Yuvavahini

JUL 29, 2018 3.21 PM IST

ಯುವವಾಹಿನಿ ಕಾಪು ಘಟಕದ ವತಿಯಿಂದ ಆಟಿಡೊಂಜಿ ದಿನ

ತುಳುನಾಡ ಸಂಪ್ರಧಾಯ, ಪದ್ಧತಿ, ಆಚರಣೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಕೊಡೋಣ : ಸುಧಾಕರ್ ಅಮೀನ್

ಕಾಪು  : ತುಳುವರ ಆಚರಣೆ, ಸಂಪ್ರಧಾಯ ಮತ್ತು ಪದ್ಧತಿ ಗಳು ಸರ್ವರಿಗೂ ಅನುಕರಣೀವಾಗಿದೆ. ಅದನ್ನು ಮತ್ತಷ್ಟು ಗಟ್ಟಿಗೊಳಿಸಿ ಮುಂದಿನ ಪೀಳಿಗೆಗೂ ಉಳಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧಾರ್ಮಿಕ ಚಿಂತಕ ಸುಧಾಕರ ಡಿ. ಅಮೀನ್ ಹೇಳಿದರು.

ಯುವವಾಹಿನಿ(ರಿ) ಕಾಪು ಘಟಕದ ವತಿಯಿಂದ ದಿನಾಂಕ 29.08.2018 ರಂದು ಕಾಪು ಬಿಲ್ಲವರ ಸಹಾಯಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಆಟಿ ತಿಂಗಳನ್ನು ಅನಿಷ್ಟದ ತಿಂಗಳು ಎಂಬ ಅರ್ಥವನ್ನು ಕಲ್ಪಿಸಲಾಗುತ್ತಿದೆ. ಆದರೆ ಇದು ಅನಿಷ್ಡದ ತಿಂಗಳು ಅಲ್ಲವೇ ಅಲ್ಲ. ಆಟಿ ತಿಂಗಳಲ್ಲೇ ನಾವು ಅತ್ಯಂತ ಪೂಜನೀಯವಾಗಿ ಆಚರಿಸುವ ನಾಗರಪಂಚಮಿ ನಡೆಯಲಿದ್ದು, ಅದರೊಂದಿಗೆ ಹಬ್ಬಗಳಿಗೆ ಚಾಲನೆ ಕೊಡಲಾಗುತ್ತದೆ ಎಂದರು.

ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ಜಿಲ್ಲಾ ಬಿಲ್ಲವರ ಪರಿಷತ್ ನ ಮಹಿಳಾ ಅಧ್ಯಕ್ಷೆ ಆಶಾ ಅಂಚನ್ ಸಾಂಕೇತಿಕವಾಗಿ ಚೆನ್ನಮಣೆ ಆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಲೋಕೇಶ್ ಅವರನ್ನು ಸಮ್ಮಾನಿಸಿ, ಗೌರವಿಸಲಾಯಿತು. ಯುವವಾಹಿನಿ ಸದಸ್ಯರು ಮನೆಯಲ್ಲೇ ತಯಾರಿಸಿ ತಂದ ತಿಂಡಿ – ತಿನಿಸುಗಳೊಂದಿಗೆ ಊಟೋಪಚಾರ ನಡೆಸಲಾಯಿತು.

ಯುವವಾಹಿನಿ ಕಾಪು ಘಟಕದ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳ್ ಅಧ್ಯಕ್ಷತೆ ವಹಿಸಿದ್ದರು. ಕಾಪು ಬಿಲ್ಲವರ ಸಂಘದ ಅಧ್ಯಕ್ಷ ವಿಕ್ರಂ ಕಾಪು, ಮಾಜಿ ಅಧ್ಯಕ್ಷ ಮಾಧವ ಆರ್. ಪಾಲನ್ ಅತಿಥಿಗಳಾಗಿ ಭಾಗವಹಿಸಿದ್ದರು.

ಐತಪ್ಪ ಕೋಟ್ಯಾನ್, ಸೋಮನಾಥ ಸಾಲ್ಯಾನ್, ಸುಕೇಶ್ ಎರ್ಮಾಳ್, ಶಶಿಧರ್ ಸುವರ್ಣ, ಯೋಗೀಶ್ ಕೋಟ್ಯಾನ್ ಉಪಸ್ಥಿತರಿದ್ದರು.

ಯುವವಾಹಿನಿ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳ್ ಸ್ವಾಗತಿಸಿದರು. ಪದಾಧಿಕಾರಿಗಳಾದ ನಾಗೇಶ್ ಸುವರ್ಣ ವಂದಿಸಿದರು‌. ಸುಧಾಕರ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!