Yuvavahini

JUN 14, 2018 2.54 AM IST

ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಪದಗ್ರಹಣ

ಹಿರಿಯರ ಸತತ ಪ್ರಯತ್ನ, ದೂರದೃಷ್ಟಿ ಯುವವಾಹಿನಿಯ ಯಶಸ್ಸು : ಯಶವಂತ ಪೂಜಾರಿ

ಉಪ್ಪಿನಂಗಡಿ : ಸ್ವಸ್ಥ ಸಮಾಜದ ಕನಸನ್ನು ಕಂಡ ಯುವವಾಹಿನಿ ಯುವಕರು ಕಳೆದ 30 ವರ್ಷಗಳಿಂದ ಅವರದೇ ಆದ ವೈಯಕ್ತಿಕ ಬದುಕನ್ನು ಪಕ್ಕಕ್ಕಿಟ್ಟು ಸಾಮೂಹಿಕ ಬದುಕಿಗೆ ಪಣತೊಟ್ಡು ಹಬ್ಬದ ವಾತಾವರಣ ಒಂದು ಮನೆಗೆ ಸೀಮಿತವಾಗಿರದೆ ಇಡೀ ಸಮಾಜವೇ ಹಬ್ಬದ ವಾತಾವರಣದಿಂದ ಕೂಡಿರಬೇಕು ಎಂಬ ಯುವವಾಹಿನಿ ಯುವಕರ ಸತತ ಪರಿಶ್ರಮದ ಫಲವೇ ಯುವವಾಹಿನಿಯ ಯಶಸ್ಸು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು.

ಅವರು ದಿನಾಂಕ 14.06.2018 ನೇ ಗುರುವಾರ ಇಂದಿರಾ ವೆಂಕಟೇಶ್ ಸಭಾಂಗಣ, ಹಿರಿಯ ಪ್ರಾಥಮಿಕ ಶಾಲೆ ಉಪ್ಪಿನಂಗಡಿ ಇಲ್ಲಿ ಜರುಗಿದ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.

ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಜಯಂತ ನಡುಬೈಲು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು.

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅಧ್ಯಕ್ಷತೆ ವಹಿಸಿದ್ದರು ಪುತ್ತೂರು ಎ.ಪಿ.ಎಮ್.ಸಿ.ಉಪಾಧ್ಯಕ್ಷ ಬಾಲಕೃಷ್ಣ ಬಾಣಜಾಲು, ಪುತ್ತೂರು ಯುವಮೋರ್ಚಾದ ಅಧ್ಯಕ್ಷ ಸುನೀಲ್ ದಡ್ಡು, ಯುವವಾಹಿನಿ ಉಪ್ಪಿನಂಗಡಿ ಘಟಕದ ಸಲಹೆಗಾರರಾದ ವರದ್ರಾಜ್, ಕರುಣಾಕರ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

2017-18 ನೇ ಸಾಲಿನ ಶ್ರೇಷ್ಠ ಸಾಧನೆಗಾಗಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ದಂಪತಿಗಳನ್ನು ಉಪ್ಪಿನಂಗಡಿ ಘಟಕದ ವತಿಯಿಂದ ಅಭಿನಂದಿಸಲಾಯಿತು.

ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅಜಿತ್ ಕುಮಾರ್ ಪಾಲೇರಿ ಅಧ್ಯಕ್ಷ ಹುದ್ದೆಯನ್ನು ಪ್ರೀತಿಯಿಂದ ಸ್ವೀಕರಿಸಿದ್ದೇನೆ. ಮಾಜಿ ಅಧ್ಯಕ್ಷರು ಹಾಗೂ ಸಲಹೆಗಾರರು ಘಟಕದ ಬಹು ದೊಡ್ಡ ಆಸ್ತಿ ಈ ಆಸ್ತಿಯನ್ನು ‌ಜೋಪಾನವಾಗಿ ಕಾಪಾಡಿಕೊಂಡು ಬರುವ ಜವಾಬ್ದಾರಿ ತನ್ನ ಮೇಲಿದೆ, ಸರ್ವರ ಸಹಕಾರದ ಮೂಲಕ‌ ಘಟಕವನ್ನು ಯಶಸ್ವಿಯಾಗಿ ಮುನ್ನಡೆಸುವ ಆತ್ಮವಿಶ್ವಾಸ ತನ್ನಲ್ಲಿದೆ ಎಂದರು.

ಡಾ.ರಾಜಾರಾಮ್ ಕೆ.ವಿ. ಪ್ರಾಸ್ತಾವನೆ ಮಾಡಿದರು, ಕಾರ್ಯದರ್ಶಿ ಮನೋಜ್ ಎನ್.ಸಾಲ್ಯಾನ್ ವಾರ್ಷಿಕ ವರದಿ ಮಂಡಿಸಿದರು, ಮಾಜಿ ಅಧ್ಯಕ್ಷ ಡಾ.ಸದಾನಂದ ಕುಂದರ್ ಸ್ವಾಗತಿಸಿದರು. ನೂತನ ಕಾರ್ಯದರ್ಶಿ ಅನಿಲ್ ಕುಮಾರ್ ದಡ್ಡು ವಂದಿಸಿದರು.ಮಾಜಿ‌ ಅಧ್ಯಕ್ಷ ಲೋಕೇಶ್ ಬೆತ್ತೋಡಿ ಕಾರ್ಯಕ್ರಮ ನಿರೂಪಿಸಿದರು.

2 thoughts on “ಹಿರಿಯರ ಸತತ ಪ್ರಯತ್ನ, ದೂರದೃಷ್ಟಿ ಯುವವಾಹಿನಿಯ ಯಶಸ್ಸು : ಯಶವಂತ ಪೂಜಾರಿ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!