Yuvavahini

AUG 27, 2018 4.16 AM IST

ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ನಾರಾಯಣ ಗುರು ಜಯಂತಿಯ ಪ್ರಯುಕ್ತ

ವೃದ್ಧಾಶ್ರಮದಲ್ಲಿ ಒಂದು ದಿನ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 27/08/2018 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಪ್ರಯುಕ್ತ 32 ಸದಸ್ಯರನ್ನೊಳಗೊಂಡ ತಂಡವು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಮಂಗಳೂರು ನಗರ ಪ್ರದೇಶದಲ್ಲಿರುವ ‘ವಾತ್ಸಲ್ಯಧಾಮ’ ವೃದ್ಧಾಶ್ರಮಕ್ಕೆ ಭೇಟಿ ನೀಡಲಾಯಿತು.

ಆಶ್ರಮದಲ್ಲಿದ್ದ ೩೫ ವೃದ್ದರ ಜತೆ ಸೇರಿ ಯುವವಾಹಿನಿ ಕೂಳೂರು ಘಟಕದ ಸದಸ್ಯರು ಹಾಡು, ಆಟೋಟ, ಮನರಂಜನಾ ಕಾರ್ಯಕ್ರಮಗಳ ಮೂಲಕ ಆಶ್ರಮವಾಸಿಗಳಿಗೆ ಸ್ಪೂರ್ತಿ ತುಂಬಿದರು. ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜನ್ಮದಿನದಂದು ಅವರ ಮುಖ್ಯ ತತ್ತ್ವವಾದ ‘ಒಂದೇ ಜಾತಿ ಒಂದೇ ಮತ ಒಂದೇ ದೇವರು’ ಸೇರಿದಂತೆ ಗುರುವರ್ಯರ ಸಂದೇಶಗಳನ್ನು ತಿಳಿಸಲಾಯಿತು. ಗುರು ಜಯಂತಿಯ ಪ್ರಯುಕ್ತ ಎಲ್ಲಾ ಸದಸ್ಯರು ಒಟ್ಟು ಸೇರಿ ಅವರಿಗೆ ರಾತ್ರಿ ಊಟ, ತಿಂಡಿ ತಿನಿಸು ,ಹಣ್ಣು ಹಂಪಲುಗಳನ್ನು ಅವರಿಗೆ ನೀಡಲಾಯಿತು

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಕಾರ್ಯದರ್ಶಿ ಪವಿತ್ರ ಅಂಚನ್ ಉಪಸ್ಥಿತರಿದ್ದರು . ಪ್ರತೀಶ್ ಗೌರೀಶ್ ಕಾರ್ಯಕ್ರಮ ನಿರೂಪಿಸಿದರು . ಕಾರ್ಯಕ್ರಮ ಸಂಚಾಲಕರಾದ ರೇಣುಕಾ ಪ್ರಸಾದ್ ಆಶ್ರಮದ ಆಡಳಿತ ಮಂಡಳಿ ಹಾಗೂ ಘಟಕದ ಎಲ್ಲಾ ಸದಸ್ಯರಿಗೆ ಧನ್ಯವಾದ ಸಲ್ಲಿಸಿದರು .

One thought on “ವೃದ್ಧಾಶ್ರಮದಲ್ಲಿ ಒಂದು ದಿನ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!