Yuvavahini

APR 15, 2018 3.11 PM IST

ಯುವವಾಹಿನಿ (ರಿ) ಯಡ್ತಾಡಿ ಘಟಕ

ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಯಡ್ತಾಡಿ : ವಿದ್ಯಾರ್ಥಿ ಜೀವನದಲ್ಲಿ ಸಿಗುವ ವಿಪುಲ‌ವಾದ ಅವಕಾಶವನ್ನು ಬಳಸಿಕೊಂಡರೆ ಜೀವನದಲ್ಲಿ ಉನ್ನತ ಮಟ್ಟಕ್ಕೇರಲು ಸಾಧ್ಯ , ಇಂತಹ ಶಿಬಿರದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಪಡೆಯಲು ಉತ್ತಮ ಅವಕಾಶ ಲಭಿಸುತ್ತವೆ ಎಂದು ಯುವವಾಹಿನಿ (ರಿ) ಯಡ್ತಾಡಿ ಘಟಕದ ಅಧ್ಯಕ್ಷರಾದ ಶಂಕರ ಪೂಜಾರಿ ತಿಳಿಸಿದರು

ಅವರು ದಿನಾಂಕ‌ 15.04.2018 ನೇ ಆದಿತ್ಯವಾರ ಯುವವಾಹಿನಿ (ರಿ) ಯಡ್ತಾಡಿ ಘಟಕ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಯಡ್ತಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಕಸನ‌ 2018 ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಯಡ್ತಾಡಿ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವಿಠ್ಠಲ ಹೆಗ್ಡೆ ಶಿಬಿರ ಉದ್ಘಾಟಿಸಿದರು. ಶಿಬಿರದ ಸಂಯೋಜಕ ನರೇಂದ್ರ ಕುಮಾರ್ ಕೋಟ ಮಾತನಾಡಿ ಜಾತಿ, ಮತ ಭೇದವಿಲ್ಲದೆ ಒಂದಾಗಿ ಬದುಕುವುದನ್ನು ಶಿಬಿರದಲ್ಲಿ ಭಾಗವಹಿಸುವ ಮೂಲಕ ಅರ್ಥ ಮಾಡಿಕೊಳ್ಳಲು ಸಾಧ್ಯ . ನಮ್ಮಲ್ಲಿರುವ ತಪ್ಪುಗಳನ್ನು ತಿದ್ದಿಕೊಂಡು ಹೊಸತನ ಹೊಸ ಅನುಭವ ಕಲಿಕೆ ಇಂತಹ ಶಿಬಿರಗಳಿಂದ ಸಾಧ್ಯ ಎಂದರು.

ಯಡ್ತಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮಾ‌ ಮಾತನಾಡಿ ಮಕ್ಕಳಲ್ಲಿರುವ ಸೃಜನಶೀಲತೆ, ಬುದ್ಧಿಮತ್ತೆಗಳು ವಿಕಸನ ಶಿಬಿರಗಳ ಮೂಲಕ ಇನ್ನಷ್ಟು ಜಾಗೃತ ಕೊಳ್ಳುತ್ತವೆ ಎಂದರು.

ಉದ್ಯಮಿ ಮಹಮ್ಮದ್ ರಫೀಕ್ ಗುತ್ತಿಗೆದಾರ ದಿವಾಕರ ಶೆಟ್ಟಿ, ಉದ್ಯಮಿ ಕೃಷ್ಣ ನಾಯ್ಕ ಶಿರಿಯಾರ, ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಭಾಸ್ಕರ ಪೂಜಾರಿ, ನಡೂರು ಚಿಗುರು ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾದ ಅಲ್ತಾರು ನಾಗರಾಜ್ , ಕಾರ್ಯದರ್ಶಿ ಎ.ಕೆ.ಶೆಟ್ಟಿ ನಡೂರು, ಕೋಟ ಸಮರ್ಪಣಾದ ನಿರ್ದೇಶಕರಾದ ಸತೀಶ್ ವಡ್ಡರ್ಸೆ , ಯಡ್ತಾಡಿ ಸೌಜನ್ಯ ಯುವಕ ಮಂಡಲದ ಅಧ್ಯಕ್ಷರಾದ ಶರತ್ ಆಚಾರ್ , ಸಾಯಿಬ್ರಕಟ್ಟೆ ವಿನಾಯಕ ಯುವಕ ಮಂಡಲದ ಅಧ್ಯಕ್ಷರಾದ ಶರತ್ ಪೂಜಾರಿ, ಯಡ್ತಾಡಿ ಅಲ್ತಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಪೂಜಾರಿ ಉಪಸ್ಥಿತರಿದ್ದರು. ಯುವವಾಹಿನಿ ಯಡ್ತಾಡಿ ಘಟಕದ ಅಜಿತ್ ಕುಮಾರ್ ಸ್ವಾಗತಿಸಿದರು. ಪಲ್ಲವಿ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!