Yuvavahini

APR 28, 2018 7.34 AM IST

ಯುವವಾಹಿನಿ (ರಿ) ಮೂಡಬಿದ್ರೆ ಘಟಕ

ಬದುಕಿನ ನಡೆ ಜ್ಞಾನದ ಹಾದಿಯಾಗಬೇಕು : ಯಶವಂತ ಪೂಜಾರಿ

ಮೂಡಬಿದ್ರೆ : ಬಹುಮುಖ ನೆಲೆಗಳಿಂದ ಶಿಕ್ಷಣವು ದೊರೆತಾಗ ಮಾತ್ರ ಬದುಕಿನ ನಡೆ ಜ್ಞಾನದ ಹಾದಿಯಾಗುತ್ತದೆ. ಪಠ್ಯ ಕೇಂದ್ರಿತ ಶಿಕ್ಷಣವು ಅಂಕಗಳನ್ನೇ ಮಾನದಂಡವಾಗಿಸಿದೆ. ಸ್ಪರ್ಧಾತ್ಮಕವಾದ ಆಧುನಿಕ ಶಿಕ್ಷಣ ಕ್ರಮವು ವಿದ್ಯಾರ್ಥಿಗಳನ್ನು ಬದುಕಿನ ಜೀವನಾನುಭವಗಳಿಂದ ವಂಚಿತವನ್ನಾಗಿಸಿದೆ. ಪಕೃತಿ ವರವಾದ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ಸಂಸ್ಕಾರವು ಇಲ್ಲವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳ ಬದುಕಿನಲ್ಲಿ ಎದುರಾಗುವ ಸವಾಲು, ಆತಂಕವನ್ನು ಎದುರಿಸಲು ನೈತಿಕ ಸ್ಥೈರ್ಯ ಇಲ್ಲಾವಾಗಿ ಅದೆಷ್ಟೋ ವಿದ್ಯಾರ್ಥಿಗಳು ಆತ್ಮಹತ್ಯೆ ರೂಪದ ಕಠಿಣ ನಿರ್ಧಾರ ತೆಗೆದುಕೊಳ್ಳುವುದು ‌ಶೋಚನೀಯ ಸಂಗತಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು.

ಅವರು ದಿನಾಂಕ 28.04.2018 ನೇ ಶನಿವಾರ ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಆಶ್ರಯದಲ್ಲಿ ಶೀ ನಾರಾಯಣಗುರು ಸೇವಾದಳ ಮೂಡಬಿದ್ರೆ, ಶ್ರೀ ನಾರಾಯಣಗುರು ಮಹಿಳಾ ಘಟಕ ಹಾಗೂ ಮೂಡಬಿದ್ರೆ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಇದರ ಸಹಯೋಗದೊಂದಿಗೆ ಮೂಡಬಿದ್ರೆ ನಾರಾಯಣಗುರು ಸಭಾಭವನದಲ್ಲಿ ಜರುಗಿದ ಶಿಕ್ಷಣ, ವಿದ್ಯಾರ್ಥಿ ವೇತನ, ವೃತ್ತಿ ಮಾರ್ಗದರ್ಶನ ಭವಿಷ್ಯ ನಿರ್ಮಾಣ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮೂಡಬಿದ್ರೆ ನಿಷ್ಮಿತಾ ಟವರ್ಸ್ ಮಾಲೀಕರಾದ ನಾರಾಯಣ ಪಿ.ಎಮ್ ಕಾರ್ಯಾಗಾರ ಉದ್ಘಾಟಿಸಿದರು. ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾದ ರಾಜೇಶ್ ಡಿ.ಕೋಟ್ಯಾನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಮೂಡಬಿದ್ರೆ ಘಟಕ ಹಾಗೂ ಪುಣ್ಯ ಭೂಮಿ ತುಳುನಾಡ ಸೇವಾ ಟ್ರಸ್ಟ್ ವತಿಯಿಂದ ಕಿಡ್ನಿ ವೈಫಲ್ಯ ದಿಂದ ಬಳಲುತ್ತಿರುವ, ಮಂಗಳೂರು ತಾಲೂಕು ದರೆಗುಡ್ಡೆ ಕೆಲ್ಲಪುತ್ತಿಗೆಯ ಮೇಲಿನ ಮನೆಯ ಡೊಂಬಯ್ಯ ಪೂಜಾರಿ ಎಂಬವರ ಮಗಳು ಬಡ ಕುಟುಂಬದ ಪೂಜಾ ಪೂಜಾರಿ ಇವರಿಗೆ ವೈದ್ಯಕೀಯ ನೆರವು ರೂ 15,000/- ಹಸ್ತಾಂತರಿಸಲಾಯಿತು ಹಾಗೂ ಮಂಗಳೂರು ತಾಲೂಕಿನ ನೆಲ್ಲಿಕಾರ್ ನಿವಾಸಿ ಮನೋಜ್ ಪೂಜಾರಿ ಕಡು ಬಡತನದ ಲ್ಲಿ ಬದುಕುತ್ತಿರುವ ಇವರಿಗೆ ರೂ 5,000/- ವೈದ್ಯಕೀಯ ನೆರವು ನೀಡಲಾಯಿತು.

ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ವಿಭಾಗದ ಉಪನ್ಯಾಸಕರಾದ ಸುಧೀಂದ್ರ ಜೆ.ಶಾಂತಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮೂಡಬಿದ್ರೆ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ರವೀಂದ್ರ ಎಮ್.ಸುವರ್ಣ, ಮೂಡಬಿದ್ರೆ ನಾರಾಯಣಗುರು ಸೇವಾದಳದ ಅಧ್ಯಕ್ಷರಾದ ರಮೇಶ್ ಅಮಿನ್, ಮೂಡಬಿದ್ರೆ ನಾರಾಯಣಗುರು ಮಹಿಳಾ ಘಟಕದ ಅಧ್ಯಕ್ಷರಾದ ಮಾಲತಿ ಗೋಪಿನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜೇಸೀ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಹಾಗೂ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ನ ಗೌರವ ವಿಶ್ವಸ್ಥರು ಚಂದ್ರಶೇಖರ್ ಎಸ್.ಎಡಪದವು ಭವಿಷ್ಯ ನಿರ್ಮಾಣ ಕಾರ್ಯಾಗಾರ ನಡೆಸಿಕೊಟ್ಟರು.
ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್ ಸ್ವಾಗತಿಸಿದರು ಕಾರ್ಯದರ್ಶಿ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ರಮೇಶ್ ಅಮೀನ್ ಧನ್ಯವಾದ ನೀಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!