Yuvavahini

AUG 07, 2018 9.20 AM IST

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ

ಅಭಿನಂದನಾ ಸಮಾರಂಭ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ ಅಭೂತಪೂರ್ವ ಯಶಸ್ಸು ಗಳಿಸಿತು.
ಈ ನಿಟ್ಟಿನಲ್ಲಿ ಸಮಾರಂಭದ ಯಶಸ್ಸಿಗೆ ಸಹಕಾರ ನೀಡಿದವರಿಗೆ ಅಭಿನಂದನಾ ಕಾರ್ಯಕ್ರಮ ದಿನಾಂಕ 07.08.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು.

ಸಮಾವೇಶ ನಿರ್ದೇಶಕ ಹರೀಶ್ ಕೆ.ಪೂಜಾರಿ, ಸಮಾವೇಶ ಸಂಚಾಲಕ ನವೀನ್ ಚಂದ್ರ, ಕಾರ್ಯಕ್ರಮ ನಿರೂಪಿಸಿದ ದಿನೇಶ್ ಸುವರ್ಣ, ಮಂಗಳೂರು ಘಟಕದ ಕೋಶಾಧಿಕಾರಿ ಗಣೇಶ್ ಸುವರ್ಣ, ಸತೀಶ್ ಕುಮಾರ್ ಎ, ಮತ್ತಿತರರ ಸೇವೆಯನ್ನು ಸ್ಮರಿಸಿ ಅಭಿನಂದಿಸಲಾಯಿತು.

ಸಮಾವೇಶಕ್ಕೆ ಅತೀ ಹೆಚ್ಚಿನ ಆರ್ಥಿಕ ಸಹಕಾರ ನೀಡಿ ಮಂಗಳೂರು ಘಟಕದ ಆರ್ಥಿಕ ಹೊರೆಯನ್ನು ಕಡಿಮೆಗೊಳಿಸಿದ ದೇವೇಂದ್ರ ಕೋಟ್ಯಾನ್ ಲೋಲಾಕ್ಷಿ ದಂಪತಿಗಳು ಹಾಗೂ ಶ್ರೀದೇವಿ ಕ್ತಾಟರರ್ಸ್ ಮಾಲಕ ಬಾಲಕೃಷ್ಣ ಕುಕ್ಯಾನ್ ಇವರುಗಳನ್ನು ಶಾಲು ಹೊದಿಸಿ ಅಭಿನಂದಿಸಲಾಯಿತು.

ವಿವಿಧ ಕೆಲಸಕಾರ್ಯಗಳ ಜವಾಬ್ದಾರಿಯನ್ನು ಯಶಸ್ವೀಯಾಗಿ ನಿರ್ವಹಿಸಿದ ಬಜಪೆ ಘಟಕ, ಕೂಳೂರು ಘಟಕ, ಹಳೆಯಂಗಡಿ ಘಟಕ, ಸುರತ್ಕಲ್ ಘಟಕ, ಪಣಂಬೂರು ಘಟಕ, ಮಂಗಳೂರು ಮಹಿಳಾ ಘಟಕ, ಶಕ್ತಿನಗರ ಘಟಕ, ಕೆಂಜಾರು ಕರಂಬಾರು ಘಟಕ , ಕಂಕನಾಡಿ ಘಟಕ, ಕೊಲ್ಯ ಘಟಕಗಳನ್ನು ಅಭಿನಂದಿಸಲಾಯಿತು.

ಸರ್ವರ ಒತ್ತಾಸೆಯಂತೆ ಸಮಾವೇಶದ ಯಶಸ್ಸಿನ ರೂವಾರಿ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಯಶಸ್ವೀ ಅಧ್ಯಕ್ಷ ಯಶವಂತ ಪೂಜಾರಿ, ಕುಶಾಲಾಕ್ಷಿ ದಂಪತಿಗಳಿಗೆ ಫಲಪುಷ್ಪ ನೀಡಿ ಹೂಹಾರ ಹಾಕಿ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು

ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ನಿಯೋಜಿತ ಅಧ್ಯಕ್ಷ ಜಯಂತ ನಡುಬೈಲು, ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷ ನವೀನ್ ಚಂದ್ರ, ಕಾರ್ಯದರ್ಶಿ ರಾಜೇಶ್ ಅಮೀನ್ , ನಿಕಟಪೂರ್ವ ಅಧ್ಯಕ್ಷ ರವೀಶ್ ಕುಮಾರ್ ಉಪಾಧ್ಯಕ್ಷ ಲಕ್ಷ್ಮೀನಾರಾಯಣ್ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!