Yuvavahini

NOV 20, 2016 11.21 AM IST

ಯುವವಾಹಿನಿ(ರಿ) ಕೇಂದ್ರ ಸಮಿತಿಮಂಗಳೂರು * ಯುವವಾಹಿನಿ(ರಿ) ಬೆಳ್ತಂಗಡಿ ಘಟಕ

’ಡೆನ್ನನ ಡೆನ್ನನ’ ಯುವವಾಹಿನಿ ಅಂತರ್‌ಘಟಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

ನ. 20 ರಂದು ಬೆಳ್ತಂಗಡಿ ಆಶಾ ಸಾಲಿಯಾನ್ ಕಲ್ಯಾಣ ಮಂಟಪದ ದಿ| ಶ್ರೀಮತಿ ಮುತ್ತಕ್ಕೆ ಮತ್ತು ದಿ| ಕೋಟ್ಯಪ್ಪ ಪೂಜಾರಿ ವರ್ಪಾಳೆ ಸಭಾ ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿಯ ಅಂತರ್‌ಘಟಕ ಸಾಂಸ್ಕೃತಿಕ ವೈಭವ ’ಡೆನ್ನನ ಡೆನ್ನನ’ ಎಂಬ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ತೆಂಕುತಿಟ್ಟಿನ ಯುವ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಉದ್ಘಾಟಿಸಿ ಮಾತನಾಡುತ್ತಾ, ಮನುಷ್ಯ ಜನ್ಮದಲ್ಲಿ ಹುಟ್ಟಿ ಹೇಗೆ ನಡೆಯಬೇಕು ಎಂಬ ಮಾರ್ಗದರ್ಶನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ ಹೇಗೆ ಬದುಕಬೇಕು ಎಂದು ಇತಿಹಾಸಕ್ಕೆ ಅಡಿಪಾಯ ಹಾಕಿಕೊಟ್ಟ ಕೋಟಿ-ಚೆನ್ನಯರ ನಾಡಾದ ತುಳುನಾಡಿನ ಸಂಸ್ಕೃತಿ-ಸಂಸ್ಕಾರವನ್ನು ಉಳಿಸಿ-ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಪೂರಕವಾಗಿದೆ ಎಂದು ಹೇಳಿದರು. ಯುವ ಸಮುದಾಯವನ್ನು ಸಂಘಟಿಸಿ, ಸಮಾಜವನ್ನು ಉತ್ತಮ ದಾರಿಗೆ ಕೊಂಡೊಯ್ಯುವಲ್ಲಿ ಯುವವಾಹಿನಿ ಹಮ್ಮಿಕೊಂಡ ಈ ಕಾರ್ಯಕ್ರಮ ಇನ್ನು ಮುಂದೆಯೂ ನಿರಂತರವಾಗಿ ನಡೆಯಲಿ, ಯುವ ಪ್ರತಿಭೆಗಳಿಗೆ ಅವಕಾಶ ದೊರೆಯಲಿ ಎಂದು ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರು ವಿವಿಧ ಕ್ಷೇತ್ರಗಳ ಬಿಲ್ಲವ ಸಮಾಜದ ಸಾಧಕ ಕಲಾವಿದರನ್ನು ಸನ್ಮಾನಿಸಿ, ಮಾತನಾಡುತ್ತಾ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಬಿಲ್ಲವ ಕಲಾವಿದರಿದ್ದಾರೆ. ಆದರೂ ತೆರೆಮರೆಯಲ್ಲಿ ಬೆಳಕಿಗೆ ಬಾರದ ಇನ್ನೂ ಅನೇಕ ಶ್ರೇಷ್ಠ ಕಲಾವಿದರಿದ್ದು, ಅವರಿಗೆ ಯುವವಾಹಿನಿಯಂತಹ ಸಂಘಟನೆಗಳು ಅವಕಾಶ ನಿರ್ಮಿಸಿ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಪೂರ್ವಾಧ್ಯಕ್ಷ ಕೆ. ವಸಂತ ಸಾಲಿಯಾನ್ ರವರು ಮಾತನಾಡಿ ಯುವಜನತೆಯಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಹೊಸ ಚಿಂತನೆಯೊಂದಿಗೆ ಸದೃಢ ಯುವ ಸಮಾಜದ ಕಡೆಗೆ ತರುವಲ್ಲಿ ಯುವವಾಹಿನಿಯು ಕಳೆದ ಹಲವು ವರ್ಷದಿಂದ ಶ್ರಮಿಸುತ್ತಿದೆ. ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಯುವಕರು ಇನ್ನಷ್ಟು ತಮ್ಮ-ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಪದ್ಮನಾಭ ಮರೋಳಿ ವಹಿಸಿ ಮಾತನಾಡಿ ಕಳೆದ ೩ ವರ್ಷದ ಹಿಂದೆ ಬೆಳ್ತಂಗಡಿಯಲ್ಲಿ ಯುವವಾಹಿನಿ ಘಟಕವನ್ನು ಪ್ರಾರಂಭಿಸಿ ಸಮಾಜದ ಏಳಿಗೆಗಾಗಿ ಯುವನಾಯಕರನ್ನು ಸೃಷ್ಟಿಸುವ ಕೆಲಸವನ್ನು ಬೆಳ್ತಂಗಡಿ ಘಟಕವು ಮಾಡುತ್ತಿದೆ ಎಂದರು.

ನಾರಾವಿ ಕ್ಷೇತ್ರದ ಜಿ.ಪಂ. ಸದಸ್ಯ ಧರಣೇಂದ್ರ ಕುಮಾರ್, ಉಜಿರೆ ಕ್ಷೇತ್ರದ ಜಿ.ಪಂ. ಸದಸ್ಯೆ ನಮಿತಾ, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಪೂರ್ವಾಧ್ಯಕ್ಷ ಶೈಲೇಶ್ ಕುಮಾರ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಚಿದಾನಂದ ಇಡ್ಯಾ, ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಬೆಳ್ತಂಗಡಿ ಘಟಕದ ಸ್ಥಾಪಕಾಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ, ಸಾಂಸ್ಕೃತಿಕ ಸಮ್ಮಿಲನದ ಪ್ರಧಾನ ಸಂಚಾಲಕ ಸಂಪತ್ ಬಿ. ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.

’ಡೆನ್ನನ ಡೆನ್ನನ’ ಕಾರ್ಯಕ್ರಮವು ಯುವವಾಹಿನಿಯ 19 ಘಟಕಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಕ್ಷೇತ್ರದ ಸಾಧಕರಿಗೆ ಸಾಂಸ್ಕೃತಿಕ ರಂಗ ಸಮ್ಮಾನ, ಯುವ ಪ್ರತಿಭೆಗಳಿಗೆ ಪುರಸ್ಕಾರ ಹಾಗೂ ಸಾಂಸ್ಕೃತಿಕ ಸೇವೆಗೈಯುತ್ತಿರುವ ಸಂಸ್ಥೆಗಳಿಗೆ ಗೌರವ, ದಿನವಿಡೀ ಯುವ ಪ್ರತಿಭೆಗಳ ಪ್ರದರ್ಶನ ಸಾಂಸ್ಕೃತಿಕ ಲೋಕದ ಸಾಕ್ಷಾತ್ಕಾರಕ್ಕೆ ನಾಂದಿಯಾಯಿತು. ಮಾತ್ರವಲ್ಲದೆ ಇದು ಸಂಸ್ಕೃತಿ ಸಂಪ್ರದಾಯವನ್ನು ಪ್ರತಿಬಿಂಬಿಸುವ ವೇದಿಕೆಯಾಯಿತು.

ರಾಕೇಶ್ ಕುಮಾರ್ ಮೂಡುಕೋಡಿ ಸ್ವಾಗತಿಸಿ, ಚಂದ್ರಹಾಸ ಬಳಂಜ, ಸ್ಮಿತೇಶ್ ಬಾರ್ಯ, ಸುಧಾಮಣಿ ಕಾರ್ಯಕ್ರಮ ನಿರೂಪಿಸಿ, ಅಶ್ವಥ್ ಧನ್ಯವಾದವಿತ್ತರು.

One thought on “’ಡೆನ್ನನ ಡೆನ್ನನ’ ಯುವವಾಹಿನಿ ಅಂತರ್‌ಘಟಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!