ಕಂಕನಾಡಿ : ದಿನಾಂಕ 26-08-2018ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತಿ ಪ್ರಯುಕ್ತ ಸ್ಥಳೀಯ ಶಾಲಾ ಕಾಲೇಜು ಮಕ್ಕಳಿಗೆ ರಂಗೋಲಿ ಸ್ಪರ್ಧೆ,ಕಸದಿಂದ ರಸ ಎಂಬ ಸ್ಪರ್ಧೆ ಹಾಗೂ ಘಟಕದ ಸದಸ್ಯರಿಗೆ ಆಟೋಟ ಸ್ಪರ್ಧೆ ಯನ್ನು ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 40 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧಾ ಕಾರ್ಯಕ್ರಮಕ್ಕೆ ಘಟಕದ ಸಲಹೆಗಾರರಾದ ಶ್ರೀಯುತ ಜಿತೇಂದ್ರ.ಜೆ. ಸುವರ್ಣರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ಸಮಾರೋಪ ಸಮಾರಂಭವು ಮಧ್ಯಾಹ್ನ 1ಗಂಟೆ ಗೆ ನಡೆಯಿತು. ತೀರ್ಪುಗಾರರಾಗಿ ಮೂವರು ಶಾಲಾ ಶಿಕ್ಷಕಿಯರಾದ ಶ್ರೀಮತಿ ಬಬಿತಾ, ಶ್ರೀಮತಿ ಶರ್ಮಿಳಾ ಹಾಗೂ ಶ್ರೀಮತಿ ವಿನಯರವರು ಆಗಮಿಸಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಮಾಣ ಪತ್ರ ನೀಡಲಾಯಿತು.