ಉಡುಪಿ : ಸದೃಡ ಸಮಾಜದ ನಿರ್ಮಾಣ ಯುವ ಸಮುದಾಯದ ಮುಖ್ಯ ಧ್ಯೇಯವಾಗಿರಬೇಕು, ಈ ನಿಟ್ಟಿನಲ್ಲಿ ಯುವವಾಹಿನಿ ಉಡುಪಿ ಘಟಕದ ಕಾರ್ಯ ಶ್ಲಾಘನೀಯ ಎಂದು ವಿದಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ದಿನಾಂಕ 15.07.2018 ರಂದು ಉಡುಪಿ ಬಲಾಯಿಪಾದೆ ಯುವವಾಹಿನಿ ಸಭಾಂಗಣದಲ್ಲಿ ನಡೆದ ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಜರುಗಿದ ವಿದ್ಯಾನಿಧಿ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಭಾಗವಹಿಸಿ ಮಾತನಾಡಿದರು.
ಉಡುಪಿಯ ಎಡಿಷನಲ್ ಎಸ್ಪಿ ಕುಮಾರ ಚಂದ್ರ ಮಾತನಾಡಿ ಐಎಎಸ್, ಐಪಿಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆ ವಿದ್ಯಾರ್ಥಿಗಳು ಒಲವು ತೋರಿಸಬೇಕು ಎಂದರು.
ಇಂದು ವಿದ್ಯಾನಿಧಿ ಸ್ವೀಕರಿಸಿದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಏರಿದಾಗ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಹಾಯ ಸಹಕಾರ ನೀಡಬೇಕು ಎಂದು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷ ಅಶೋಕ್ ಕೋಟ್ಯಾನ್ ತಿಳಿಸಿದರು.
ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ಜಯಂತ ನಡುಬೈಲು, ಮಣಿಪಾಲ ಬಿಗ್ ಬಾಸ್ ಹೋಟೆಲ್ ಮಾಲಕ ದೇವು ಪೂಜಾರಿ, ನಿತ್ಯಾನಂದ ಹೋಟೆಲ್ ಮಾಲಕ ಸುರೇಂದ್ರ ಕೋಟ್ಯಾನ್, ಉದ್ಯಮಿ ರಂಜನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಪ್ರತಿಭಾವಂತ ವಿದ್ಯಾರ್ಥಿಗಳಾದ ನವೀನ್ ಮಾಬಿಯಾನ್, ಆಷಿಕಾ ಸನಿಲ್, ಹಾಗೂ ರಾಜೇಶ್ವರಿ ಸುವರ್ಣ ಇವರನ್ನು ಅಭಿನಂದಿಸಲಾಯಿತು.
ವಿದ್ಯಾನಿಧಿ ನಿರ್ದೇಶಕ ರಮೇಶ್ ಕುಮಾರ್, ಮಹಿಳಾ ಸಂಘಟನಾ ನಿರ್ದೇಶಕಿ ವನಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಶಸ್ತಿ ವಿಜೇತ ಶ್ರೇಯಸ್ ಕೋಟ್ಯಾನ್ ತಮ್ಮ ಅಮೋಘ ಭಾಷಣದಿಂದ ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡಿದರು.
ಕಾರ್ಯದರ್ಶಿ ಪ್ರವೀಣ್ ಪೂಜಾರಿ ವಂದಿಸಿದರು. ಮಾಜಿ ಅಧ್ಯಕ್ಷ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು