Yuvavahini

AUG 27, 2018 6.00 PM IST

ಯುವವಾಹಿನಿ (ರಿ) ಕಂಕನಾಡಿ ಘಟಕದಿಂದ

ಗುರುಸ್ಮರಣೆ ಹಾಗೂ ಪ್ರತಿಭಾ ಪುರಸ್ಕಾರ,

ಕಂಕನಾಡಿ :  ಅಜ್ಞಾನ ವೆಂಬ ಕತ್ತಲನ್ನು ಹೋಗಲಾಡಿಸಿ ಸುಜ್ಞಾನವನ್ನು ನೀಡುವುದೇ ನಿಜವಾದ ಜ್ಞಾನ. ಅಂತಹ ಜ್ಞಾನವನ್ನು ಜಗತ್ತಿಗೆ ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಸಂದೇಶ, ತತ್ವಗಳು ನಮಗೆ ಸ್ಫೂರ್ತಿ ದಾಯಕ. ಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸಿ ಮಾನವ ಕುಲವನ್ನು ಉನ್ನತಿ ಯೆಡೆಗೆ ಸಾಗಿಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸ ದೊಂದಿಗೆ ಮಾನವ ಮೌಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಾಲಿಗ್ರಾಮ ಡಿವೈನ್ ಪಾರ್ಕ್ ಟ್ರಸ್ಟ್(ರಿ) ಇದರ ಪದಾಧಿಕಾರಿ ಡಿ.ಎಸ್. ಯಶವಂತ್ ತಿಳಿಸಿದರು.
ಅವರು ದಿನಾಂಕ 27-08-2018ರ ಸೋಮವಾರ ದಂದು ಯುವವಾಹಿನಿ(ರಿ.) ಕಂಕನಾಡಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತಿ ಪ್ರಯುಕ್ತ ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಆಯೋಜಿಸಿದ್ದ “ಗುರುಸ್ಮರಣೆ ಹಾಗೂ ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ” ಕಾರ್ಯಕ್ರಮದಲ್ಲಿ ಗುರುಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ದೈವಸ್ಥಾನದ ಅಧ್ಯಕ್ಷರಾದ ಶ್ರೀನಿವಾಸ ಬಂಗೇರರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯುವವಾಹಿನಿಯ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ನಮಿತಾ ಶ್ಯಾಮ್, ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. .ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷ ರಾದ ಭವಿತ್ ರಾಜ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. . ಘ ಘಟಕಕ್ಕೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುತ್ತಿರುವ ಸಲಹೆಗಾರರಾದ ಅಶೋಕ್ ಕುಮಾರ್, ಜಿತೇಂದ್ರ ಸುವರ್ಣ, ಮಂಗಳೂರು ಘಟಕದ ಮಾಜಿ ಅಧ್ಯಕ್ಷರುಗಳಾದ ಹರೀಶ್. ಕೆ.ಪೂಜಾರಿ ಹಾಗೂ ರಾಕೇಶ್ ಕುಮಾರ್ ದಂಪತಿಗಳಿಗೆ ಗೌರವಾರ್ಪಣೆ ಮಾಡಲಾಯಿತು. ಹಾಗೂ ಎಸ್. ಎಸ್. ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಅತ್ಯುನ್ನತ ಶ್ರೇಣಿ ಯಲ್ಲಿ ಪಾಸಾದ 6 ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸ್ಥಳೀಯ ಶಾಲಾ ಕಾಲೇಜು ಮಕ್ಕಳಿಗೆ ಆಯೋಜಿಸಿದ್ದ ರಂಗೋಲಿ ಸ್ಪರ್ಧೆ,ಕಸದಿಂದ ರಸ ಎಂಬ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಅಧ್ಯಕ್ಷ ಭವಿತ್ ರಾಜ್ ಸ್ವಾಗತಿಸಿದರು. ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಲೋಕೇಶ್ ಅಮೀನ್ ರವರು ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!