Yuvavahini

MAY 10, 2018 3.17 AM IST

ಯುವವಾಹಿನಿ (ರಿ) ಕೂಳೂರು ಘಟಕ

ಎಲ್ಲಾ ಬಾಂಧವ್ಯ , ಸಂಬಂಧಗಳನ್ನು ಮೀರಿದವಳು ತಾಯಿ : ಯಶವಂತ ಪೂಜಾರಿ

ಕೂಳೂರು : ಎಲ್ಲಾ ಬಾಂಧವ್ಯ ಸಂಬಂಧಗಳನ್ನು ಮೀರಿದವಳು ತಾಯಿ‌, ತಾನು ಎಲ್ಲಾ ಕಡೆ ಇರಲಾರೆ ಎಂಬ ಕಾರಣಕ್ಕಾಗಿ ದೇವರು ತಾಯಿಯನ್ನು ಸೃಷ್ಟಿಸಿದ ಎಂಬ ಮಾತನ್ನು ಅಕ್ಷರಶಃ ರುಜುವಾತು ಮಾಡಿಕೊಟ್ಟವಳು. ಹೆಜ್ಜೆಯಿಡಲು ಕಲಿಸಿದವಳು, ಕೈ ತುತ್ತು ನೀಡಿದವಳು, ಕರುಳಕುಡಿಯ ಜೀವನಕ್ಕಾಗಿ‌ ತನ್ನ ಜೀವವನ್ನು ಸವೆಸಿದವಳು, ಕಂದನ ಪ್ರತಿ ಯಶಸ್ಸಿನಲ್ಲೂ ಆಕೆಯ ಪಾಲಿದೆ ಪ್ರತಿ ಕಷ್ಟದಲ್ಲೂ ಆಕೆಯ ಸಾಂತ್ವನವಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು.

ಅವರು ದಿನಾಂಕ‌ 10.05.2018 ರಂದು ಯುವವಾಹಿನಿ (ರಿ) ಕೂಳೂರು ಘಟಕದ ಆಶ್ರಯದಲ್ಲಿ ಕೂಳೂರು ನಾರಾಯಣಗುರು ಸಭಾಭವನದಲ್ಲಿ ವಿಶ್ವ ತಾಯಂದಿರ ದಿನದ ಪ್ರಯುಕ್ತ ಜರುಗಿದ ಮಾತೃ ವಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಸಭ್ಯತೆಯ ಶಿಷ್ಟಾಚಾರದ ಶಿಕ್ಷಣವೇ ಸಂಸ್ಕಾರವಾಗಿದೆ, ಸುಸಂಸ್ಕೃತಿಯನ್ನು ಒಂದು‌ ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಸ್ತಾಂತರಿಸುವ ಪ್ರಕಿಯೆಯೇ ಸಂಸ್ಕಾರವಾಗಿದೆ. ಈ ನಿಟ್ಟಿನಲ್ಲಿ ಯುವವಾಹಿನಿ ಕೂಳೂರು ಘಟಕದ ಮಾತೃ ವಂದನಾ‌ ಕಾರ್ಯಕ್ರಮ ಅತ್ಯಂತ ಅರ್ಥ ಪೂರ್ಣವಾಗಿದೆ. ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಯುವವಾಹಿನಿ (ರಿ) ಮಂಗಳೂರು ಘಟಕದ ಉಪಾಧ್ಯಕ್ಷರಾದ ಲಕ್ಷ್ಮಿ ನಾರಾಯಣ ಮಾತನಾಡಿ , ಕಾಲ ‌ಬದಲಾಗಬಹುದು ಮಕ್ಕಳು ಬದಲಾಗಬಹುದು ಆದರೆ ತಾಯಿ ಮತ್ತು ಆಕೆಯ ಪ್ರೀತಿ ಎಂದಿಗೂ‌ ಬದಲಾಗಲಾರದು ಅವಳ ಪ್ರೀತಿ ಎಂಬುದು ಎಂದೂ ಬತ್ತದ ಕಡಲಿದ್ದಂತೆ . ತನ್ನ ಮಗು ಅಂಗವಿಕಲನೇ ಆಗಿರಲಿ, ಬುದ್ಧಿಮಾಂದ್ಯನೇ ಆಗಿರಲಿ ಇಡೀ ಸಮಾಜವೇ ಆತನನ್ನು ತಿರಸ್ಕಾರ ದೃಷ್ಟಿಯಿಂದ ನೋಡಲಿ ಆದರೆ ತಾಯಿಯ ಮಮತೆ ಕಿಂಚಿತ್ತೂ ಕಡಿಮೆಯಾಗದು , ಅದಕ್ಕಾಗಿಯೇ ಅವಳು ದೇವರಿಗೆ ಸಮಾನಾಗಿ ನಿಂತಿದ್ದಾಳೆ ಎಂದರು.

ಯುವವಾಹಿನಿ ಕೂಳೂರು ಘಟಕದ ಸದಸ್ಯರು ತಮ್ಮ ತಾಯಂದಿರ ಪಾದ ಪೂಜೆ ನೆರವೇರಿಸಿ ತಾಯಂದಿರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.

ಶ್ರೀ ಗೋಕರ್ಣನಾಥ ಕ್ಷೇತ್ರದ ಅರ್ಚಕರಾದ ನವೀನ್ ಶಾಂತಿ ಹಾಗೂ ಪುಟ್ಟು ಶಾಂತಿ ವೈದಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷ ಪುಷ್ಪರಾಜ್ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷ ನವೀನ್ ಚಂದ್ರ ಹಾಗೂ ಸಲಹೆಗಾರರಾದ ನೇಮಿರಾಜ್ ಉಪಸ್ಥಿತರಿದ್ದರು.

ಕಾರ್ಯಕ್ರಮ ‌ಸಂಚಾಲಕರಾದ ತುಳಸಿ ಸುಜೀರ್ ವಂದಿಸಿದರು, ಮಾಜಿ ಅಧ್ಯಕ್ಷ ಸುಜಿತ್ ರಾಜ್ ಕಾರ್ಯಕ್ರಮ ನಿರೂಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!