಕ್ಷರಾದ ಅಜಯ್ ಅಮೀನ್ ಧನ್ಯವಾದ ನೀಡಿದರು, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು

 

One thought on “ಯುವವಾಹಿನಿ ಆಶ್ರಯ ವಾಹಿನಿ : ಬಲ್ಯೊಟ್ಟು ಸ್ವಾಮೀಜಿ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!