Yuvavahini

AUG 19, 2018 8.24 AM IST

ಯುವವಾಹಿನಿ (ರಿ) ಕಟಪಾಡಿ ಘಟಕದ ಪದಗ್ರಹಣ

ಮಾತು ಕೃತಿಯೊಡನೆ ಸೇರಿದಾಗ ಮಾತ್ರ ಆಡಿದ ಮಾತಿಗೆ ಬೆಲೆ : ನಡುಬೈಲು

ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳು ಪದಗ್ರಹಣ ಸಮಾರಂಭವು ದಿನಾಂಕ 19.08.2018 ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಅಶೋಕ್ ಎಮ್.ಸುವರ್ಣ ಸಮಾರಂಭ ಉದ್ಘಾಟಿಸಿದರು.
2018-19 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದ ಯುವವಾಹಿನಿ ಕೇಂದ್ರ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿ ಮನುಷ್ಯರಲ್ಲಿ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರ ಸಮಯ ಪ್ರಜ್ಞೆ ,ಪರೋಪಕಾರ ದಂತಹ ಗುಣಗಳು ಮೇಳೈಸಿದಾಗ ಸ್ವಸ್ಥ ಸಮಾಜದ ನಿರ್ಮಾಣ ಸಾಧ್ಯವಾಗುತ್ತದೆ, ಮಾತು ಕೃತಿಯೊಡನೆ ಸೇರಿದಾಗ ಮಾತ್ರ ಆಡಿದ ಮಾತು ಬೆಲೆ ಕಂಡುಕೊಳ್ಳುತ್ತದೆ. ಇವೆಲ್ಲವನ್ನೂ ಮೈಗೂಡಿಸಿಕೊಂಡು ಕಾರ್ಯ ಪ್ರವೃತ್ತರಾಗುವಂತೆ ಯುವ ಜನತೆಗೆ ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ನಿಕಟಪೂರ್ವ ಅಧ್ಯಕ್ಷ ಮಹೇಶ್.ಎನ್.ಅಂಚನ್ ನೂತನ ಅಧ್ಯಕ್ಷ ರಿತೇಶ್ ಬಿ.ಕೋಟ್ಯಾನ್ ಗೆ ಅಧಿಕಾರ ಹಸ್ತಾಂತರ ಮಾಡಿದರು.

ಮುಖ್ಯ ಅತಿಥಿಯಾಗಿ ಕ್ಷೇತ್ರಾಡಳಿತ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಚಂದ್ರಶೇಖರ ಸುವರ್ಣ, ಸಂಘಟನಾ ಕಾರ್ಯದರ್ಶಿ ರಮೇಶ್ ಕೋಟ್ಯಾನ್, ಯುವವಾಹಿನಿ ಕಟಪಾಡಿ ಘಟಕದ ನೂತನ ಕಾರ್ಯದರ್ಶಿ ಕಾರ್ತಿಕ್.ಡಿ.ಕೆ ವೇದಿಕೆಯಲ್ಲಿದ್ದರು. ನಿಕಟಪೂರ್ವ ಕಾರ್ಯದರ್ಶಿ ನಿತಿನ್ ಅಂಬಾಡಿ ವರದಿ ವಾಚಿಸಿದರು. .ಎನ್.ಜಿ.ಸುಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!