ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಾಮಾಜಿಕ ಹಾಗೂ ಬ್ಯಾಕಿಂಗ್ ಕ್ಸೇತ್ರದಲ್ಲಿನ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ವಾರ್ಷಿಕ ಸಮಾವೇಶದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ , ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಜಯಮಾಲ ಹಾಗೂ ವಿಧಾನ ಪರಿಷತ್ತಿನ ಪ್ರತಿಪಕ್ಸದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿಯವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಅವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ ಸುವರ್ಣ, ಕುದ್ರೋಳಿ ಶ್ರೀಗೋಕರ್ಣನಾಥ ಕ್ಸೇತ್ರದ ಅಧ್ಯಕ್ಷ ಹೆಚ್.ಎಸ್. ಸಾಯಿರಾಮ್, ದಿವಾಕರ್ ಕನ್‍ಸ್ಟ್ರಕ್ಸನ್‍ನ ಮಾಲಕ ದಿವಾಕರ್, ಖ್ಯಾತ ರಂಗ ಭೂಮಿ ಹಾಗೂ ಚಲನಚಿತ್ರ ನಟ ಅರವಿಂದ ಬೋಳಾರ್, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಸಂಚಾಲಕ ನವೀನ್ ಚಂದ್ರ ಡಿ.ಸುವರ್ಣ, ನಿರ್ದೇಶಕ ಹರೀಶ್ ಕೆ.ಪೂಜಾರಿ ಹಾಗೂ ಯುವವಾಹಿನಿಯ 31 ಘಟಕಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು..
ಕಳೆದ ಬಾರಿ 63ನೇ ಸಹಕಾರ ಸಪ್ತಾಹದಲ್ಲಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ, ದಕ್ಸಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿಯನ್ನು ಪಡೆದು, ಈ ಬಾರಿ ಸಾಧನಾ ಶ್ರೇಷ್ಠ ಪ್ರಶಸ್ತಿಯನ್ನು ಪಡೆದಿರುವುದು ಸಂಘದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಸನ್ಮಾನ ಸಮಾರಂಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ, ನಿರ್ದೇಶಕರಾದ ವಾಮನ್ ಕೆ, ಸದಾನಂದ ಡಿ.ಎಸ್, ರಾಮ್‍ದಾಸ್ ಮರೋಳಿ, ಪರಮೇಶ್ವರ ಜಿ ಪೂಜಾರಿ, ಆನಂದ ಎಸ್ ಕೊಂಡಾಣ, ಸುರೇಶ್ ವಿ ಪೂಜಾರಿ, ಸೀತಾರಾಮ್ ಎನ್ , ರಾಮನಾಥ್ ಸನಿಲ್, ಚಂದ್ರಹಾಸ್ ಮರೋಳಿ, ಸುಜಯ ಹೇಮಚಂದ್ರ ,ಕುಶಲಾಕ್ಸಿ ಯಶವಂತ್, ಮುಖ್ಯಕಾರ್ಯನೀರ್ವಹಣಾಧಿಕಾರಿ ಸೌಮ್ಯ ವಿಜಯ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.