ಹೆಜಮಾಡಿ : ವಿಜ್ಞಾನ ಮುಂದುವರಿದಂತೆ ಮಾನವೀಯ ಮೌಲ್ಯಗಳು ವ್ಯವಹಾರವಾಗಿ ಬದಲಾಗುತ್ತಿದೆ, ಪ್ರೀತಿ, ವಿಶ್ವಾಸ , ನಂಬಿಕೆ, ಗೌರವ, ಸ್ನೇಹ ಇಲ್ಲದಂತಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಮಾನವೀಯ ಮೌಲ್ಯಗಳ ಪ್ರೇರಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಯುವವಾಹಿನಿ ಕೆಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ತಿಳಿಸಿದರು.
ದಿನಾಂಕ10.06.2018 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ 2018-19 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು.
ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷ ಮಹೇಂದ್ರ ಸಾಲ್ಯಾನ್ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು. ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಜಿನರಾಜ್ ಬಂಗೇರ, ಸಸಿಹಿತ್ಲು ಬ್ರಹ್ಮಶ್ರೀ ನಾರಾಯಣಗುರು ಸಂಘದ ಅಧ್ಯಕ್ಷ ಪ್ರಕಾಶ್ ಕುಮಾರ್ ಬಿ.ಎನ್ ಯುವವಾಹಿನಿ (ರಿ) ಹೆಜಮಾಡಿ ಘಟಕದ ಸಲಹೆಗಾರ ಕಿಶೋರ್ ಕೆ.ಬಿಜೈ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು ಹಾಗು ಬಡ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. 2017-18 ನೇ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದ ಅಧ್ಯಕ್ಷ ಮಹೇಂದ್ರ ಸಾಲ್ಯಾನ್ ಇವರನ್ನು ಅಭಿನಂದಿಸಲಾಯಿತು.
2018-19 ನೇ ಸಾಲಿನ ಅಧ್ಯಕ್ಷ ರಾಗಿ ಅಧಿಕಾರ ಸ್ವೀಕರಿಸಿದ ದಿನೇಶ್ ಹೆಜಮಾಡಿ ಮಾತನಾಡಿ ಹಿರಿಯರ ಮಾರ್ಗದರ್ಶನ ಹಾಗೂ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸಲು ಶ್ರಮಿಸುವುದಾಗಿ ತಿಳಿಸಿದರು.
ಘಟಕದ ಮಾಜಿ ಅಧ್ಯಕ್ಷ ಪ್ರಭೋದ್ ಚಂದ್ರ ಪ್ರಸ್ತಾವನೆ ಮಾಡಿದರು, ಶಿವರಾಮ.ಜಿ.ಅಮೀನ್ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ನೂತನ ಕಾರ್ಯದರ್ಶಿ ಜಯಶ್ರೀ ಸದಾಶಿವ ಧನ್ಯವಾದ ನೀಡಿದರು. ಮನೋಹರ ಹೆಜಮಾಡಿ ಹಾಗೂ ಧೀರಜ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.