Yuvavahini

OCT 23, 2016 5.38 AM IST

ಯುವವಾಹಿನಿ(ರಿ) ಕೂಳೂರು ಘಟಕ

ಕತ್ತಲಿನಿಂದ ಬೆಳಕಿಗೆ ಕೂಳೂರು ಘಟಕದ ವಿನೂತನ ಕಾರ್ಯಕ್ರಮ

ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು. ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು, ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀಗುರು ವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇದ್ದಾವೆ. ಅಂಥವರನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲಾ ಸಾಮಾಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ ಪಾಲ್ಗೊಂಡು, ಅಜ್ಞಾನದಿಂದ ಸುಜ್ಞಾನದೆಡೆಗೆ, ಅಂಧಕಾರದಿಂದ ಬೆಳಕಿನೆಡೆಗೆ ಸಾಗುವಲ್ಲಿ ನಾವೆಲ್ಲರೂ ಕೈಜೋಡಿಸಿ ಇಂತಹ ಕಾರ್ಯದಲ್ಲಿ ಭಾಗಿಯಾಗೋಣ ಎನ್ನುವ ಆಶಯದಲ್ಲಿ ದಿನಾಂಕ 23-10-2016 ರಂದು ಕೂಳೂರು ಘಟಕವು ವಿನೂತನ ಕಾರ್ಯಕ್ರಮವನ್ನು ಯುವವಾಹಿನಿಗೆ ಸೇರ್ಪಡೆಗೊಳಿಸಿತು.

ದೀಪಾವಳಿ ಪ್ರಯುಕ್ತ ಮೂರು ತೀರಾ ಬಡ ಕುಟುಂಬಗಳನ್ನು ಗುರುತಿಸಿ, ಅವರಿಗೆ ದೀಪಾವಳಿ ಹಬ್ಬ ಆಚರಣೆ ಹಾಗೂ ಮುಂದಿನ ದಿನಗಳನ್ನು ನಡೆಸುವುದಕ್ಕಾಗಿ ರೂ. 15,000/- ಮೊತ್ತದ ವಸ್ತುಗಳನ್ನು ದೇಣಿಗೆ ರೂಪದಲ್ಲಿ ನೀಡಲಾಯಿತು. ಈ ಪ್ರಯುಕ್ತ ಸಂಜೆ 5 ಗಂಟೆಗೆ ಘಟಕದ ಸದಸ್ಯರು 3 ಮನೆಗಳಿಗೂ ಭೇಟಿ ನೀಡಿ ಮನೆ ವಸ್ತುಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ, ಮಾಜಿ ಅಧ್ಯಕ್ಷ ಹಾಗೂ ಘಟಕದ ಸಲಹೆಗಾರ ಜಿ. ಪರಮೇಶ್ವರ ಪೂಜಾರಿ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಚಾಲಕತ್ವವನ್ನು ಸಮಾಜ ಸೇವಾ ನಿರ್ದೇಶಕರಾದ ಶ್ರೀಮತಿ ಸರಸ್ವತಿ ಶ್ರೀನಿವಾಸ್ ಇವರು ವಹಿಸಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!